Preparation for elections; JDS committee formed by H.D. Kumaraswamy order

ಗ್ರೇಟರ್ ಬೆಂಗಳೂರು ಚುನಾವಣೆಗೆ ತಯಾರಿ; JDS ಉಸ್ತುವಾರಿ ಸಮಿತಿ ರಚಿಸಿ ಹೆಚ್.ಡಿ. ಕುಮಾರಸ್ವಾಮಿ ಆದೇಶ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ ನೂತನ 5 ಪಾಲಿಕೆಗಳ ಚುನಾವಣೆಗಳ ವ್ಯಾಪ್ತಿಯಲ್ಲಿ ಪಕ್ಷದ ಬಲವರ್ಧನೆ ಹಾಗೂ ಸಂಘಟನೆ ದೃಷ್ಟಿಯಿಂದ ಜೆಡಿಎಸ್ (JDS) ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು ಉಸ್ತುವಾರಿ ಸಮಿತಿ ರಚನೆ ಮಾಡಿದ್ದಾರೆ.

ಇತ್ತೀಚೆಗೆ ನಡೆದ ಪಕ್ಷದ ಶಾಸಕರ ಮತ್ತು ಕೋರ್ ಕಮಿಟಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಉಸ್ತುವಾರಿ ಸಮಿತಿಯನ್ನು ರಚಿಸಲಾಗಿದೆ

ಸಮಿತಿಯಲ್ಲಿ ಯಾರು ಯಾರು?

ಬೆಂಗಳೂರು ಕೇಂದ್ರ, ಪಶ್ಚಿಮ, ದಕ್ಷಿಣ, ಪೂರ್ವ ಮತ್ತು ಉತ್ತರ ನಗರ ಪಾಲಿಕೆಗಳ ಉಸ್ತುವಾರಿಗಳನ್ನಾಗಿ ಅರಕಲಗೂಡು ಶಾಸಕ ಎ. ಮಂಜು, ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಟಿ.ಎನ್. ಜವರಾಯಿಗೌಡ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಉಪ ಸ್ಪೀಕರ್ ಎಂ. ಕೃಷ್ಣಾರೆಡ್ಡಿ, ಕ್ಷೇತ್ರದ ಮಾಜಿ ಶಾಸಕರಾದ ಸುರೇಶ್‌ ಗೌಡ, ಎ. ಮಂಜುನಾಥ್, ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್‌ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಎ. ತಿಪ್ಪೇಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷರು ಆದೇಶ ಹೊರಡಿಸಿದ್ದಾರೆ.

ಉಸ್ತುವಾರಿ ಸಮಿತಿಯ ಜವಾಬ್ದಾರಿಗಳು

ಹೊಸದಾಗಿ ರಚಿತವಾಗಿರುವ ನಗರ ಪಾಲಿಕೆಗಳಲ್ಲಿ ವಾರ್ಡ್ ವಾರು ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಮುಖಂಡರು, ಮಾಜಿ ನಗರ ಪಾಲಿಕೆ ಸದಸ್ಯರುಗಳು ಮತ್ತು ಹಿಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳನ್ನು ಒಳಗೊಂಡ ಉಸ್ತುವಾರಿ ಸಮಿತಿಗಳನ್ನು ರಚಿಸಿ, ಈ ಸಮಿತಿಗಳ ಕಾರ್ಯಗಳನ್ನು ಕಾಲಾನುಕಾಲಕ್ಕೆ ವಿಮರ್ಶಿಸುವುದು.

ಪಾಲಿಕೆವಾರು ಪಕ್ಷದ ಸದಸ್ಯತ್ವ ನೊಂದಣಿ ಅಭಿಯಾನ ಕಾರ್ಯಕ್ರಮ ರೂಪಿಸಿ, ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಸಭೆಗಳನ್ನು ವಾರ್ಡ್‌ವಾರು ಮತ್ತು ವಿಧಾನಸಭಾ ಕ್ಷೇತ್ರವಾರು ಅಯೋಚಿಸುವುದು.

ಪಾಲಿಕೆಗಳಲ್ಲಿ ವಾರ್ಡ್ ವಾರು ಕಾರ್ಯಕರ್ತರ ಹಾಗೂ ಪ್ರಮುಖರ ಮುಖಂಡತ್ವವನ್ನು ಹಾಗೂ ಮುಂಬರುವ ನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲಿಚ್ಛಿಸುವ ಆಕಾಂಕ್ಷಿಗಳ ಸಾಮರ್ಥ್ಯವನ್ನು ಆಧರಿಸಿ, ವಾರ್ಡ್‌ಾರು ಪಕ್ಷದ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿ ಪಕ್ಷದ ರಾಜ್ಯ ಕಚೇರಿಗೆ ಸಲ್ಲಿಸುವುದು.

ಮುಂಬರುವ ನಗರ ಪಾಲಿಕೆ ಚುನಾವಣೆಯಲ್ಲಿ ಎನ್.ಡಿ.ಎ. ಮೈತ್ರಿಕೂಟದ ಪಕ್ಷಗಳೊಂದಿಗೆ ಸಮನ್ವಯ ಮತ್ತು ಚುನಾವಣಾ ಹೊಂದಾಣಿಕೆ ಬಗ್ಗೆ ಸಮಿತಿಯು ರೂಪುರೇಷೆಗಳನ್ನು ರೂಪಿಸಿ ಕಾರ್ಯತಂತ್ರ ರೂಪಿಸಬೇಕು ಎಂದು ರಾಜ್ಯಾಧ್ಯಕ್ಷರು ಉಸ್ತುವಾರಿ ಸಮಿತಿ ಸದಸ್ಯರಿಗೆ ಸೂಚಿಸಿದ್ದಾರೆ.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!