ಚಿಕ್ಕಬಳ್ಳಾಪುರ; ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ ಸಾದಲಿ ಕ್ರಾಸ್ ಬಳಿ ಕಳೆದ ರಾತ್ರಿ ನಡೆದಿದೆ.
ಘಟನೆಯಲ್ಲಿ ಬೊಲೆರೋ ವಾಹನ ಪಲ್ಟಿಯಾಗಿ ಬಿದ್ದಿದ್ದರೆ, ಕಾರು ನಜ್ಜುಗುಜ್ಜಾಗಿದೆ. ಆದರೆ ಅದೃಷ್ಟವಶಾತ್ ಎಲೆಕ್ಟ್ರಿಕ್ ಕಾರು ಹೊತ್ತಿ ಉರಿದಿಲ್ಲ.
ಘಟನೆ ಬಳಿಕ ಆಂದ್ರದ ಬಸ್ ದುರಂತ ನೆನೆದು ವಾಹನ ಸವಾರರು ಬೆಚ್ಚಿಬಿದ್ದಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ಗಂಟೆಗಳ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿ, ಟ್ರಾಫಿಕ್ ಜಾಮ್ ಉಂಟಾಗಿತ್ತು.
ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಹಲವರಿಗೆ ಗಾಯಗಳಾಗಿವೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ಪೆರೇಸಂದ್ರ ಸಮೀಪದ ಸಾದಲಿ ಕ್ರಾಸ್ ಇದಾಗಿದ್ದು, ಸ್ಥಳಕ್ಕೆ ಪೆರೇಸಂದ್ರ ಠಾಣೆ ಪೊಲೀಸರು ಬೇಟಿ ಪರಿಶೀಲನೆ ನಡೆಸಿದ್ದಾರೆ.