ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ (Talakaveri) ಶುಕ್ರವಾರ ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಪವಿತ್ರ ತೀರ್ಥೋದ್ಭವವನ್ನು ಸಾವಿರಾರು ಭಕ್ತರು ಕಣ್ಣುಂಬಿಕೊಂಡು ಜಯಘೋಷ ಹಾಕಿದರು.

ಧಾರ್ಮಿಕ ವಿಧಿ ವಿಧಾನಗಳ ನಡುವೆ ಕುಂಡಿಕೆ ಯಲ್ಲಿ ತಾಯಿ ಕಾವೇರಿ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ನೆರೆದಿದ್ದ ಭಕ್ತರತ್ತ ಪವಿತ್ರ ಜಲದ ಪ್ರೋಕ್ಷಣೆ ಮಾಡಲಾಯಿತು.
ಪ್ರಧಾನ ಅರ್ಚಕರಾದ ಗುರುರಾಜ್ ಆಚಾರ್ ತಂಡ ಪೂಜಾ ವಿಧಿವಿಧಾನ ನೆವೇರಿಸಿದರು.
ಸಂಸದ ಯದುವೀರ್ ಒಡೆಯರ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್.ಪೊನ್ನಣ್ಣ, ಶಾಸಕ ಡಾ.ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಭಗಂ ಡೇಶ್ವರ ದೇಗುಲದ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಮತ್ತಿತರ ಗಣ್ಯರು ತೀರ್ಥೋದ್ಭವ ಕ್ಷಣಕ್ಕೆ ಸಾಕ್ಷಿಯಾದರು.