ದೊಡ್ಡಬಳ್ಳಾಪುರ: ರಸ್ತೆಯಲ್ಲಿ ತಿರುವು ಪಡೆಯುವ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ (Accident) ತಾಲೂಕಿನ ಮೆಣಸಿ ಗೇಟ್ ಬಳಿ ಸಂಭವಿಸಿದೆ.

ಮೃತ ದುರ್ದೈವಿಯನ್ನು ಸುಮಾರು 50 ವರ್ಷದ ಕಣ್ಣಯ್ಯ ಎಂದು ಗುರುತಿಸಲಾಗಿದ್ದು, ಹೆಸರಘಟ್ಟ ಮೂಲದವರಿರಬಹದುದೆಂದು ಪೊಲೀಸರು ಶಂಕಿಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಪರಿಶೀಲನೆ ನಡೆಸಿದ್ದಾರೆ.