ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ: ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ KSRTC ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ನಾಯಕರಂಡನಹಳ್ಳಿ ಸಂಭವಿಸಿದೆ.

ರಾಜ್ಯ ಹೆದ್ದಾರಿ ಹಿಂದೂಪುರ-ಯಲಹಂಕ ನಡುವಿನ ನಾಯಕರಂಡಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದ್ಧು ಬಸ್ಸಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡು, ಆಸ್ಪತ್ರೆಗೆ ತೆರಳಿದ್ದಾರೆ.
ಪಾವಗಡದಿಂದ ಬೆಂಗಳೂರು ತೆರಳು KSRTC ಬಸ್ ಗೌರಿಬಿದನೂರು ಕಡೆಯಿಂದ ಬರುವ ವೇಳೆ ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಕಲ್ಲಿದ್ದಲು ಲಾರಿಯನ್ನು ಲಾರಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ.
ಘಟನೆಯಲ್ಲಿ ಮುಂಭಾಗದಲ್ಲಿ ಕುಳಿತಿದ್ದ ಓರ್ವ ಬಾಲಕ ಲಾರಿ ಮತ್ತು ಬಸ್ ನಡುವೆ ಸಿಲುಕಿದ್ದು ಸುಮಾರು 2 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಿಸಲಾಯಿತು.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದೆ.