ಕೆಆರ್‌ಎಸ್ ವರ್ಷದಲ್ಲಿ 3ನೇ ಬಾರಿ ಭರ್ತಿ..!

KRS fills up for the 3rd time in a year..!

ಮೈಸೂರು: ಕಾವೇರಿ ಈಗ ಸಂತೃಪ್ತಿಯಾಗಿ ಮೈದುಂಬಿ ಹರಿಯುತ್ತಿದ್ದಾಳೆ. ಒಂದೇ ವರ್ಷದಲ್ಲಿ ಮೂರನೇ ಬಾರಿ ಕೃಷ್ಣರಾಜ ಸಾಗರ ಜಲಾಶಯ (KRS) ಭರ್ತಿಯಾಗಿ ಇತಿಹಾಸ ನಿರ್ಮಾಣವಾಗಿರುವುದು ಮಾತ್ರವಲ್ಲದೆ ಬೆಂಗಳೂರಿಗೆ ಬೇಸಿಗೆಯ ನೀರಿನ ಕೊರತೆ ಕೂಡ ಕಣ್ಮರೆಯಾಗುತ್ತದೆ. ಜೊತೆಗೆ ತಮಿಳುನಾಡಿಗೆ ಈ ವರ್ಷ ಕರ್ನಾಟಕದಿಂದ ಹರಿಸಬೇಕಿದ್ದ ನೀರಿನ ಹಂಚಿಕೆಯ ಸಮಸ್ಯೆ ಕೂಡ ಬಗೆಹರಿದಂತಾಗಿದೆ.

ಕೆಆರ್‌ಎಸ್ ವರ್ಷದಲ್ಲಿ 3ನೇ ಬಾರಿ ಭರ್ತಿ..!

ಸರ್ವೋಚ್ಚ ನ್ಯಾಯಾಲಯದ ಆದೇಶದ ಪ್ರಕಾರ (16/6/2018ರಂತೆ) ತಮಿಳುನಾಡಿಗೆ ವರ್ಷಕ್ಕೆ 177.25 ನೀರನ್ನು ಹರಿಸಬೇಕಿತ್ತು.‌ ಜೂನ್‌ ನಿಂದ ಜೂನ್ ವರೆಗಿನ ಜಲವರ್ಷ ಪ್ರಕಾರ ಜೂನ್ 2025ರಿಂದ ಇಲ್ಲಿಯವರೆಗೆ 138.014 ಟಿಎಂಸಿ ನೀರು ಬಿಳಿಗೊಂಡ್ಲು ಜಲ ಮಾಪನ ಕೇಂದ್ರದಿಂದ ತಮಿಳುನಾಡಿಗೆ ಬಿಡಬೇಕಿತ್ತು.

ಈ ವರ್ಷ ಉತ್ತಮ ಮಳೆ ಹಿನ್ನೆಲೆಯಲ್ಲಿ 273.426 ಟಿಎಂಸಿ ನೀರು ಹರಿದು ಹೋಗಿದ್ದು, ಹೆಚ್ಚುವರಿಯಾಗಿ, 135.412 ಟಿಎಂಸಿ ನೀರು ಹರಿದುಹೋಗುತ್ತಿದೆ. ಹೀಗಾಗಿ ಈ ವರ್ಷ ತಮಿಳುನಾಡು ಹಾಗೂ ಕರ್ನಾಟಕದ ಕಾವೇರಿ ನದಿ ನೀರು ಹಂಚಿಕೆ ವಿಚಾರದ ಸಮಸ್ಯೆ ಪ್ರಕೃತಿದತ್ತವಾಗಿ ಬಗೆಹರಿದಿದೆ.

ಇನ್ನೂ ಈ ವರ್ಷ ಬೆಂಗಳೂರಿನ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ. ಕಾವೇರಿ ಜಲಾನಯನ ಪ್ರದೇಶದ ಹಾರಂಗಿ, ಕೆಆರ್ ಎಸ್, ಕಬಿನಿ, ಹೇಮಾವತಿ ಜಲಾಶಯಗಳು ಅಕ್ಟೋಬರ್ ನಲ್ಲಿ ಮತ್ತೆ ಭರ್ತಿಯಾಗಿ, 115 ಟಿಎಂಸಿ ನೀರು ಸಂಗ್ರಹವಿದೆ.

