Protesters demand district hospital for CM Siddaramaiah who arrived in Doddaballapura

ಜಿಲ್ಲಾಸ್ಪತ್ರೆಗಾಗಿ ಹೋರಾಟಗಾರರಿಂದ ಅವಿರತ ಶ್ರಮ.. ದೊಡ್ಡಬಳ್ಳಾಪುರಕ್ಕೆ ಬಂದ ಸಿಎಂ‌ ಸಿದ್ದರಾಮಯ್ಯರಿಗೂ ಮನವಿ

ದೊಡ್ಡಬಳ್ಳಾಪುರ: ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆ (District hospital) ಹೋರಾಟ ಸಮಿತಿ ಮುಖಂಡರು ಜಿಲ್ಲಾಸ್ಪತ್ರೆ ನಿರ್ಮಾಣ ಮತ್ತು ಇಎಸ್ಐ ಆಸ್ಪತ್ರೆ ಉದ್ಘಾಟನೆ‌ ಮಾಡಲು ಮನವಿ ಪತ್ರ ಸಲ್ಲಿಸಿದರು.

ಬೆಂಗಳೂರಿನಿಂದ ದೊಡ್ಡಬಳ್ಳಾಪುರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಕೊಡಿಗೇಹಳ್ಳಿ ಬಳಿ ವಿವಿಧ ಸಂಘಟನೆಗಳು ನೀಡಿದ ಮನವಿ ಪತ್ರಗಳನ್ನು ಸ್ವೀಕರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆ ಹೋರಾಟ ಸಮಿತಿ ಮುಖಂಡರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲೆ ನಿರ್ಮಾಣಬೇಕು ಮತ್ತು ಕಾಮಗಾರಿ ಪೂರ್ಣವಾಗಿರುವ ಇಎಸ್ಐ ಆಸ್ಪತ್ರೆಯನ್ನು ಉದ್ಘಾಟನೆ ಮಾಡಬೇಕೆಂದು ಒತ್ತಾಯಿಸಿದರು.    

ಮನವಿ ಪತ್ರ ಸಲ್ಲಿಸಿ ಮಾತನಾಡಿದ ಜಿಲ್ಲಾ ಆಸ್ಪತ್ರೆ ಹೋರಾಟ ಸಮಿತಿ ‌ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ  ಶಂಕುಸ್ಥಾಪನೆ ನೆರವೇರಿಸಿದರೂ ಕಾಮಗಾರಿಗೆ ಅನುದಾನ ಬಿಡುಗಡೆಯಾಗದೆ ವಿಳಂಬವಾಗುತ್ತಿದೆ. 

ಸರ್ಕಾರ ಆಸ್ಪತ್ರೆ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿ ಶೀಘ್ರ ಕಾಮಗಾರಿ ಪ್ರಾರಂಭ ಪೂರ್ಣಗೊಳಿಸಬೇಕೆಂದು  ನೀಡಿದ ಮನವಿಯನ್ನು ನೀಡಲಾಗಿದೆ ಎಂದರು.   

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದಂತೆ  ಈಗಾಗಲೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ  ಕೆ.ಎಚ್.ಮುನಿಯಪ್ಪ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರಿಗೂ ಮನವಿ ಪತ್ರ ನೀಡಲಾಗಿದೆ. ಅವರು ಸಹ  ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ದೊಡ್ಡಬಳ್ಳಾಪುರ ತಾಲ್ಲೂಕಿನ  ಸಿದ್ಧೇನಾಯಕನಹಳ್ಳಿ ಗ್ರಾಮದ ಸರ್ವೆ ನಂ.20ರಲ್ಲಿ ಒಟ್ಟು 9.38 ಎಕರೆ ಜಾಗದಲ್ಲಿ 250 ಹಾಸಿಗೆಗಳ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆ  ನಿರ್ಮಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ಮಾಡಿದ್ದಾರೆ. 

ಜಿಲ್ಲಾ ಆಸ್ಪತ್ರೆಗೆ 6.8 ಎಕರೆ ಜಾಗ ಹೆಚ್ಚುವರಿ ಸೇರ್ಪಡೆ ಮಾಡಿ ಒಟ್ಟು 16 ಎಕರೆ ಜಮೀನಿನಲ್ಲಿ ಸುಸಜ್ಜಿತ ಜಿಲ್ಲಾ ಆಸ್ಪತ್ರೆ ಯೋಜನೆಗೆ ಒಟ್ಟು ರೂ.192ಕೋಟಿ ಅನುದಾನ ನಿಗದಿಪಡಿಸಿದೆ. ಆದರೆ  ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗದೆ ವಿಳಂಬ ಆಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದರು.

ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದಲ್ಲಿ  ಇಎಸ್‍ಐ ಮಲ್ಟಿ ಸ್ಪೆಷಾಲಿಟಿ  ಆಸ್ಪತ್ರೆ ನಿರ್ಮಾಣ ಆಗಿ ನಾಲ್ಕು ವರ್ಷಗಳು  ಕಳೆದಿರೂ ಉದ್ಘಾಟನೆ ಮಾತ್ರ ಆಗಿಲ್ಲ. 12 ವರ್ಷಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ಕಾರ್ಮಿಕ ಸಚಿವರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಇಎಸ್ಐ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. 

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಕಾರ್ಮಿಕರಿಗೆ ಅನುಕೂಲ ಆಗಲಿರುವ ಇಎಸ್ಐ ಆಸ್ಪತ್ರೆಯ ಸೇವಾ ಆರಂಭಕ್ಕೆ  ಚಾಲನೆ ದೊರೆಯಬೇಕಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದರು.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!