ಚನ್ನಮ್ಮ ಸಮಾಧಿ ಸ್ಥಳ ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲು ಕೇಂದ್ರಕ್ಕೆ ಪ್ರಸ್ತಾವನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Proposal to the Center to declare Channamma's Samadhi site as a national monument: Cmsiddaramaiah

ಬೆಳಗಾವಿ: ಕಿತ್ತೂರು ರಾಣಿ‌ ಚನ್ನಮ್ಮನ ಸಮಾಧಿ ಸ್ಥಳವನ್ನು ರಾಷ್ಟ್ತೀಯ ಸ್ಮಾರಕವಾಗಿ ಘೋಷಿಸಲು ಕೇಂದ್ರ ಸರಕಾರಕ್ಕೆ ಈಗಾಗಲೇ ಪ್ರಸ್ತಾವನೆ ಕಳಿಸಲಾಗಿದೆ. ಬೆಳಗಾವಿ ವಿಮಾನ‌ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮನ ಹೆಸರು ಇಡಲು ಕೇಂದ್ರಕ್ಕೆ ಪತ್ರ ಬರೆದು ಒಂದು‌ ವರ್ಷವಾದರೂ ಕೇಂದ್ರ‌ ಸರಕಾರ ಇದುವರೆಗೆ ಯಾವುದೇ ಕ್ರಮವಹಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ನಡೆದ ಮೂರು‌ ದಿನಗಳ ಕಾಲ ನಡೆದ 201 ನೇ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಕಿತ್ತೂರು ರಾಣಿ ಚನ್ನಮ್ಮ 1824 ರ ಅಕ್ಟೋಬರ್ 23 ರಂದು ಬ್ರಿಟೀಷರ ವಿರುದ್ಧ ಹೋರಾಡಿ ಜಯಗಳಿಸಿದ್ದರು. ಈ ವಿಜಯದ ಸವಿನೆನಪಿಗಾಗಿ ಪ್ರತಿವರ್ಷ ಕಿತ್ತೂರು ಉತ್ಸವವನ್ನು ಆಚರಿಸಲಾಗುತ್ತಿದೆ.
ಝಾನ್ಸಿ ರಾಣಿ ಲಕ್ಷ್ಮೀಬಾಯಿಗಿಂತ ಮುಂಚೆಯೇ ಬ್ರಿಟೀಷರ ವಿರುದ್ಧ ಹೋರಾಡಿದ್ದಾರೆ. ಶರಣಾಗತಿಯ ಬದಲು ಹೋರಾಟಕ್ಕೆ ಧುಮುಕಿದ ಚನ್ನಮ್ಮ, ರಾಯಣ್ಣ ಮತ್ತು ಅಮಟೂರ‌ ಬಾಳಪ್ಪನವರು ಸ್ವಾಭಿಮಾನದ ಸಂಕೇತವಾಗಿದ್ದಾರೆ.
ಥ್ಯಾಕರೆಯನ್ನು ಕೊಂದು ಬ್ರಿಟೀಷರ ವಿರುದ್ಧ ಜಯಗಳಿಸಿದ್ದು ಚನ್ನಮ್ಮನ ಸಾಧನೆಯ‌ ಕಿರೀಟವಾಗಿದೆ.

ನಮ್ಮಲ್ಲಿಯೇ ಒಡೆದಾಳುವ ನೀತಿ; ಸಂಗೊಳ್ಳಿ ರಾಯಣ್ಣನನ್ನು ಹಿಡಿಯಲು ನಮ್ಮವರೇ ನೀಡಿದ‌ ಮಾಹಿತಿಯು ಬ್ರಿಟೀಷರಿಗೆ ಅನುಕೂಲವಾಗಿತ್ತು.

ಚನ್ನಮ್ಮನ ಹೋರಾಟದ ಬಗ್ಗೆ ನಾಡಿಗೆ ತಿಳಿಸುವುದಕ್ಕಾಗಿ 2017 ರಲ್ಲಿ ನಮ್ಮ ಸರಕಾರವೇ ಕಿತ್ತೂರು ಚೆನ್ನಮ್ಮ ಜಯಂತಿ ಆರಂಭಿಸಿತು ಎಂಬುದು‌ ನಮಗೆ ಹೆಮ್ಮೆಯ ವಿಷಯವಾಗಿದೆ.

ಚನ್ನಮ್ಮನ ಸಾಹಸಗಾಥೆ ತಿಳಿಸಲು ಜಯಂತಿ ಆರಮಭಿಸಲಾಯಿತೇ ಹೊರತು ರಾಜಕೀಯ ಕಾರಣಕ್ಕಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಚನ್ನಮ್ಮನ ಹೆಸರು ಇತಿಹಾಸದಲ್ಲಿ ಶಾಶ್ವತವಾಗಿ ಉಳಿಯುವಂತಹ ಹೆಸರು. ಟಿಪ್ಪು ಸುಲ್ತಾನ್ ಕೂಡ ವೀರಾವೇಷದಿಂದ ಬ್ರಿಟೀಷರ ವಿರುದ್ಧ ಹೋರಾಡಿದ್ದರು.‌ ಇದನ್ನು ಹೇಳಿದರೆ ತಮ್ಮ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ.
ಟಿಪ್ಪು ಕೂಡ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತ ಯುದ್ಧಭೂಮಿಯಲ್ಲಿಯೇ ಕೊನೆಯುಸಿರು ಎಳೆದಿದ್ದಾರೆ.