ಇದರ ಜೊತೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಕಾವೇರಿ ನೀರಾವರಿ ನಿಗಮದ 6576 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ. ಅಲ್ಲದೆ ಸಣ್ಣ ನೀರಾವರಿ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಯ ಕೆರೆಗಳು ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ಬೆಂಗಳೂರಿಗೆ ನೀರಿನ ಸಮಸ್ಯೆ ತಲೆದೋರುವುದಿಲ್ಲ.

ಬೆಂಗಳೂರಿಗೆ ವರ್ಷಕ್ಕೆ 31 ಟಿಎಂಸಿ ನೀರು ಕುಡಿಯುವ ನೀರಿಗೆ ಬೇಕಿದೆ. ಅಂದರೆ ಪ್ರತಿ ತಿಂಗಳು ಬೆಂಗಳೂರಿಗರಿಗೆ 2.60 ಟಿಎಂಸಿ ನೀರಿನ ಅವಶ್ಯಕತೆ ಇದೆ. ಕೆಆರ್ ಎಸ್ ಜೊತೆಗೆ ಕಾವೇರಿ ಜಲಾನಯನ ಪ್ರದೇಶದ ಅಣೆಕಟ್ಟುಗಳು, ಕೆರೆಗಳು ಭರ್ತಿಯಾಗಿದ್ದು ಬೆಂಗಳೂರಿಗೆ ಈ ಬೇಸಿಗೆಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರುವುದಿಲ್ಲ.

ಬಿಳಿಗೊಂಡ್ಲು ಜಲಮಾಪನ ಕೇಂದ್ರದಿಂದ ತಮಿಳುನಾಡಿಗೆ ಹರಿದ ನೀರು

ಕೆಆರ್ ಎಸ್ ಭರ್ತಿ ಹಿನ್ನೆಲೆ ತಮಿಳುನಾಡಿಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚುವರಿ ನೀರು ಹರಿದುಹೋಗುತ್ತಿದೆ. ಬಿಳಿಗೊಂಡ್ಲು ಮಾಪನ ಕೇಂದ್ರದಿಂದ ಜೂನ್‌ ನಲ್ಲಿ 9.19 ಟಿಎಂಸಿಗೆ ಬದಲಿಗೆ 42.256 ಟಿಎಂಸಿ, ಜುಲೈನಲ್ಲಿ 31.24 ಟಿಎಂಸಿ ಬದಲಿಗೆ 103.514 ಟಿಎಂಸಿ, ಆಗಸ್ಟ್ ನಲ್ಲಿ 45.95 ಟಿಎಂಸಿ ಬದಲಿಗೆ 51.943 ಟಿಎಂಸಿ, ಸೆಪ್ಟೆಂಬರ್ ನಲ್ಲಿ 36.76 ಟಿಎಂಸಿ ಬದಲಿಗೆ 40.790 ಟಿಎಂಸಿ, ಅಕ್ಟೋಬರ್ ನಲ್ಲಿ 14.35 ಟಿಎಂಸಿ ಬದಲಿಗೆ 31.344 ಟಿಎಂಸಿಯಂತೆ ಈ ವರ್ಷ ತಮಿನಾಡಿಗೆ ಇದುವರೆಗೆ 138.014 ಟಿಎಂಸಿ ನೀರಿನ ಬದಲಿಗೆ 273.426 ಟಿಎಂಸಿ ನೀರು ಹರಿದುಹೋಗಿದೆ.

ವಿಶೇಷ ಎಂದರೆ ಸುಪ್ರೀಂ ಕೋರ್ಟ್ ಆದೇಶದಂತೆ ಜೂನ್ 2025ರಿಂದ ಮೇ 2026ರವರೆಗೆ ಬಿಳಿಗೊಂಡ್ಲು ಜಲಾಶಯ ಮಾಪನ ಕೇಂದ್ರದಿಂದ 177.25 ಟಿಎಂಸಿ ನೀರನ್ನು ತಮಿಳುನಾಡಿಗೆ ಬೀಡಬೇಕಿತ್ತು. ಆದರೆ ಕೇವಲ ಐದೇ ತಿಂಗಳಲ್ಲಿ 273.426 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿದುಹೋಗುವ ಮೂಲಕ ವರ್ಷದ ನಿಗದಿತ ಪ್ರಮಾಣಕ್ಕಿಂತ 135.412 ಟಿಎಂಸಿ ನೀರನ್ನು ಈಗಾಗಲೇ ಹೆಚ್ಚುವರಿಯಾಗಿ ಹರಿದುಹೋಗಿದೆ.

