ರಾಜ್ಯ ಹೈಕೋರ್ಟಿನ ತೀರ್ಪಿನಿಂದ ಹಿನ್ನಡೆ, ಷಡ್ಯಂತ್ರಕ್ಕೆ ತಡೆ: ಬಿ.ವೈ. ವಿಜಯೇಂದ್ರ

State High Court's decision a setback, a stop to the conspiracy: B.Y. Vijayendra

ಬೆಂಗಳೂರು: ರಾಜ್ಯ ಹೈಕೋರ್ಟಿನ ತೀರ್ಪಿನಿಂದ ಸರಕಾರಕ್ಕೆ ಹಿನ್ನಡೆ ಆಗಿದೆ. ಅವರ ಕುತಂತ್ರ, ಷಡ್ಯಂತ್ರಕ್ಕೆ ತಡೆ ಕೊಟ್ಟಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ (B.Y. Vijayendra) ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಮತ್ತೊಂದು ಕಡೆ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿ ರೈತರಿಗೆ ಪರಿಹಾರ ಕೊಟ್ಟಿಲ್ಲ, ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಪರಿಹಾರ ಕೊಡಿ ಎಂದರೆ ಕೇಂದ್ರ ಸರಕಾರದ ಕಡೆ ಬೆಟ್ಟು ಮಾಡಿ ಕೂತಿದ್ದಾರೆಯೇ ವಿನಾ ರಾಜ್ಯ ಸರಕಾರದಿಂದ ಈ ನಾಡಿನ ರೈತರಿಗೆ ಪರಿಹಾರ, ಅನುಕೂಲ ಸಿಗುತ್ತಿಲ್ಲ ಎಂದು ಟೀಕಿಸಿದರು.

ರಾಜ್ಯ ಸರಕಾರ, ಮುಖ್ಯಮಂತ್ರಿಗಳಿಗೆ ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸಾಧ್ಯವಾಗದೇ ಇದ್ದರೆ, ಈ ಸರಕಾರ ರೈತರ ಪಾಲಿಗೆ ಬದುಕಿದ್ದೂ ಸತ್ತಂತೆ ಎಂದು ಆಕ್ಷೇಪಿಸಿದರು. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ, ಶಾಸಕರು ಪರದಾಡುತ್ತಿದ್ದಾರೆ. ಆಡಳಿತ ಪಕ್ಷದ ಶಾಸಕರು, ಸಚಿವರು ನವೆಂಬರ್ ಕ್ರಾಂತಿಯ ಹೇಳಿಕೆ ಕೊಡುತ್ತಿದ್ದಾರೆ ಎಂದು ದೂರಿದರು.

ರೈತರ ಸಮಸ್ಯೆಗೆ ಪರಿಹಾರ ಕೊಡಿ ಎಂದರೆ ಇವತ್ತು ಸಿಎಂ ಬದಲಾವಣೆ ಚರ್ಚೆ ನಡೆದಿದೆ. ಕಾಂಗ್ರೆಸ್ ಸರಕಾರದ ಕಚ್ಚಾಟದಿಂದ ರಾಜ್ಯದ ಜನತೆ ಸರಕಾರದ ಮೇಲಿನ ವಿಶ್ವಾಸ ಕಳಕೊಂಡಿದ್ದಾರೆ ಎಂದು ವಿಶ್ಲೇಷಿಸಿದರು. ನಾನೇ 5 ವರ್ಷ ಸಿಎಂ ಎಂದು ಮುಖ್ಯಮಂತ್ರಿಗಳು ಹೇಳುವ ಪರಿಸ್ಥಿತಿ ಬಂದು ತಲುಪಿದೆ ಎಂದರೆ, ಆಡಳಿತ ಪಕ್ಷದಲ್ಲಿ ಮುಖ್ಯಮಂತ್ರಿಗಳ ಬಗ್ಗೆ ವಿಶ್ವಾಸ ಹೊರಟುಹೋಗಿದೆ ಎಂದು ವಿಶ್ಲೇಷಿಸಿದರು.

ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ ಎಂದು ಟೀಕಿಸಿದರು. ಹೇಳಿಕೆಗಳನ್ನು ನಿಲ್ಲಿಸದೇ ಹೋದರೆ ಇದರ ಪರಿಣಾಮ ಆಡಳಿತದ ಮೇಲೆ ಬೀಳಲಿದೆ ಎಂದು ಗೃಹ ಸಚಿವ ಪರಮೇಶ್ವರ್ ಒಪ್ಪಿಕೊಂಡಿದ್ದಾರೆ. ರಾಜ್ಯದ ಜನರಿಗೆ ಸಿಎಂ ಯಾರಾಗುತ್ತಾರೆ? ಬದಲಾಗುತ್ತಾರಾ ಎಂಬ ಬಗ್ಗೆ ಆಸಕ್ತಿ ಇಲ್ಲ. ಜನರು ಈ ಸರಕಾರದ ಬಗ್ಗೆ ಸಂಪೂರ್ಣ ವಿಶ್ವಾಸ ಕಳಕೊಂಡಿದ್ದಾರೆ ಎಂದು ತಿಳಿಸಿದರು.

ಇವರ ಒಳಜಗಳದಿಂದ ಕೆಪಿಸಿಸಿಗೆ ಬೀಗ ಹಾಕುವುದು ಇರಲಿ; ರಾಜ್ಯದ ಖಜಾನೆಗೆ ಬೀಗ ಹಾಕಿ ಕೂತಿದ್ದಾರೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಸರಕಾರಿ ನೌಕರರಿಗೆ ವೇತನ ಸಿಗುತ್ತಿಲ್ಲ; ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ರಾಜಕೀಯ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ರಾಜ್ಯ ಬಿಜೆಪಿಯ ಹಿರಿಯ ಮುತ್ಸದ್ದಿ ಬಿ.ಎಸ್. ಯಡಿಯೂರಪ್ಪ (B.S. Yediyurappa) ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ. ಕಾರ್ಯಕ್ರಮದ ಸ್ಥಳಗಳಲ್ಲಿ ಪೆಂಡಾಲ್, ಸ್ಟೇಜ್ ಮುಂತಾದ

[ccc_my_favorite_select_button post_id="121304"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!