ಪಟ್ನಾ: ಕೇಂದ್ರ ಸರ್ಕಾರದ ವಿರುದ್ಧ ವೋಟ್ ಚೋರಿ ಆರೋಪ, ನಿರುದ್ಯೋಗ ಸಮಸ್ಯೆ ಮುಂದುಮಾಡಿ ಬಿಹಾರ ವಿಧಾನಸಭಾ ಚುನಾವಣೆಗೆ (Bihar election) ತೊಡೆತಟ್ಟಿರುವ ವಿರೋಧ ಪಕ್ಷಗಳ ಒಕ್ಕೂಟ ‘ಇಂಡಿಯಾ’ ಬಣವು ಗುರುವಾರ ಆರ್‌ಜೆಡಿ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ (Tejaswi Yadav) ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದೆ.

ಒಕ್ಕೂಟದ ಎಲ್ಲಾ ಪಕ್ಷಗಳ ಸದಸ್ಯರು ಭಾಗವಹಿಸಿದ್ದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಅಶೋಕ್ ಗೆಹಲೋತ್ ಈ ಕುರಿತಂತೆ ಘೋಷಿಸಿದ್ದಾರೆ.
ಈ ನಿರ್ಧಾರವನ್ನು ತಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೆಂಬಲಿಸಿದ್ದಾರೆ ಎಂದು ಹೇಳಿದ್ದಾರೆ.
‘ಇಂಡಿಯಾ’ ಬಣವು ಸರ್ಕಾರ ರಚಿಸಿದರೆ ವಿಕಾಸಶೀಲ ಇನ್ಸಾನ್ ಪಕ್ಷದ (ವಿಐಪಿ) ಮುಖ್ಯಸ್ಥ ಮುಖೇಶ್ ಸಾಹಿ ಉಪಮುಖ್ಯಮಂತ್ರಿ ಹುದ್ದೆಗೆ ಏರಲಿದ್ದಾರೆ. ಅದೇ ರೀತಿ ಹಿಂದುಳಿದ ವರ್ಗಗಳ ಮತ್ತೊಬ್ಬ ನಾಯಕನಿಗೆ ಉಪಮುಖ್ಯಮಂತ್ರಿ ಹುದ್ದೆ ಸಿಗಲಿದೆ ಎಂದು ಹೇಳಿದ್ದಾರೆ.
ಬಿಹಾರದಲ್ಲಿ ನ.6 ಮತ್ತು 11ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನ.14ರಂದು ಮತ ಎಣಿಕೆ ನಡೆಯಲಿದೆ.