A defamation suit is inevitable if the news is distorted; D.K. Sivakumar Warning

ಬಿಜೆಪಿ ಪ್ರಶ್ನಿಸಿದರೆ ಸದನದಲ್ಲಿ ಅಧಿಕಾರಿಯ ಹೆಸರು ಹೇಳುವೆ: ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು

ಬೆಂಗಳೂರು: “ನಗರದಲ್ಲಿ ಉತ್ಪಾದನೆಯಾಗುವ ಸುಮಾರು 500 ಟನ್ ಹಸಿಕಸದಿಂದ ಗ್ಯಾಸ್ ಉತ್ಪಾದನೆ ಮಾಡಲು ಕೇಂದ್ರ ಸರ್ಕಾರ ಸ್ವಾಮ್ಯದ ಗೇಲ್ ಸಂಸ್ಥೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ಹೇಳಿದರು.

ವಿಧಾನಸೌಧದಲ್ಲಿ ಹಸಿಕಸದಿಂದ ಗ್ಯಾಸ್ ಉತ್ಪಾದನಾ ಘಟಕ‌ ಸ್ಥಾಪನೆ ಕುರಿತು ಗೇಲ್ ಸಂಸ್ಥೆಯೊಟ್ಟಿಗೆ ಮಾಡಿಕೊಂಡಿರುವ ಒಡಂಬಡಿಕೆ ಹಸ್ತಾಂತರ ನಂತರ ಶಿವಕುಮಾರ್ ಅವರು ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದರು.

“ಗೇಲ್ ಸಂಸ್ಥೆಯವರು 123 ಕೋಟಿ ರೂಪಾಯಿ ವೆಚ್ಚದಲ್ಲಿ ಗ್ಯಾಸ್ ತಯಾರಿಕಾ ಘಟಕವನ್ನು ಸ್ಥಾಪನೆ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಇವರಿಗೆ ಸ್ಥಳವನ್ನೂ ನೀಡಿದೆ. ಮೊದಲ ಬಾರಿಗೆ ಬೆಂಗಳೂರಿನಲ್ಲಿ ಈ ಪ್ರಯೋಗಕ್ಕೆ ಸರ್ಕಾರ ಕೈ ಜೋಡಿಸಿದೆ. ಮುಂದಕ್ಕೂ ಹಲವಾರು ಒಪ್ಪಂದಗಳಿಗೆ ಈ ಸಂಸ್ಥೆಯ ಜೊತೆ ಒಡಂಬಡಿಕೆ ಮಾಡಿಕೊಳ್ಳಲು ಸಿದ್ಧವಿದ್ದೇವೆ” ಎಂದರು.

“ಇದರಿಂದ ಬೆಂಗಳೂರು ನಗರದ ಕಸದ ಸಮಸ್ಯೆ ಕಡಿಮೆಯಾಗಲಿದೆ. ಇದರಿಂದ ಆದಷ್ಟು ‌ಬೇಗ ಗ್ಯಾಸ್ ಉತ್ಪಾದನೆ ಪ್ರಾರಂಭವಾಗಲಿ. ಇಲ್ಲಿ ಉತ್ಪಾದನೆ ಮಾಡುವ ಗ್ಯಾಸ್ ಅನ್ನು ಸಾರ್ವಜನಿಕರು, ಹೋಟೆಲ್ ಉದ್ದಿಮೆದಾರರಿಗೆ ವಿತರಣೆಯಾಗಲಿ” ಎಂದರು.

ಜಿಬಿಎ ಕಸ ಸಮಸ್ಯೆ ನಿರ್ವಹಣೆ ಮಾಡುತ್ತಿಲ್ಲ ಎಂದು ಕಿರಣ್ ಮಜುಂದಾರ್ ಮತ್ತೆ ಎಕ್ಸ್ ಮಾಡಿರುವ ಬಗ್ಗೆ ಕೇಳಿದಾಗ, ಗೇಲ್ ಸಂಸ್ಥೆಯೊಂದಿಗೆ ಯಾವ ಕೆಲಸ ಮಾಡುತ್ತಿದ್ದೇವೆ? ಕಸ ವಿಲೇವಾರಿಗೆ ನಾವು ಎಲ್ಲಾ ಕೆಲಸ ಮಾಡಿದ್ದೇವೆ. ಆದರೆ ನ್ಯಾಯಾಲಯ ನಮಗೆ ಅಡಚಣೆ ತಂದಿತ್ತು.

