ದೊಡ್ಡಬಳ್ಳಾಪುರ: ತಾಲೂಕಿಗೆ ಹೊಂದಿಕೊಂಡಂತಿರುವ ಕೊರಟಗೆರೆ ತಾಲೂಕಿನ ಹೊಳೆ ನಂಜುಂಡೇಶ್ವರ ದೇವಾಲಯದಲ್ಲಿ ( Hole Nanjundeshwara Temple) ಮೊದಲನೇ ಕಾರ್ತಿಕ ಸೋಮವಾರದ (Kartika somavara) ಅಂಗವಾಗಿ ಇಂದು ವಿಶೇಷ ಪೂಜೆ ನೆರವೇರಿಸಲಾಯಿತು.
ಮುಂಜಾನೆ 4.30ರಿಂದ ಆರಂಭವಾದ ಪೂಜಾ ಕಾರ್ಯಕ್ರಮದಲ್ಲಿ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ಹಾಗೂ ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.
ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ರಾಮನಗರ ಮತ್ತಿತರರ ಕಡೆಗಳಿಂದ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ, ದೇವರಿಗೆ ಪೂಜೆ ಸಲ್ಲಿಸುತ್ತಿದ್ದಾರೆ.
ದೇವಾಲಯಕ್ಕೆ ಬರುವ ಭಕ್ತರಿಗೆ ಪ್ರಸಾದ ವಿನಿಯೋಗ ಕೂಡ ನಡೆಸಲಾಗುತ್ತಿದೆ.