ಚಾಮರಾಜನಗರ; ದೀಪಾವಳಿ (Deepavali) ಜಾತ್ರಾ ಮಹೋತ್ಸವ ಪ್ರಯುಕ್ತ ಇಲ್ಲಿನ ಮಲೆಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಮಹದೇಶ್ವರ ಸ್ವಾಮಿಯ ಮಹಾರಥೋತ್ಸವ ಈ ದಿನ ಬೆಳಿಗ್ಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ಶ್ರೀ ಮಲೆ ಮಹದೇಶ್ವರ ಸ್ವಾಮಿ ದಕ್ಷಿಣ ದ್ವಾರ ಹನೂರು ಕ್ಷೇತ್ರದಲ್ಲಿ ವಿಶೇಷ ಅಲಂಕಾರ, ಬೆಳಗ್ಗೆಯಿಂದಲೂ ವಿಶೇಷ ಪೂಜೆ, ಅಭಿಷೇಕ ನಡೆಸಲಾಯಿತು.

ಜಾತ್ರಾ ಮಹೋತ್ಸವದ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೂಬಸ್ತ್ ಕೈಗೊಳ್ಳಲಾಗಿತ್ತು.
ಈ ವೇಳೆ ಚಾಮರಾಜನಗರದಲ್ಲಿ ಪೊಲೀಸರ ಬಂದೋಬಸ್ತ್ ಕಡಿಮೆ ಮಾಡೋ ಮಾದಪ್ಪ! ಎಂದು ಭಕ್ತೋರ್ವ ವಿಶೇಷ ಬೇಡಿಕೆ ಇಟ್ಟ ಹಣು ಧವನ ಅರ್ಪಿಸಿ ಗಮನ ಸೆಳೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.