ಬೆಂಗಳೂರು ಗ್ರಾಮಾಂತರ ಜಿಲ್ಲೆ: ತೋಟಗಾರಿಕೆ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಿಂದ 2025-26ನೇ ಸಾಲಿನ 3 ತಿಂಗಳ ತರಬೇತಿ (Training) ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಅರ್ಜಿಯನ್ನು ಜಿಲ್ಲಾ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು / ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅಥವಾ ಇಲಾಖೆಯ ಅಧಿಕೃತ ಜಾಲತಾಣ https://horticulturedir.karnataka.gov.in ಇದರಲ್ಲಿ ಅಕ್ಟೋಬರ್ 27 ರವರೆಗೆ ಡೌನ್ ಲೋಡ್ ಮಾಡಿಕೊಳ್ಳಬಹುದು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.20, ಪ.ಜಾತಿ ಅಥವಾ ಪಂಗಡದ ಅಭ್ಯರ್ಥಿಗಳಿಗೆ ರೂ.10,
ಅರ್ಜಿ ಶುಲ್ಕವಿದ್ದು, ಇಂಡಿಯನ್ ಪೋಸ್ಟ್ ಲ್ ಆರ್ಡರ್/ ಡಿಡಿ ಯನ್ನು ಜಂಟಿ ನಿರ್ದೇಶಕರು/ ಹಿರಿಯ ಸಹಾಯಕ ನಿರ್ದೇಶಕರ ಹೆಸರಿನಲ್ಲಿ ಪಡೆದು ಅರ್ಜಿಯ ಜೊತೆಗೆ ಲಗತ್ತಿಸಬೇಕು.
ಜೇನುಗಾರಿಕೆ ತರಬೇತಿಗೆ ಕನಿಷ್ಠ ಎಸ್.ಎಸ್.ಎಲ್.ಸಿ ಯನ್ನು ಪೂರ್ಣಗೊಳಿಸಿರಬೇಕು. ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿದ್ದು, ಪಹಣಿಯನ್ನು ಹೊಂದಿರಬೇಕು. ಅರ್ಜಿದಾರರು ವಯೋಮಿತಿ 18-35 ವರ್ಷ ವಾಗಿರಬೇಕು. ಅರ್ಜಿಯನ್ನು ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಜಂಟಿ ನಿರ್ದೇಶಕರು ಅಥವಾ ಹಿರಿಯ ಸಹಾಯಕ ನಿರ್ದೇಶಕರು ದೂ.ಸಂಖ್ಯೆ:8660409618, ಹಿರಿಯ ಸಹಾಯಕ ನಿರ್ದೇಶಕರು ದೇವನಹಳ್ಳಿ ತಾಲ್ಲೂಕು 9480461234, ದೊಡ್ಡಬಳ್ಳಾಪುರ ತಾಲ್ಲೂಕು 9482129648, ಹೊಸಕೋಟೆ ತಾಲ್ಲೂಕು 9880210892, ನೆಲಮಂಗಲ ತಾಲ್ಲೂಕು 98804461607 ಗೆ ಸಂಪರ್ಕಸಬಹುದು ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.