Nandagudi Industrial Area: MLA Sarath Bachegowda appeals for final notification

ನಂದಗುಡಿ ಕೈಗಾರಿಕಾ ಪ್ರದೇಶ: ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ನಂದಗುಡಿಯಲ್ಲಿ ಕೈಗಾರಿಕೆಗಳಿಗಾಗಿ 1,000 ಎಕರೆ ಭೂಸ್ವಾಧೀನಕ್ಕೆ ಪ್ರಾಥಮಿಕ ಹಂತದ ಅಧಿಸೂಚನೆ ಆಗಿದ್ದು, ತ್ವರಿತಗತಿಯಲ್ಲಿ ಅಂತಿಮ ಅಧಿಸೂಚನೆ ಹೊರಡಿಸಬೇಕು. ಈ ಮೂಲಕ ಆಧುನಿಕ ಕೈಗಾರಿಕೆಗಳು ಇಲ್ಲಿಗೆ ಬರಲು ಅನುವು ಮಾಡಿಕೊಡಬೇಕು ಎಂದು ಅಲ್ಲಿನ ಶಾಸಕ ಶರತ್ ಬಚ್ಚೇಗೌಡ ( Sarath Bachegowda) ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ (M.B. Patil ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ಮಂಗಳವಾರ ಅವರು ಖನಿಜ ಭವನದಲ್ಲಿ ಈ ಸಂಬಂಧ ಸಚಿವರನ್ನು ಭೇಟಿ ಮಾಡಿ ಚರ್ಚಿಸಿದರು. ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸಚಿವರೊಂದಿಗೆ ಮಾತನಾಡಿದ ಶಾಸಕರು, ಹೊಸಕೋಟೆಯು ಬೆಂಗಳೂರಿಗೆ ಸಮೀಪದಲ್ಲಿದ್ದು, ಕೈಗಾರಿಕೆಗಳ ಬೆಳವಣಿಗೆಗೆ ಸೂಕ್ತವಾಗಿದೆ. ಜಾಗತಿಕ ಮಟ್ಟದ ಹತ್ತಾರು ಕಂಪನಿಗಳು ಇಲ್ಲಿ ತಮ್ಮ ಡೇಟಾ ಸೆಂಟರ್ ಗಳನ್ನು ಆರಂಭಿಸಲು ಆಸಕ್ತಿ ಹೊಂದಿವೆ. ಇದನ್ನು ನಾವು ಸದ್ಬಳಕೆ ಮಾಡಿಕೊಳ್ಳಬೇಕು. ಸದ್ಯಕ್ಕೆ ಭೂಸ್ವಾಧೀನ ಪ್ರಕ್ರಿಯೆ ಪ್ರಾಥಮಿಕ ಹಂತದಲ್ಲಿ ನಿಂತಿದೆ. ಇದನ್ನು ತ್ವರಿತವಾಗಿ ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗಿ, ಅಂತಿಮ ಅಧಿಸೂಚನೆ ಹೊರಡಿಸಬೇಕು. ಹಲವು ಕಂಪನಿಗಳು ಈ ಭಾಗದಲ್ಲಿ ಭೂಮಿ ಬೇಕೆಂದು ಕೇಳುತ್ತಿವೆ ಎಂದು ವಿವರಿಸಿದ್ದಾರೆ.

ಇದಕ್ಕೆ ಸ್ಪಂದಿಸಿದ ಸಚಿವರು, `ಹೊಸಕೋಟೆ ತಾಲ್ಲೂಕಿನ ಶಾಸಕರು ಗಮನಕ್ಕೆ ತಂದಿರುವ ವಿಚಾರಕ್ಕೆ ಸ್ಪಂದಿಸಿ ಕ್ರಮ ಕೈಗೊಳ್ಳಲಾಗುವುದು.

ನಂದಗುಡಿಯಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ಸ್ವೀಡಿಷ್ ಕೈಗಾರಿಕಾ ಪಾರ್ಕ್ ಮತ್ತು ತೈವಾನ್ ಕೈಗಾರಿಕಾ ಪಾರ್ಕ್ ಸ್ಥಾಪಿಸುವ ಉದ್ದೇಶ ಸರಕಾರದ್ದಾಗಿದೆ. ಇದು ಸಾಧ್ಯವಾದರೆ, ಹೊಸಕೋಟೆ ಸುತ್ತಮುತ್ತಲಿನ ಯುವಜನರಿಗೂ ಉದ್ಯೋಗ ಸಿಗಲಿದ್ದು, ಆರ್ಥಿಕ ಅಭಿವೃದ್ಧಿಗೆ ವೇಗ ದೊರೆಯಲಿದೆ’ ಎಂದಿದ್ದಾರೆ.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!