ಅಕ್ಟೋಬರ್ ಮೂರನೇ ವಾರ ಕೆಆರ್ ಎಸ್ ನಲ್ಲಿ ಗರಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದ್ದು ಹೊರಹರಿವಿನ ಪ್ರಮಾಣವನ್ನು ಕೂಡ ಹೆಚ್ಚಿಸಲಾಗಿದೆ. ಕೆಆರ್ ಎಸ್ ನಿಂದ ಹೊರಹರಿವು 20,540 ಕ್ಯೂಸೆಕ್ಸ್ ಇದೆ. ಬಿಳಿಗೊಂಡ್ಲು ಮಾಪನ ಕೇಂದ್ರದಲ್ಲಿ ಹೊರಹರಿವು 41,424 ಕ್ಯೂಸೆಕ್ಸ್ ನಷ್ಟಿದೆ.

93 ವರ್ಷದ ಬಳಿಕ ಮೂರನೇ ಬಾರಿ ಕೆಆರ್ ಎಸ್ ಭರ್ತಿ

2024ರಲ್ಲಿ ಕಾಡಿದ ಬರ 2025ರಲ್ಲಿ ಕಣ್ಮರೆಯಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಪರಿಣಾಮ 93 ವರ್ಷದ ಬಳಿಕ ಕೆಆರ್ ಎಸ್ ಜೂನ್ ನಲ್ಲೇ ಭರ್ತಿಯಾಗಿ ಇತಿಹಾಸ ಸೃಷ್ಟಿಸಿತು. ನಂತರ ಅಕ್ಟೋಬರ್ ಎರಡನೇ ವಾರದಲ್ಲಿ ಜಲಾಶಯ ಎರಡನೇ ಬಾರಿ ಭರ್ತಿಯಾಗಿತ್ತು. ಅ.18-23ರವರೆಗೆ ಅಣೆಕಟ್ಟೆಯ ಗರಿಷ್ಠ ಸಾಮರ್ಥ್ಯ 124.80 ಅಡಿಗಳಷ್ಟು ನೀರು ಸಂಗ್ರಹ ಕಾಯ್ದುಕೊಳ್ಳುವ ಮೂಲಕ ವರ್ಷದಲ್ಲಿ ಮೂರನೇ ಬಾರಿ ಜಲಾಶಯ ಭರ್ತಿಯಾಗಿ ದಾಖಲೆ ನಿರ್ಮಿಸಿದೆ. 93 ವರ್ಷದಲ್ಲಿ 16 ಬಾರಿ ಮಾತ್ರ ಕೆಆರ್ ಎಸ್ ಭರ್ತಿಯಾಗಿಲ್ಲ.

ಉತ್ತಮ ಮಳೆ

ಬೀದರ್ ನಿಂದ ಚಾಮರಾಜನಗರದವರೆಗೆ, ಬಳ್ಳಾರಿಯಿಂದ ಕೋಲಾರದವರೆಗೆ ರಾಜ್ಯಾದ್ಯಂತ ಉತ್ತಮ ಮಳೆಯಾಗಿದೆ. ಜಲಾಶಯಗಳು, ಕೆರೆಕಟ್ಟೆಗಳು ಭರ್ತಿಯಾಗಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಕೃಷಿಗೆ ಯಾವುದೇ ತೊಂದರೆ ಇಲ್ಲ. ನಮ್ಮ ಸರ್ಕಾರ ವರುಣನ ಕೃಪೆಗೆ ಪಾತ್ರವಾಗಿದೆ: ಡಿ.ಕೆ.ಶಿವಕುಮಾರ್:
ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರು, ಕರ್ನಾಟಕ ಸರ್ಕಾರ.

ರಾಜಕೀಯ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ರಾಜ್ಯ ಬಿಜೆಪಿಯ ಹಿರಿಯ ಮುತ್ಸದ್ದಿ ಬಿ.ಎಸ್. ಯಡಿಯೂರಪ್ಪ (B.S. Yediyurappa) ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ. ಕಾರ್ಯಕ್ರಮದ ಸ್ಥಳಗಳಲ್ಲಿ ಪೆಂಡಾಲ್, ಸ್ಟೇಜ್ ಮುಂತಾದ

[ccc_my_favorite_select_button post_id="121304"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!