The state can develop if the police department maintains peace and order: CM Siddaramaiah

ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು; ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.‌ ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ( Police department) ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸಂತಾಪ ಸಲ್ಲಿಸಿ ಮಾತನಾಡಿದರು.

ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ
ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ‌ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ. ಈ ಸಾಧನೆಯ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದರು.

ರಾಜ್ಯದಲ್ಲಿ ಪರಿಶಿಷ್ಠ ಜಾತಿ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ DCRE ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಸಾಂವಿಧಾನಿಕ ಹಕ್ಕು ಮತ್ತು ಮೌಲ್ಯಗಳನ್ನು ಕಾಪಾಡುವ ಕೆಲಸ ಆಗಬೇಕಿದೆ ಎಂದರು.

ಒಂದು ವರ್ಷದಲ್ಲಿ ರಾಜ್ಯದ 8 ಮಂದಿ ಸೇರಿ ದೇಶದಲ್ಲಿ 191 ಮಂದಿ ಕರ್ತವ್ಯ ನಿರ್ವಹಣೆ ವೇಳೆ ಪ್ರಾಣ ತ್ಯಾಗ ಮಾಡುವ ಹುತಾತ್ಮರಾಗಿದ್ದಾರೆ. ಇವರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು. ಇವರನ್ನು ಇಡೀ ದೇಶ ಸ್ಮರಿಸಿ, ವಂದಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.

ದೇಶದ ಶಾಂತಿ ಸುವ್ಯವಸ್ಥೆ ಕಾಪಾಡುವುದರಲ್ಲಿ ಪೊಲೀಸ್ ಸಿಬ್ಬಂದಿ ಅಗ್ರ ಸ್ಥಾನದಲ್ಲಿದ್ದಾರೆ. ಕೋಮು ಶಕ್ತಿಗಳು, ದುಷ್ಟ ಶಕ್ತಿಗಳ ನಿಗ್ರಹದಲ್ಲಿ ನಿಮ್ಮ ಪಾತ್ರ ದೊಡ್ಡದಿದೆ ಎಂದರು.

ಸಂವಿಧಾನದಲ್ಲಿ ಜನರಿಗೆ ಕೊಟ್ಟಿರುವ ಹಕ್ಕುಗಳನ್ನು ಕಾಪಾಡುವ ಜವಾಬ್ದಾರಿಯನ್ನೂ ಪೊಲೀಸ್ ಇಲಾಖೆ ನಿರ್ವಹಿಸುತ್ತಿದೆ ಎಂದರು.

ಮುಖ್ಯಾಂಶಗಳು

116 ಮಂದಿಗೆ ಅನುಕಂಪದ ಕೆಲಸ ನೀಡಿ ಆದೇಶ.

ನಿವೃತ್ತ ಪೊಲೀಸ್ ಆರೋಗ್ಯ ಯೋಜನೆಯ ವೈದ್ಯಕೀಯ ಮರು ಪಾವತಿ ವೆಚ್ಚವನ್ನು ವಾರ್ಷಿಕ 1 ಲಕ್ಷ ರೂಗಳಿಂದ 1.50 ಲಕ್ಷಕ್ಕೆ ಹೆಚ್ಚಳ.

ಎಲ್ಲಾ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1000 ರೂಗಳಿಂದ 1500 ರೂಗೆ ಹೆಚ್ಚಳ.

ರಾಜಕೀಯ

ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ: ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸವಾಲು

ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ:

ಸದನದಲ್ಲಿ ಜೇಬು ತೋರಿಸಿ ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ. ಇದರಲ್ಲಿ ಅವಮಾನ ಆಗುವಂತದ್ದು ಏನೂ ಇಲ್ಲ; ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="115331"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!