ದೊಡ್ಡಬಳ್ಳಾಪುರ: ಅ.28ರಂದು ಭೂಸ್ವಾಧೀನ ವಿರೋಧಿಸಿ ಬೃಹತ್ ಪ್ರತಿಭಟನೆಗೆ ಸಜ್ಜು

Doddaballapura: Massive protest against land acquisition on October 28th

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಗ್ರಾಮಗಳಲ್ಲಿ ಕರ್ನಾಟಕ ರಾಜ್ಯ ಗೃಹ ಮಂಡಳಿಯು ಭೂಸ್ವಾಧೀನ (land acquisition) ಮಾಡುವ ಪ್ರಕ್ರಿಯೆಯನ್ನು ಕೂಡಲೇ ಕೈಬಿಡಬೇಕೆಂದು ಒತ್ತಾಯಿಸಿ ಅ.28 ರಂದು ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ (Protest) ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಗೃಹ ಮಂಡಳಿ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಉಗ್ರಪ್ಪ, ಕಾರ್ಯಾಧ್ಯಕ್ಷ ಸಿ.ಎಚ್‌.ರಾಮಕೃಷ್ಣಯ್ಯ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ದೊಡ್ಡಬೆಳವಂಗಳ ಹೋಬಳಿಯ ಕಸಾಘಟ್ಟ, ದೊಡ್ಡಹೆಜ್ಜಾಜಿ, ವೆಂಕಟೇಶಪುರ, ಕಾರೇಪುರ,ಐಯ್ಯನಹಳ್ಳಿ ಗ್ರಾಮಗಳ 2,760 ಎಕರೆ ಫಲವತ್ತಾದ ಕೃಷಿ ಭೂಸ್ವಾಧೀನಕ್ಕೆ ಕರ್ನಾಟಕ ರಾಜ್ಯ ಗೃಹ ಮಂಡಳಿ ಮುಂದಾಗಿದೆ.

ತಾಲ್ಲೂಕಿನಲ್ಲೇ ಅತ್ಯಂತ ಹೆಚ್ಚು ಕೃಷಿ ಚಟುವಟಿಕೆಗಳು ನಡೆಯುತ್ತಿರುವ ಫಲವತ್ತಾದ ಜಮೀನುಗಳು ಇರುವ ಸ್ಥಳದಲ್ಲಿ ಗೃಹ ಮಂಡಳಿ ಭೂಸ್ವಾಧಿನಕ್ಕೆ ಮುಂದಾಗಿರುವುದು ಅತ್ಯಂತ ಅವೈಜ್ಞಾನಿಕ ಕ್ರಮವಾಗಿದೆ.

ಈಗಾಗಲೇ ದೊಡ್ಡಬೆಳವಂಗಲ ಹೋಬಳಿಯಲ್ಲಿ ಕ್ವಿನ್ ಸಿಟಿಗೆ 5100 ಎಕರೆ, ಹೈಟೆಕ್ ಲಾಜಿಸ್ಟಿಕ್ ಪಾರ್ಕ್, ಬಿಬಿಎಂಪಿ ಕಸವಿಲೇವಾರಿ ಘಟಕ ಸೇರಿದಂತೆ ಹತ್ತಾರು ಯೋಜನೆಗಳ ನೆಪದಲ್ಲಿ ಸಾವಿರಾರು ಎಕರೆ ರೈತರ ಫಲವತ್ತಾದ ಕೃಷಿ ಜಮೀನನ್ನು ಸ್ವಾಧಿನಪಡಿಸಿಕೊಳ್ಳಲಾಗುತ್ತಿದೆ.

ಕೃಷಿ ಭೂಮಿಯನ್ನು ಕೈಗಾರಿಕೆಗಳಿಗೆ ನೀಡಿದರೆ ರೈತರು ಬೀದಿ ಪಾಲಾಗುವ ಸ್ಥಿತಿ ನಿರ್ಮಾಣವಾಗುತ್ತದೆ ಎಂದರು.

