D.K. Shivakumar should not become a villain in Bengaluru: Opposition Leader R. Ashoka

ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌ ಆಗುವುದು ಬೇಡ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಸ್ತೆಗಳ ಅಭಿವೃದ್ಧಿಯನ್ನು ಮರೆತಿದೆ. ಸಿಎಂ ಸಿದ್ದರಾಮಯ್ಯ ಒಂದು ಲೇಯರ್‌ ಡಾಂಬರೀಕರಣಕ್ಕೆ ಸೂಚನೆ ನೀಡಿದ್ದಾರೆ. ಅದಕ್ಕೆ ಬೇಕಾದ 4-5 ಸಾವಿರ ಕೋಟಿ ರೂ. ಎಲ್ಲಿದೆ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಪ್ರಶ್ನೆ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆಗುಂಡಿಯಿಂದಾಗಿ ಸುಮಾರು ಹನ್ನೆರಡು ಜನರು ಸತ್ತಿದ್ದು, ಇದು ಮೃತ್ಯುಕೂಪವಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಕೂಲಿಂಗ್‌ ಗ್ಲಾಸ್‌ ಹಾಕಿಕೊಂಡು ನಗರ ಪ್ರದಕ್ಷಿಣೆ ಮಾಡಿದರೆ ರಸ್ತೆಗುಂಡಿ ಕಾಣುವುದಿಲ್ಲ. ತೆರಿಗೆ ಪಾವತಿಸಲ್ಲ, ರಸ್ತೆಗುಂಡಿ ನಾವೇ ಮುಚ್ಚುತ್ತೇವೆ ಎಂದು ಜನರು ಹೇಳುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಇಡೀ ರಾಜ್ಯದ ರಸ್ತೆಗಳಲ್ಲಿ ಎಷ್ಟು ಗುಂಡಿ ಇದೆ ಎಂದು ಸರ್ಕಾರ ತಿಳಿಸಿದರೆ, ಗಿನ್ನೆಸ್‌ ದಾಖಲೆಗೆ ಕಳುಹಿಸಬಹುದು ಎಂದು ವ್ಯಂಗ್ಯವಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಮಾಡಿ, ಒಂದು ಲೇಯರ್‌ ಡಾಂಬರೀಕರಣ ಮಾಡಿ ಎಂದು ಸೂಚನೆ ನೀಡಿದ್ದಾರೆ. ಇದಕ್ಕೆ 4-5 ಸಾವಿರ ಕೋಟಿ ರೂ. ಬೇಕಾಗುತ್ತದೆ. ಗ್ರಂಥಪಾಲಕರಿಗೆ, ಅಂಗನವಾಡಿ ಕಾರ್ಯಕರ್ತರಿಗೆ ಸಂಬಳವೇ ಇಲ್ಲ. ಇನ್ನು ಇಷ್ಟೊಂದು ಹಣ ಎಲ್ಲಿದೆ? ಬಿಬಿಎಂಪಿ ಅಸ್ತಿತ್ವದಲ್ಲಿಲ್ಲದೆ ರಸ್ತೆ ಡಾಂಬರೀಕರಣಕ್ಕೆ ಟೆಂಡರ್‌ ಆಗುತ್ತಿಲ್ಲ. ಆದ್ದರಿಂದ ಬೆಂಗಳೂರು ಗ್ರೇಟರ್‌ ಪ್ರಾಧಿಕಾರವನ್ನು ಮುಂದೆ ನಾವು ರದ್ದು ಮಾಡುತ್ತೇವೆ ಎಂದರು.

ಸುರಂಗ ರಸ್ತೆ ಅಸಾಧ್ಯ

ನಗರದ ಶ್ವಾಸಕೋಶದಂತಿರುವ ಲಾಲ್‌ಬಾಗ್‌ನಲ್ಲಿ ಐದಾರು ಎಕರೆ ಪಡೆದು ಸುರಂಗ ರಸ್ತೆ ನಿರ್ಮಿಸಲಾಗುತ್ತದೆ. ನಗರಕ್ಕೆ ಹಸಿರು ನೀಡುವ ಇಂತಹ ಉದ್ಯಾನದಲ್ಲಿ ಸುರಂಗ ಕೊರೆಯಬಾರದು. ಈ ಯೋಜನೆಯಿಂದ ಅಂತರ್ಜಲಕ್ಕೆ ಧಕ್ಕೆಯಾಗುತ್ತದೆ. ಕೆಂಪೇಗೌಡ ಗೋಪುರ ಲಾಲ್‌ಬಾಗ್‌ನಲ್ಲಿದ್ದು, ಅದನ್ನೂ ಸರ್ಕಾರ ಒಡೆದುಹಾಕಬಹುದು. ವಿಜ್ಞಾನಿಗಳು, ಪರಿಸರವಾದಿಗಳು ಏನು ಹೇಳಿದ್ದಾರೆ ಎಂದು ಸರ್ಕಾರ ನೋಡಬೇಕಿದೆ. ಎತ್ತಿನಹೊಳೆ ಯೋಜನೆಯೇ ಇನ್ನೂ ಅನುಷ್ಠಾನವಾಗಿಲ್ಲ.

