Jalappa is also the reason why I became a minister: CM Siddaramaiah

ನಾನು ಸಚಿವನಾಗಲು ಜಾಲಪ್ಪ ಅವರೂ ಕೂಡ ಕಾರಣಕರ್ತರು: ಸಿಎಂ ಸಿದ್ದರಾಮಯ್ಯ

ದೊಡ್ಡಬಳ್ಳಾಪುರ: ಆರ್.ಜಾಲಪ್ಪ (R.L
Jalappa) ಅವರ ವ್ಯಕ್ತಿತ್ವ ನೇರ-ನಿಷ್ಠುರ ಮತ್ತು ಹೃದಯವಂತಿಕೆಯಿಂದ ಕೂಡಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ತಿಳಿಸಿದರು.

ಆರ್.ಎಲ್.ಜಾಲಪ್ಪ ಜನ್ಮ ಶತಮಾನೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಾಲಪ್ಪ ಅಕಾಡೆಮಿ, ಜಾಲಪ್ಪ ಕಾನೂನು ಮಹಾವಿದ್ಯಾಲಯ, ಶತಮಾನೋತ್ಸವ ಭವನಗಳನ್ನು ಉದ್ಘಾಟಿಸಿ ಹಾಗೂ ದೇವರಾಜ ಅರಸು ವಸತಿ ಶಾಲೆ ನೂತನ ಕಟ್ಟಡಗಳ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

ನಾನು ಸಚಿವನಾಗಲು ಜಾಲಪ್ಪ ಅವರೂ ಕೂಡ ಕಾರಣಕರ್ತರು: ಸಿಎಂ ಸಿದ್ದರಾಮಯ್ಯ

ಜಾಲಪ್ಪನವರಿಗೆ ಸಮಯ ಪ್ರಜ್ಞೆ ಇತ್ತು. ಒಬ್ಬ ದಕ್ಷ ಆಡಳಿತಗಾರರಾಗಿದ್ದ ಜಾಲಪ್ಪ ಅವರು ನಿರ್ವಹಿಸಿದ ಎಲ್ಲಾ ಖಾತೆಗಳಲ್ಲೂ ತಮ್ಮದೇ ಆದ ಹೆಜ್ಜೆ ಗುರುತುಗಳನ್ನು ದಾಖಲಿಸಿದ್ದು ಮಾತ್ರವಲ್ಲ,
ರೈತರಿಗೆ, ಕೃಷಿಗೆ ಅತ್ಯಂತ ಮಹತ್ವ ನೀಡಿದ್ದನ್ನು ಸಿಎಂ ಸ್ಮರಿಸಿದರು.

ನಾನು ಮೊದಲ ಬಾರಿ ಸಚಿವನಾಗಲು ರಾಚಯ್ಯನವರಷ್ಟೇ ಜಾಲಪ್ಪ ಅವರೂ ಕಾರಣ. ಜಾಲಪ್ಪನವರಿಗೆ ಹಿಂದುಳಿದವರ ಏಳಿಗೆಯ ವಿಚಾರದಲ್ಲಿ ದೂರದೃಷ್ಟಿ ಇತ್ತು. ಹೀಗಾಗಿ ಆಗಲೇ ವೈದ್ಯಕೀಯ ಕಾಲೇಜು ಸ್ಥಾಪಿಸಿದರು. ಮೊದಲಿಗೆ 150 ವಿದ್ಯಾರ್ಥಿಗಳಿಂದ ಆರಂಭವಾದ ಸಂಸ್ಥೆ ಈಗ 40 ಸಾವಿರದಷ್ಟು ವಿದ್ಯಾರ್ಥಿಗಳು ನಾನಾ ವಿಭಾಗಗಳಲ್ಲಿ ಓದುತ್ತಿರುವುದನ್ನು ಉಲ್ಲೇಖಿಸಿ ಶ್ಲಾಘಿಸಿದರು.