ಇದರ ಹಿಂದೆ ದೊಡ್ಡ ತಂಡವೇ ಕೆಲಸ ಮಾಡುತ್ತಿದೆ. ಅವರುಗಳು ಯಾರೂ ನಮಗೆ ಸಹಕಾರ ನೀಡಲಿಲ್ಲ. ಈಗ 33 ಪ್ಯಾಕೇಜ್ ಗಳಲ್ಲಿ ಕಸ ವಿಲೇವಾರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ. ವಿಲೇವಾರಿ ಘಟಕಗಳನ್ನು ಸಹ ಸ್ಥಾಪಿಸಲಾಗುತ್ತಿದೆ. ಇದು ಮುಂದಕ್ಕೆ ನಿರಂತರವಾಗಿ ನಡೆದುಕೊಂಡು ಹೋಗುತ್ತದೆ ಎಂದರು.

“ಸರ್ಕಾರದ ಅಧಿಕಾರಿಗಳು, ಜಿಬಿಎ ಆಯುಕ್ತರು, ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯ ಅಧಿಕಾರಿಗಳು ನನ್ನ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಿ ಗೇಲ್ ಸಂಸ್ಥೆಯ ಜೊತೆಗಿನ ಒಡಂಬಡಿಕೆಗಳನ್ನ ಹಸ್ತಾಂತರ ಮಾಡಿಕೊಂಡಿದ್ದಾರೆ” ಎಂದು ಹೇಳಿದರು.

ಬಿಜೆಪಿ ನಾಯಕರು ಯಾರೂ ನನ್ನ ಜೈಲಿಗೆ ಹೋಗು ಎಂದು ಹೇಳಿಲ್ಲ

ಡಿಸಿಎಂ ಆಗುತ್ತೀರೋ ಅಥವಾ ಜೈಲಿಗೆ ಹೋಗುವಿರೋ ಎನ್ನುವ ಬಿಜೆಪಿಯವರು ಮುಂದಿಟ್ಟಿದ್ದ ಬೇಡಿಕೆ ಬಗ್ಗೆ ಕೇಳಿದಾಗ, “ನಾನು ಬಿಜೆಪಿಯವರು ಬೇಡಿಕೆ ಮುಂದಿಟ್ಟಿದ್ದರು ಎಂದು ಹೇಳಿಲ್ಲ. ನಾನು ಹುದ್ದೆಯ ಸಮೇತ ಅಧಿಕಾರಿಯ ಬಗ್ಗೆ ಉಲ್ಲೇಖ ಮಾಡಿದ್ದೇನೆ. ಬಿಜೆಪಿ ನಾಯಕರು ಯಾರೂ ನನ್ನನ್ನು ಜೈಲಿಗೆ ಹೋಗು ಎಂದು ಹೇಳಿಲ್ಲ” ಎಂದರು.

ಈಗ ಇದರ ಬಗ್ಗೆ ಚರ್ಚೆ ಬೇಡ. ಈಗಾಗಲೇ ಇದೆಲ್ಲಾ ನಡೆದು ಐದು ವರ್ಷಗಳೇ ಕಳೆದಿವೆ. ವಾಪಸ್ ನಮ್ಮ ಪಕ್ಷವೇ ಅಧಿಕಾರಕ್ಕೆ ಬಂದಿದೆ. ಎಲ್ಲರಿಗೂ ತಿಳಿದ ವಿಚಾರವನ್ನೇ ನಾನು ಮತ್ತೊಮ್ಮೆ ಹೇಳಿದ್ದೇನೆ. ಇದರಲ್ಲಿ ಕಟ್ಟುಕತೆ ಏನಿಲ್ಲ. ಅಧಿಕಾರಿಯ ಹೆಸರನ್ನು ಎಲ್ಲೆಂದರಲ್ಲಿ ಹೇಳುವುದಿಲ್ಲ.

ಬಿಜೆಪಿಯವರು ಸದನದಲ್ಲಿ ಹೇಳಿ ಎಂದು ಪ್ರಶ್ನಿಸಲಿ ಅಲ್ಲಿ ಹೇಳುತ್ತೇನೆ. ಇದೆಲ್ಲಾ ದಾಖಲೆಗೆ ಹೋಗಬೇಕು. ಸದನದಲ್ಲಿ ಇರುವ ಶಾಸಕರಿಂದಲೇ ಯಾರು ಕರೆದಿದ್ದರು, ಯಾರು ಕರೆ ಮಾಡಿದ್ದರು ಎಂದು ಹೇಳಿಸುತ್ತೇನೆ ಎಂದು ಸವಾಲು ಹಾಕಿದರು.

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!