ದೊಡ್ಡಬಳ್ಳಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2006-07ನೇ ಸಾಲಿನಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಭಾಗ್ಯಲಕ್ಷ್ಮೀ ಯೋಜನೆಗೆ (Bhagyalakshmi Yojane) ನೋಂದಣಿಯಾಗಿರುವ ಫಲಾನುಭವಿಯ ಪರಿಪಕ್ವ ಮೊತ್ತವನ್ನು ಪಡೆದು ತಂತ್ರಾಂಶದಲ್ಲಿ ಅಳವಡಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.

ಈ ಯೋಜನೆಯಡಿ 2006-07 ರಲ್ಲಿ ನೋಂದಣಿಯಾಗಿರುವ ಫಲಾನುಭವಿಗಳಿಗೆ 18 ವರ್ಷ ಪೂರ್ಣಗೊಂಡಿರುತ್ತದೆ. ಈಗಾಗಲೇ 2006-07ನೇ ಸಾಲಿನ ಭಾಗ್ಯಲಕ್ಷ್ಮೀ ಯೋಜನೆಗೆ ನೋಂದಣಿಯಾಗಿದ್ದ ಅನರ್ಹರನ್ನು ಹೊರತುಪಡಿಸಿ ಅರ್ಹ ಫಲಾನುಭವಿಗಳಿಗೆ ಮಾತ್ರ ಪರಿಪಕ್ವ ಮೊತ್ತವನ್ನು ಪಡೆಯಲು ತಂತ್ರಾಂಶದಲ್ಲಿ ಮಾಹಿತಿಯನ್ನು ಅಳವಡಿಸಲಾಗುತ್ತಿದ್ದು, ಅರ್ಹ ಫಲಾನುಭವಿಗಳು ಸಮರ್ಪಕವಾದ ಮಾಹಿತಿಯನ್ನು ಒದಗಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ಎ.ಪಿ.ಎಂ.ಸಿ ಆವರಣ, ಟಿ.ಬಿ ಸರ್ಕಲ್, ದೊಡ್ಡಬಳ್ಳಾಪುರ ಇಲ್ಲಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.