ಬಹಳ ಸ್ವಾಭಿಮಾನಿ ಆಗಿದ್ದ ಜಾಲಪ್ಪನವರು ನನ್ನ ರಾಜಕೀಯ ಏಳಿಗೆಗೆ ಕಾರಣಕರ್ತರು‌. ನನ್ನನ್ನು ಮುಖ್ಯಮಂತ್ರಿ ಮಾಡಲೇಬೇಕು ಎಂದು ಜಾಲಪ್ಪನವರು ದೇವೇಗೌಡರ ಎದುರು ಹಠ ಹಿಡಿದು ಆಗ್ರಹ ಪೂರ್ವಕವಾಗಿ ಒತ್ತಾಯಿಸಿದ್ದರು. ನನಗೂ, ಜೆ.ಹೆಚ್.ಪಟೇಲರಿಗೂ ನಡುವೆ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಚರ್ಚೆ ನಡೆಯುತ್ತಿದ್ದಾಗ ನನ್ನ ಪರವಾಗಿ ಗಟ್ಟಿಯಾಗಿ ನಿಂತು ದೇವೇಗೌಡರಿಗೆ ನನ್ನನ್ನೇ ಸಿಎಂ ಮಾಡಬೇಕು ಎಂದು ಒತ್ತಾಯಿಸಿದ್ದನ್ನು ನೆನಪಿಸಿಕೊಂಡರು.

ನಾನು ಮೊದಲ ಬಾರಿ ಹಣಕಾಸು ಸಚಿವನಾಗುವಾಗಲೂ ಜಾಲಪ್ಪನವರ ಪ್ರಯತ್ನ‌ ಇದೆ. ನಾನು ಕಂದಾಯ ಸಚಿವನಾಗಬೇಕು ಎಂದುಕೊಂಡಿದ್ದೆ. ಆದರೆ, ನಾನು ಹಣಕಾಸು ಸಚಿವ ಆಗಲೇಬೇಕು ಎಂದು ಸೂಚಿಸಿದರು. ಅವರ ಕಾರಣದಿಂದ ನಾನು ಇಂದು ಹದಿನಾರು ಬಜೆಟ್ ಗಳನ್ನು ಮಂಡಿಸುವಂತಾಯಿತು ಎಂದು ಕೃತಜ್ಞತೆ ಸಲ್ಲಿಸಿದರು.

ಇಂದು ನಾನು ರಾಜಕೀಯವಾಗಿ ಈ ಮಟ್ಟದ ಏಳಿಗೆ ಆಗಿದ್ದರೆ ಅದರಲ್ಲಿ ಜಾಲಪ್ಪನವರ ಪಾತ್ರ ದೊಡ್ಡದಿದೆ ಎಂದರು.

ಅತ್ಯಂತ ಹೃದಯವಂತರಾಗಿದ್ದ ಜಾಲಪ್ಪನವರು ಆತಿಥ್ಯದಲ್ಲೂ ಎತ್ತಿದ ಕೈ. ತುಪ್ಪದ ದೋಸೆ ಮಾಡಿ ಸ್ವತಃ ಬಡಿಸಿದ್ದರು.

ಸಾಮಾಜಿಕ ನ್ಯಾಯದ ಪರವಾಗಿ ತಮ್ಮ ರಾಜಕೀಯ ಜೀವನವನ್ನು ಮುಡಿಪಾಗಿ ಇಟ್ಟಿದ್ದರು.

ಅತ್ಯಂತ ಧೈರ್ಯವಂತರಾಗಿದ್ದ ಜಾಲಪ್ಪ ಅವರು ಸತ್ಯ ಹೇಳುವಾಗ ಮುಲಾಜಿಲ್ಲದೆ ಎದೆಗಾರಿಕೆ ಪ್ರದರ್ಶಿಸುತ್ತಿದ್ದರು ಎಂದು ಸ್ಮರಿಸಿ ಅಭಿನಂದನೆ ಸಲ್ಲಿಸಿದರು.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!