ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ (Kitturu rani cennamma) ಅಂಗವಾಗಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೇವನಹಳ್ಳಿ ತಾಲ್ಲೂಕಿನ, ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು.

ಕಿತ್ತೂರು ರಾಣಿ ಚೆನ್ನಮ್ಮ ಅವರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಸಮುದಾಯದ ಮುಖಂಡರು ಉಪಸ್ಥಿತರಿದ್ದರು.