ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಮುಂದಿನ ಒಂದು ವಾರ ವ್ಯಾಪಕವಾಗಿ ಮಳೆಯಾಗಲಿದ್ದು (Rain), ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಅ.21ರಿಂದ 27ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಬಹುತೇಕ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ನೀಡಿದೆ.
ಮಂಗಳವಾರ ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಾಗೂ ಬೆಂಗಳೂರು ಗ್ರಾಮಾಂತರಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಹಾವೇರಿ, ಗದಗ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಅಧಿಕವಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.