ಜಾತಿ, ಧರ್ಮದ ಆಧಾರದಲ್ಲಿ ಸಮಾಜ ಒಡೆಯುವ ಕೆಲಸ ಮಾಡಲಾಗುತ್ತದೆ. ಯಾವುದೇ ಧರ್ಮದಲ್ಲಿಯೂ ದ್ವೇಷವನ್ನು ಬೋಧಿಸಿಲ್ಲ. ಆದ್ದರಿಂದ ಮನುಷ್ಯ ಮನುಷ್ಯರನ್ನು ಪ್ರೀತಿಸಬೇಕು.
ಸಮಾಜ ಒಡೆಯುವಂತಹವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಇತಿಹಾಸದ ಕುರಿತು ತಿಳಿಸಲು ಉತ್ಸವಗಳನ್ನು ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.

ಹುನಗುಂದ ಶಾಸಕರೂ ಆಗಿರುವ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ ಮಾತನಾಡಿ, ವೀರಮಾತೆ ಜಯಂತ್ಯೋತ್ಸವ ಆಚರಣೆಯ 25 ವರ್ಷಗಳ ಬೇಡಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಡೇರಿಸಿದರು.
ಇದಲ್ಲದೇ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು‌ ಘೋಷಿಸಿದ್ದು ಅವರೇ.
ಚನ್ನಮ್ಮನ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲು ರಾಜ್ಯ ಸರಕಾರದ ವತಿಯಿಂದ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಕಳಿಸಿರುವುದು ಕೂಡ ಸಿದ್ದರಾಮಯ್ಯನವರು. ಆದ್ದರಿಂದ ಸಮಾಜದ ಪರವಾಗಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಕಾಶಪ್ಪನವರ ಹೇಳಿದರು.

ಝಾನ್ಸಿ ರಾಣಿ ಲಕ್ಷ್ಮೀಬಾಯಿ ಅವರಿಗಿಂತ ಮುಂಚಿತವಾಗಿಯೇ ಬ್ರಿಟೀಷರ ವಿರುದ್ಧ ಪ್ರಪ್ರಥಮವಾಗಿ ಹೋರಾಟ ಮಾಡಿದ ಚನ್ನಮ್ಮನ ಕುರಿತು ಅಧಿಕೃತವಾಗಿ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಶಾಸಕ ಬಾಬಾಸಾಹೇಬ್ ಪಾಟೀಲ, ಚನ್ನಮ್ಮನ ಇತಿಹಾಸವನ್ನು ದೇಶದ ಜನತೆಗೆ ಮುಟ್ಟಿಸಲು ಪ್ರತಿವರ್ಷ ಕಿತ್ತೂರು ಉತ್ಸವ ಆಚರಿಸಲಾಗುತ್ತಿದೆ.
ಚನ್ನಮ್ಮನ ಕಿತ್ತೂರಿನ ಸಮಗ್ರ ಅಭಿವೃದ್ಧಿಗಾಗಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸಬೇಕಿದೆ. ಕಿತ್ತೂರಿನ ಐತಿಹಾಸಿಕ ಸ್ಥಳಗಳ ಜೀರ್ಣೊದ್ಧಾರಕ್ಕೆ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಒದಗಿಸುವಂತೆ ಒತ್ತಾಯಿಸಿದರು.

ಮಲಪ್ರಭಾ ಸಹಕಾರಿ ಕಾರ್ಖಾನೆ‌ದುಸ್ಥಿತಿಯಲ್ಲಿದ್ದು, ರೈತರ ಅನುಕೂಲಕ್ಕಾಗಿ‌ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಬೇಕು ಹಾಗೂ ಕಿತ್ತೂರಿನ ಐತಿಹಾಸಿಕ ಸ್ಥಳಗಳನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಬಾಬಾಸಾಹೇಬ್ ಪಾಟೀಲ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು.

ಸಮಾರೋಪ ನುಡಿಗಳನ್ನಾಡಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ್, ಉತ್ಸವಗಳು ಸಾಂಕೇತಿಕವಾಗಿರದೇ ಪ್ರೇರಣಾದಾಯಕವಾಗಿಸಬೇಕು ಎಂಬ ಕಾರಣಕ್ಕೆ ಪ್ರತಿವರ್ಷ ಅರ್ಥಪೂರ್ಣ ಉತ್ಸವವನ್ನು ಸರಕಾರ ಆಚರಿಸುತ್ತಿದೆ.
ಕಿತ್ತೂರು ದೇಶಪ್ರೇಮಿಗಳ ನೆಲ; ವೀರ ಪರಾಕ್ರಮಿಗಳ ನಾಡು. ಚನ್ನಮ್ಮನ ಹೋರಾಟ, ಆದರ್ಶವನ್ನು ನಾಡಿನುದ್ದಕ್ಕೂ ಪಸರಿಸಲು ಮುಂಬರುವ ದಿನಗಳಲ್ಲಿ ಇನ್ನಷ್ಟು ಅರ್ಥಪೂರ್ಣವಾಗಿ ಉತ್ಸವವನ್ನು ಆಚರಿಸಬೇಕು.

