D.K. Shivakumar's visit to Hindu temples is of no use: R. Ashoka

ಡಿ.ಕೆ. ಶಿವಕುಮಾರ್ ಹಿಂದೂ ದೇವಸ್ಥಾನಗಳಿಗೆ ಹೋಗಿ ಪ್ರಯೋಜನವಿಲ್ಲ: ಆರ್‌.ಅಶೋಕ

ಧಾರವಾಡ: ರಾಜ್ಯ ಸರ್ಕಾರದಲ್ಲಿ ಸಿಎಂ ಬದಲಾವಣೆಯಾಗಲಿದೆ. ಆ ವಿಷಯವನ್ನು ಬೇರೆಡೆ ತಿರುಗಿಸಲು ಆರ್‌ಎಸ್‌ಎಸ್‌ ವಿಷಯವನ್ನು ತರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕೋಪಯೋಗಿ, ಶಿಕ್ಷಣ, ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳಲ್ಲೂ ಕಾಂಗ್ರೆಸ್‌ ಸರ್ಕಾರ ವಿಫಲವಾಗಿದ್ದು, ಖಾಲಿ ಡಬ್ಬ ಶಬ್ದ ಮಾಡುವಂತೆ ಮಾಡುತ್ತಿದ್ದಾರೆ. ಬಿಜೆಪಿ ಅವಧಿಯಲ್ಲಿ ಹಣ ಬಿಡುಗಡೆ ಮಾಡಿ, ಟೆಂಡರ್‌ ಮಾಡಿದ ಕಾಮಗಾರಿಗಳನ್ನು ಕಾಂಗ್ರೆಸ್‌ ನಾಯಕರು ಉದ್ಘಾಟಿಸುತ್ತಿದ್ದಾರೆ.

ಆರ್ಥಿಕ ಇಲಾಖೆಯಲ್ಲಿ ಯಾವ ಯೋಜನೆಗೂ ಹಣವಿಲ್ಲ. ಬಜೆಟ್‌ನಲ್ಲಿ ಒಟ್ಟು ಅನುದಾನ 80 ಸಾವಿರ ಕೋಟಿ ರೂ. ಇದ್ದರೆ, ಗ್ಯಾರಂಟಿಗಳಿಗೆ 60-70 ಸಾವಿರ ಕೋಟಿ ರೂ. ಆಗುತ್ತದೆ. ಉಳಿದ 10 ಸಾವಿರ ಕೋಟಿ ರೂ. ನಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌, ಸಚಿವರ ಮನೆಯ ದುರಸ್ತಿ, ಕಾಂಗ್ರೆಸ್‌ ಸಮಾವೇಶಕ್ಕೆ, ಜಾತಿ ಗಣತಿಗೆ ಖರ್ಚು ಮಾಡುತ್ತಿದ್ದಾರೆ. ಈ ಸರ್ಕಾರ ಪಾಪರ್‌ ಆಗಿದೆ ಎಂದರು.

ಮಾಧ್ಯಮಗಳಲ್ಲಿ ರಸ್ತೆ ಗುಂಡಿಗಳ ಬಗ್ಗೆ ಸುದ್ದಿ ಬರುತ್ತಿದೆ. ಆ ವಿಚಾರವನ್ನು ಬೇರೆ ಕಡೆ ತಿರುಗಿಸಲು ಸಚಿವ ಪ್ರಿಯಾಂಕ್‌ ಖರ್ಗೆ ಆರ್‌ಎಸ್‌ಎಸ್‌ ಬಗ್ಗೆ ಮಾತಾಡುತ್ತಿದ್ದಾರೆ. ಆರ್‌ಎಸ್‌ಎಸ್‌ ನೋಂದಣಿ ಮಾಡಬೇಕೆಂದು ಎಲ್ಲೂ ನಿಯಮವಿಲ್ಲ.

ಸಂವಿಧಾನದಲ್ಲಿ ಆ ರೀತಿಯ ನಿಯಮವಿಲ್ಲ. ಸಾಧನೆಗಳು ಇಲ್ಲದೆ ಅಭಿವೃದ್ಧಿ ಮೂಲೆಗುಂಪಾಗಿದೆ. ಆರ್‌ಎಸ್‌ಎಸ್‌ ವಿರುದ್ಧ ಇವರ ತಾತ ಮುತ್ತಾತನ ಕಾಲದಿಂದಲೂ ಏನೂ ಮಾಡಿಲ್ಲ. ನೌಕರರಿಗೆ, ಅಂಗನವಾಡಿ ಕಾರ್ಯಕರ್ತರಿಗೆ ಸಂಬಳ ನೀಡಿಲ್ಲ. ಹಣದ ಬದಲು ಹೆಣಗಳು ಬೀಳುತ್ತಿದೆ, ಆತ್ಮಹತ್ಯೆಗಳು ನಡೆಯುತ್ತಿದೆ. ಈ ಸರ್ಕಾರ ಯಾವಾಗ ತೊಲಗುತ್ತದೆ ಎಂದು ಜನರು ಕೂಡ ಕಾಯುತ್ತಿದ್ದಾರೆ ಎಂದರು.

