ದೊಡ್ಡಬಳ್ಳಾಪುರ: ಹಿರಿಯ ಕಾಂಗ್ರೆಸ್ (Congress) ಕಾರ್ಯಕರ್ತ ಧರ್ಮರಾಯನಗರದ ರಾಮಾಂಜಿಪ್ಪ ಅವರನ್ನು ಕಾಂಗ್ರೆಸ್ ಕಾರ್ಮಿಕ ಘಟಕದ ನಗರ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರ ಸೂಚನೆ ಮೇರೆಗೆ ಜಿಲ್ಲಾಧ್ಯಕ್ಷ ಎಚ್. ಎಂ ಚಂದ್ರೆಗೌಡ ರವರು ರಾಮಾಂಜಿನಪ್ಪ ಬಿನ್ ನರಸಿಂಹಯ್ಯ ಇವರನ್ನು ದೊಡ್ಡಬಳ್ಳಾಪುರ ಕಾಂಗ್ರೆಸ್ ನಗರ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿ ಪತ್ರ ನೀಡಿದ್ದಾರೆ.
ನೀಡಲಾಗಿರುವ ಹುದ್ದೆಯನ್ನು ಅತ್ಯಂತ ಜವಾಬ್ದಾರಿಯಿಂದ, ಎಲ್ಲಾ ಚುನಾವಣೆಗಳಲ್ಲಿ ಸ್ಥಳೀಯ ನಾಯಕರ ಜೊತೆಗೂಡಿ ಪಕ್ಷವನ್ನು ತಳಮಟ್ಟದಿಂದ ಕಟ್ಟಲು ಶ್ರಮಿಸಬೇಕೆಂದು ಆದೇಶ ಪತ್ರದಲ್ಲಿ ಸೂಚಿಸಿದ್ದಾರೆ.
ಈ ಸಂದರ್ಭದಲ್ಲಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಚಕ್ರವರ್ತಿ, ಜಂಟಿ ಕಾರ್ಯದರ್ಶಿ ಪ್ರಭು, ಜಿಲ್ಲಾ ಕಾರ್ಯಧ್ಯಕ್ಷರಾದ ಶಂಕರ್, ಜಿಲ್ಲಾ ಕಾರ್ಯದರ್ಶಿ ಅಮರೇಶ್ ಮುಖಂಡರಾದ ತಳಗವಾರ ಪುನೀತ್, ಶಿವು ಮುಂತಾದವರು ಉಪಸ್ಥಿತರಿದ್ದರು.