ಸರ್ಕಾರ ಕೈಗಾರಿಕೆಗಳ ಸ್ಥಾಪನೆ ನೆಪದಲ್ಲಿ ರಿಯಲ್ ಎಸ್ಟೇಟ್ ದಂದೆ ನಡೆಸುತ್ತಿದೆ. ಕೃಷಿ ಜಮೀನು ಸ್ವಾಧೀನಕ್ಕೂ ಒಂದು ಮಿತಿ ಇರಬೇಕು. ಈ ಪ್ರದೇಶ ಎಲ್ಲದಕ್ಕೂ ಬೆಂಗಳೂರಿಗೆ ಸಮೀಪವಾಗಿ ಕೇಂದ್ರವಾಗಿರುವುದರಿಂದ ಎಲ್ಲಾ ಯೋಜನೆಗಳನ್ನು ದೊಡ್ಡಬೆಳವಂಗಲ ಹೋಬಳಿಯಲ್ಲೇ ಜಾರಿಗೊಳಿಸಲಾಗುತ್ತಿದೆ. ಬದಲಿಗೆ ರಾಜ್ಯ ಇತರೆ ಜಿಲ್ಲೆಗಳಲ್ಲೂ ಕೈಗಾರಿಕೆಗಳ ಸ್ಥಾಪನೆಗೆ ಮುಂದಾಗಬೇಕು ಎಂದರು.

ಪ್ರಾಂತ ರೈತ ಸಂಘದ ರಾಜ್ಯ ಸಂಚಾಲಕರಾದ ಪ್ರಭಾ ಬೆಳವಂಗಲ ಮಾತನಾಡಿ, ಗೃಹ ಮಂಡಳಿ ವಸತಿ ನಿರ್ಮಾಣ ನೆಪದಲ್ಲಿ ಸಾವಿರಾರು ಎಕರೆ ಕೃಷಿ ಜಮೀನು ಕಬಳಿಸಲು ಮುಂದಾಗಿರುವುದು ಖಂಡನೀಯ. ದೊಡ್ಡಬೆಳವಂಗಲ ಹೋಬಳಿಯ ರೈತರನ್ನು ಸಂಪೂರ್ಣವಾಗಿ ಒಕ್ಕಲೆಬ್ಬಿಸುವ ವ್ಯವಸ್ಥಿತಿ ಸಂಚು ನಡೆಯುತ್ತಿದೆ.

ರೈತರ ಜಮೀನು ಪಡೆಯುವ ಸರ್ಕಾರಗಳು ರೈತರ ಹಿತದ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಕೃಷಿ ಭೂಮಿ ಹೋದರೆ ಆಹಾರಕ್ಕೆ ಹಾಹಾಕಾರವಾಗುತ್ತದೆ. ಇಲ್ಲಿನ ಮಕ್ಕಳ ಶಿಕ್ಷಣ ಹಾಗೂ ಅಭಿವೃದ್ದಿ ಹೇಗೆ ಎನ್ನುವ ಪ್ರಶ್ನೆ ಉದ್ಭವಿಸುತ್ತದೆ.ಈಗಾಗಲೇ ಭೂಸ್ವಾಧೀನ ಮಾಡಿ ಸ್ಥಾಪಿಸಿರುವ ಕೈಗಾರಿಕೆಗಳಲ್ಲಿ ಎಷ್ಟು ಆಭಿವೃದ್ದಿಯಾಗಿದೆ. ಇಲ್ಲಿನ ಜನರಿಗೆ ಸಿಕ್ಕ ಪ್ರತಿಫಲವೆಷ್ಟು ಎನ್ನುವುದನ್ನು ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದರು.

ಅ.28 ರಂದು ಬೃಹತ್ ಪ್ರತಿಭಟನೆ

ಕರ್ನಾಟಕ ರಾಜ್ಯ ಗೃಹ ಮಂಡಳಿ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಭೂಸ್ವಾಧೀನ ಮಾಡುವ ಪ್ರಕ್ರಿಯೆಯನ್ನು ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿ ಅ.28 ರಂದು ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅಂದು ನಗರದ ನೆಲದಾಂಜಸ್ವಾಮಿ ದೇವಾಲಯದ ಬಳಿಯಿಂದ ಮೆರವಣಿಗೆಯಲ್ಲಿ ತೆರಳಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಮುಖಂಡರು ತಿಳಿಸಿದರು.