ನಾಡಪ್ರೇಮದ ಗಟ್ಟಿತನ ಇಲ್ಲಿ ಇನ್ನಷ್ಟು ಬೇರೂರುವಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಚನ್ನಮ್ಮನ ಸಾಹಸಗಾಥೆಯನ್ನು ಜಗಕೆ ಸಾರಬೇಕು. ಕಿತ್ತೂರು ಒಂದು ಸ್ಥಳವಲ್ಲ; ಅದೊಂದು ಪ್ರೇರಣೆಯಾಗಿದ್ದು ಇದನ್ನು ಯುವಸಮುದಾಯಕ್ಕೆ ಮನದಟ್ಟು ಮಾಡುವ ಕೆಲಸವಾಗಬೇಕಿದೆ ಎಂದು ಹೇಳಿದರು.

ವಿಶೇಷ ಆಹ್ವಾನಿತರಾದ ಸಾಹಿತಿ ವಿನಯಾ ವಕ್ಕುಂದ, ನಾಡಿನ ರಕ್ಷಣೆಗಾಗಿ 200 ವರ್ಷಗಳ ಹಿಂದೆ ಕಿತ್ತೂರಿನಲ್ಲಿ ನಡೆದ ಹೋರಾಟವು ರೋಮಾಂಚನಗೊಳಿಸುತ್ತದೆ.
ಭಾರತದ ಸಂವಿಧಾನಕ್ಕೆ‌ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂಬ ದೀಕ್ಷೆಯನ್ನು ತೆಗೆದುಕೊಳ್ಳುವ ಮೂಲಕ ಕಿತ್ತೂರಿನ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸಲ್ಲಿಸಬೇಕು ಎಂದು ಕರೆ ನೀಡಿದರು.

ಆಶೀರ್ವಚನ ನೀಡಿದ ಕಿತ್ತೂರಿನ ರಾಜಗುರು ಸಂಸ್ಥಾನ‌ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ಕಿತ್ತೂರು ಚನ್ನಮ್ಮನ ಹೋರಾಟವು ಸ್ವಾಭಿಮಾನಕ್ಕೆ‌ ನಿದರ್ಶನವಾಗಿದ್ದು, ಕಿತ್ತೂರು ಕೋಟೆಯನ್ನು ರಾಷ್ಟ್ರೀಯ ಸ್ಮಾರಕವಾಗಿಸಬೇಕು ಎಂದು ಒತ್ತಾಯಿಸಿದರು.

ನಿಚ್ಚಣಕಿ ಶ್ರೀಗುರು ಮಡಿವಾಳೇಶ್ವರ ಮಠದ ಪಂಚಾಕ್ಷರಿ ಮಹಾಸ್ವಾಮೀಜಿ, ಕಾದರವಳ್ಳಿ‌ ಸೀಮಿಮಠದ ಡಾ.ಫಾಲಾಕ್ಷ ಶಿವಯೋಗೀಶ್ವರರು ಸಾನಿಧ್ಯ ವಹಿಸಿದ್ದರು. ಪ್ರಭಾರ ಜಿಲ್ಲಾಧಿಕಾರಿ ರಾಹುಲ್ ಶಿಂಧೆ ಸ್ವಾಗತಿಸಿದರು.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಕರ್ನಾಟಕ ವಿಧಾನಸಭೆಯ ಸರಕಾರದ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಕೌಜಲಗಿ, ಶಾಸಕರಾದ ಎನ್.ಎಚ್.ಕೋನರೆಡ್ಡಿ, ಆಸಿಫ್(ರಾಜು) ಸೇಠ, ವಿಶ್ವಾಸ್ ವೈದ್ಯ, ವಿಧಾನಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ ಖಾದ್ರಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ವಾಯವ್ಯ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಸುನಿಲ್‌ ಹನಮಣ್ಣವರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಯ್ ನಾವಲಗಟ್ಟಿ, ಪ್ರಾದೇಶಿಕ ಆಯುಕ್ತರಾದ ಜಾನಕಿ ಕೆ.ಎಂ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ ಮತ್ತಿತರರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ರಾಜಕೀಯ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ರಾಜ್ಯ ಬಿಜೆಪಿಯ ಹಿರಿಯ ಮುತ್ಸದ್ದಿ ಬಿ.ಎಸ್. ಯಡಿಯೂರಪ್ಪ (B.S. Yediyurappa) ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ. ಕಾರ್ಯಕ್ರಮದ ಸ್ಥಳಗಳಲ್ಲಿ ಪೆಂಡಾಲ್, ಸ್ಟೇಜ್ ಮುಂತಾದ

[ccc_my_favorite_select_button post_id="121304"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!