ದೊಡ್ಡಬಳ್ಳಾಪುರ: ತಾಲೂಕಿನ ರಾಜಘಟ್ಟ (Rajaghatta) ಗ್ರಾಮದ ಶ್ರೀ ಮಾರುತಿ ಪ್ರೌಢಶಾಲೆಯ ( Sri Maruthi High School) ಹಳೆಯ ವಿದ್ಯಾರ್ಥಿಗಳ ಬಳಗದಿಂದ (Alumni)ಇಂದು ನಮ್ಮ ಶಾಲೆ ನಮ್ಮ ಹಕ್ಕು ಎಂಬ ಹೆಸರಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು ಸುಮಾರು 53 ವರ್ಷಗಳ ಹಿಂದೆ 1972ರಲ್ಲಿ ಅಂದಿನ ದೊಡ್ಡಬಳ್ಳಾಪುರ ಶಾಸಕರಾದ ಜಿ.ರಾಮೇಗೌಡರ ಸಹಕಾರದಿಂದ ಪ್ರಾರಂಭವಾಗಿ ಹಿಂದಿನಿಂದಲೂ ಸರ್ಕಾರಿ ಅನುದಾನದಿಂದ ನಡೆಯುತ್ತಿದ್ದ ಈ ಶ್ರೀ ಮಾರುತಿ ಪ್ರೌಢಶಾಲೆಯ ಸ್ಥಳದಲ್ಲಿ ಬೆಂಗಳೂರಿನ ಖಾಸಗಿ ಸಂಸ್ಥೆಯ ಆಡಳಿತ ಮಂಡಳಿಯ ಕೆಲವು ಸದಸ್ಯರು, ಕಟ್ಟಡ ನಿರ್ಮಿಸಿಕೊಂಡು ಕಳೆದ 5 ವರ್ಷಗಳಿಂದ ಖಾಸಗಿ ಶಾಲೆ ಶಾಲೆಯನ್ನು ನಡೆಸುತ್ತಿದ್ದಾರೆ.
ಇದು ಈಗ ನಮ್ಮ ಸರ್ಕಾರಿ ಅನುದಾನಿತ ಶ್ರೀ ಮಾರುತಿ ಪ್ರೌಢಶಾಲೆಯ ಅಳಿವು ಉಳಿವಿನ ಪ್ರಶ್ನೆಯಾಗಿದ್ದು, ಈ ಹಿನ್ನೆಲೆಯಲ್ಲಿ ಶಾಲೆಯ ಉಳಿವಿಗಾಗಿ ಹಳೆಯ ವಿದ್ಯಾರ್ಥಿಗಳಿಂದ ಲಯನ್ಸ್ ಕ್ಲಬ್ ಯಲಹಂಕ ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ.
ಶಿಬಿರದಲ್ಲಿ ಸುಮಾರು 100ಕ್ಕೂ ಹೆಚ್ಚಿನ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.