ಸುರಂಗ ರಸ್ತೆ ಯೋಜನೆ ಕೂಡ ಅದೇ ರೀತಿಯಾಗಲಿದೆ. ಎಷ್ಟೇ ಅನುದಾನ ಹೆಚ್ಚಿದರೂ ಈ ಯೋಜನೆ ಜಾರಿಯಾಗಲು ಸಾಧ್ಯವಿಲ್ಲ. ಮೆಟ್ರೋ ಯೋಜನೆಯನ್ನು ಇದೇ ಹಣದಲ್ಲಿ ವಿಸ್ತರಣೆ ಮಾಡಬಹುದು. ಈ ಯೋಜನೆ ಮಾಡಿ ಡಿ.ಕೆ.ಶಿವಕುಮಾರ್‌ ಬೆಂಗಳೂರಿನ ವಿಲನ್‌ ಆಗುವುದು ಬೇಡ. ಇದರ ವಿರುದ್ಧ ಬಿಜೆಪಿ ಶಾಸಕರೊಂದಿಗೆ ಹೋರಾಟ ಮಾಡಲಾಗುವುದು ಎಂದರು.

ಬೆಳೆ ಹಾನಿ ಪರಿಹಾರವನ್ನು ಕೊಟ್ಟಿಲ್ಲ

ಮಳೆಯಿಂದಾಗಿ ಬೆಳೆ ಹಾನಿ ಪರಿಹಾರವನ್ನು ಇನ್ನೂ ಕೊಟ್ಟಿಲ್ಲ. ಜೊತೆಗೆ ಸೋಯಾ, ಸೂರ್ಯಕಾಂತಿ, ಉದ್ದು, ಹೆಸರು ಮೊದಲಾದ ಬೆಳೆಗಳನ್ನು ಸರ್ಕಾರ ಖರೀದಿಸಬೇಕಿತ್ತು. ಈ ಕುರಿತು ಕೂಡಲೇ ಸರ್ಕಾರ ಕ್ರಮ ವಹಿಸಬೇಕು. ಬೆಲೆ ಕುಸಿದಿರುವ ಈರುಳ್ಳಿಯನ್ನು ಕೂಡಲೇ ಖರೀದಿ ಮಾಡಬೇಕು ಎಂದು ಆಗ್ರಹಿಸಿದರು.

2025-26 ನೇ ಆರ್ಥಿಕ ಸಾಲಿನಲ್ಲಿ 6 ತಿಂಗಳು ಕಳೆದು ಹೋದರೂ ಶೇ.30% ಮಾತ್ರ ಅನುದಾನ ಬಳಕೆಯಾಗಿದೆ. ಆರ್‌ಎಸ್‌ಎಸ್‌ ಬಗ್ಗೆ ಟೀಕೆ ಮಾಡುವ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಇಲಾಖೆಗಳ ಪ್ರದರ್ಶನ ಅತ್ಯಂತ ಕಳಪೆಯಾಗಿದ್ದು, ಆರ್‌ಡಿಪಿಆರ್ ಇಲಾಖೆಯಲ್ಲಿ ಕೇವಲ ಶೇ.11.02% ಐಟಿ-ಬಿಟಿ ಇಲಾಖೆಯಲ್ಲಿ ಕೇವಲ ಶೇ.10.86% ಅನುದಾನ ಬಳಕೆಯಾಗಿದೆ.

ಕಂದಾಯ ಇಲಾಖೆಯಲ್ಲಿ ಶೇ.46, ಪಶುಸಂಗೋಪನೆಯಲ್ಲಿ ಶೇ.44, ಗ್ರಾಮೀಣಾಭಿವೃದ್ಧಿಯಲ್ಲಿ ಶೇ.11 ಹೀಗೆ ಎಲ್ಲ ಇಲಾಖೆಗಳಲ್ಲಿ ಅನುದಾನ ಬಳಕೆಯೇ ಆಗಿಲ್ಲ ಎಂದು ಟೀಕಿಸಿದರು.

ಈಗಾಗಲೇ ನಿವೇಶನ ಪಡೆದವರಿಗೆ ಎ ಖಾತಾಗೆ ವರ್ಗಾವಣೆ ಮಾಡಿಸಲು ಹಣ ಪಾವತಿಸಬೇಕು. ಇದನ್ನು ಕ್ರಾಂತಿ ಎನ್ನುತ್ತಿದ್ದಾರೆ. ಆದ್ದರಿಂದ ಜನರು ಎಚ್ಚರಿಕೆಯಿಂದ ಇರಬೇಕು. ಇದು ಹಣ ವಸೂಲಿ ಮಾಡುವ ಸ್ಕೀಮ್‌ ಎಂದರು.

ನವೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂದು ನಾನು ಹೇಳಿದ್ದಾಗ ಟೀಕೆ ಮಾಡಿದ್ದರು. ಈಗ ಕಾಂಗ್ರೆಸ್‌ ನಾಯಕರೇ ಹೇಳುತ್ತಿದ್ದಾರೆ. ಸಿಎಂ ಬದಲಾವಣೆ ಖಚಿತ ಎಂದರು.

ರಾಜಕೀಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ (Prahlad Joshi) ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ

[ccc_my_favorite_select_button post_id="118281"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!