ನಾನು ನವೆಂಬರ್‌ ಕ್ರಾಂತಿ ಎಂದಾಗ ಬಿಜೆಪಿಯವರು ಬುರುಡೆ ಬಿಡುತ್ತಿದ್ದಾರೆ ಎಂದರು. ಈಗ ಯತೀಂದ್ರ ಸಿದ್ದರಾಮಯ್ಯ ಅದನ್ನೇ ಹೇಳುತ್ತಿದ್ದಾರೆ. ಕೆ.ಎನ್‌.ರಾಜಣ್ಣ ಹೇಳಿದಾಗ ಅವರನ್ನು ಸಚಿವ ಸ್ಥಾನದಿಂದ ಕಿತ್ತುಹಾಕಿದರು.

ಡಿ.ಕೆ.ಶಿವಕುಮಾರ್‌ ನಾಮ ಹಾಕಿಕೊಂಡು ಟೆಂಪಲ್‌ ರನ್‌ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯನವರಿಗೆ ನಾಮ ಹಾಕಲು ಎಲ್ಲರೂ ಸಿದ್ಧತೆ ಮಾಡುತ್ತಿದ್ದಾರೆ. ಯತೀಂದ್ರ ಅವರ ಹೇಳಿಕೆ ಬಂದಿರುವುದು ಸಿದ್ದರಾಮಯ್ಯನವರ ಕಡೆಯಿಂದಲೇ ಎಂದರು.

ಗುತ್ತಿಗೆದಾರರಿಗೆ ಸುಮಾರು 30 ಸಾವಿರ ಕೋಟಿ ರೂ. ಬಿಲ್‌ ನೀಡಿಲ್ಲ. ಗುತ್ತಿಗೆದಾರರ ಸಂಘ ಬಿಜೆಪಿ ಕಮಿಶನ್‌ ಬಗ್ಗೆ ಹೇಳಿದ್ದರು. ಈಗ ಕಾಂಗ್ರೆಸ್‌ ಅವಧಿಯಲ್ಲೇ 60 ಪರ್ಸೆಂಟ್‌ ಕಮಿಶನ್‌ ಇದೆ ಎಂದು ಹೇಳುತ್ತಿದ್ದಾರೆ. ಉದ್ಯಮಿ ಮೋಹನ್‌ದಾಸ್‌ ಪೈ ಕೂಡ ಇದನ್ನೇ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಕಲೆಕ್ಷನ್‌ ಸಭೆ ಮಾಡಿ, ಬಿಹಾರ ಚುನಾವಣೆಗಾಗಿ 300-400 ಕೋಟಿ ರೂ. ಸಂಗ್ರಹ ಮಾಡಬೇಕೆಂದು ಸೂಚನೆ ನೀಡಿದ್ದಾರೆ. ಸಚಿವ ಸ್ಥಾನ ಉಳಿಯಲು ಕಪ್ಪ ಕಾಣಿಕೆ ಕೊಡಿ ಎಂದು ಹೇಳಿ ಇಲಾಖಾವಾರು ಫಿಕ್ಸ್‌ ಮಾಡಿದ್ದಾರೆ. ಹಣ ನೀಡದಿದ್ದರೆ ಎಲ್ಲರನ್ನೂ ಕಳಿಸುತ್ತಾರೆ ಎಂದರು.

ಡಿ.ಕೆ.ಶಿವಕುಮಾರ್‌ ದಾರಿ ತಪ್ಪಿದ ಮಗ ಆಗಿದ್ದಾರೆ. ದೆಹಲಿಯಲ್ಲಿರುವ ಇಟಲಿ ದೇವಸ್ಥಾನವನ್ನು ಅವರು ಸುತ್ತಬೇಕಿದೆ. ಹಿಂದೂ ದೇವಸ್ಥಾನಗಳಿಗೆ ಹೋಗಿ ಪ್ರಯೋಜನವಿಲ್ಲ ಎಂದರು.

ವಿಧಾನಪರಿಷತ್‌ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ಚರ್ಚೆ ನಡೆದಿದೆ. ಜೊತೆಗೆ ಸಂಘಟನೆ ಹೆಚ್ಚಿಸಲು ಹುಬ್ಬಳ್ಳಿಗೆ ಭೇಟಿ ನೀಡಿದ್ದೇನೆ. ಕಾರ್ಯಕರ್ತರ ಅಭಿಪ್ರಾಯ ಪಡೆದು, ವರಿಷ್ಠರ ಅಭಿಪ್ರಾಯ ಪಡೆದು ಅಭ್ಯರ್ಥಿಗಳನ್ನು ನಿರ್ಧರಿಸಲಾಗುವುದು ಎಂದು ತಿಳಿಸಿದರು.

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!