ಈ ವೇಳೆ ಕರ್ನಾಟಕ ರಾಜ್ಯ ಗೃಹ ಮಂಡಳಿ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿಯ ಗೌರವ ಅಧ್ಯಕ್ಷ ಸಿ.ರಾಮಕೃಷ್ಣಯ್ಯ, ಕಾರ್ಯಾಧ್ಯಕ್ಷ ಕೆ.ವಿ.ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಡಿ.ಎ.ಸತೀಶ್‌, ಖಜಾಂಚಿ ಸಿ.ರಾಮೇಗೌಡ, ಪ್ರಾಂತ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ.

ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ, ಸಿಪಿಐ(ಎಂ) ತಾಲೂಕು ಕಾರ್ಯದರ್ಶಿ ರುದ್ರಾರಾಧ್ಯ, ಸಿಐಟಿಯು ಜಿಲ್ಲಾಧ್ಯಕ್ಷ ನರಸಿಂಹಮೂರ್ತಿ, ಕನ್ನಡ ಪಕ್ಷದ ಮುಖಂಡ ಸಂಜೀವ್‌ ನಾಯಕ್‌ ಮೊದಲಾದವರು ಭಾಗವಹಿಸಿದ್ದರು.

ರಾಜಕೀಯ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ ಡಿ. ಸುಧಾಕರ್ ಆರೋಗ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ ಹೆಚ್.ಡಿ. ಕುಮಾರಸ್ವಾಮಿ

ಸಚಿವ‌ ಸುಧಾಕರ್ ಸಾವು ಬದುಕಿನ ಬಗ್ಗೆ ಹೋರಾಟ ಮಾಡುತ್ತಿದ್ದಾರೆ ಎಂದು ಇವರು ಹೇಳುತ್ತಿದ್ದಾರೆ. ಆದರೆ ಜನರೇ ಬೇರೆ ಮಾತನಾಡುತ್ತಿದ್ದಾರೆ. ಹಿರಿಯೂರು ಅಥವಾ ಬೇರೆ ಕ್ಷೇತ್ರದ ಬಗ್ಗೆ ಮಾತಾಡಲ್ಲ. ಆದರೆ, ಒಳಗೆ ಏನು ನಡೆಯುತ್ತಿದೆ ಎಂಬುದನ್ನು

[ccc_my_favorite_select_button post_id="121402"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ದೊಡ್ಡಬಳ್ಳಾಪುರ DJ ಕೇಸ್ಗೆ ಹೈ ಕೋರ್ಟ್ ತಡೆಯಾಜ್ಞೆ

ವಿಶ್ವ ಹಿಂದೂಪರಿಷತ್ ಮತ್ತು ಬಜರಂಗದಳದಿಂದ ನಗರದಲ್ಲಿ ನಡೆದ ಶೋಭಾಯಾತ್ರೆಯಲ್ಲಿ (Sobhayatre) ಅನುಮತಿ ಇಲ್ಲದೆ ಡಿಜೆ (DJ) ಬಳಸಿದ ಕುರಿತು ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ ಎಂದು ತಿಳಿದು ಬಂದಿದೆ.

[ccc_my_favorite_select_button post_id="121351"]
ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ದೊಡ್ಡಬಳ್ಳಾಪುರ: ಕ್ಯಾಂಟರ್ಗೆ ಟೆಂಪೋ ಡಿಕ್ಕಿ.. ಚಾಲಕ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ (Tempo) ಡಿವೈಡರ್ ಮೇಲೆ ಸಾಗಿ, ಮತ್ತೊಂದು ರಸ್ತೆಯಲ್ಲಿ ಎದುರು ಬರುತ್ತಿದ್ದ ಟ್ಯಾಂಕರ್ಗೆ (Canter) ಡಿಕ್ಕಿ ಹೊಡೆದ ಪರಿಣಾಮ (Accident), ಟೆಂಪೋ ಚಾಲಕ ಸಾವನಪ್ಪಿರುವ ಘಟನೆ ತಾಲೂಕಿ ಕೂಗೇನಹಳ್ಳಿ ಕಾಲೋನಿ

[ccc_my_favorite_select_button post_id="121396"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]