ದೊಡ್ಡಬಳ್ಳಾಪುರದಲ್ಲಿ ವಲಸಿಗರ ಹಾವಳಿ ತಪ್ಪಿಸುವಂತೆ ಡಿವೈಎಸ್ಪಿ‌ಗೆ ಕರವೇ ಮನವಿ

Karave appeals to DYSP to prevent migrants menace in Doddaballapur

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಮಿತಿಮೀರಿ ಹೆಚ್ಚುತ್ತಿರುವ ಹೊರ ರಾಜ್ಯದ ವಲಸಿಗರಿಂದಾಗಿ ( Migrants) ಸ್ಥಳೀಯರಿಗೆ ಉದ್ಯೋಗಕ್ಕೆ ಕೊಕ್ಕೆ ಬೀಳುತ್ತಿದೆ ಎಂಬ ಆಕ್ರೋಶದ ಬೆನ್ನಲ್ಲೇ, ಇತ್ತೀಚೆಗೆ ಬಾಂಗ್ಲಾ ದೇಶದ ವಲಸಿಗರು ಅಕ್ರಮವಾಗಿ ನುಸುಳಿದ್ದಾರೆಂಬ ಆರೋಪ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ.

ಈ ಕುರಿತಂತೆ ಇಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ) ಬಣದ ಕಾರ್ಯಕರ್ತರು ಡಿವೈಎಸ್ಪಿ ರವಿ ಅವರನ್ನು ಭೇಟಿಯಾಗಿ ದೊಡ್ಡಬಳ್ಳಾಪುರದಲ್ಲಿ ಅಕ್ರಮ ಬಾಂಗ್ಲ ವಲಸಿಗರು ಇತರೆ ರಾಜ್ಯಗಳ ವಲಸಿಗರನ್ನು ಪತ್ತೆ ಹಚ್ಚಿ ಅವರ ಹಾವಳಿ ತಪ್ಪಿಸುವಂತೆ ಮನವಿ ಮಾಡಿದ್ದಾರೆ.

ದೊಡ್ಡಬಳ್ಳಾಪುರ ನಗರದ ಡಿವೈಎಸ್ಪಿ ಕಚೇರಿಯಲ್ಲಿ ರವಿ ಅವರಿಗೆ ಮನವಿ ಪತ್ರ ಸಲ್ಲಿಸಿದ ಬಳಿಕ ಹರಿತಲೇಖನಿಯೊಂದಿಗೆ ಮಾತನಾಡಿದ ಕರವೇ (ಪ್ರವೀಣ್ ಕುಮಾರ್ ಶೆಟ್ಟಿ) ಬಣದ ತಾಲೂಕು ಅಧ್ಯಕ್ಷ ಹಮಾಮ್ ವೆಂಕಟೇಶ್, ದೊಡ್ಡಬಳ್ಳಾಪುರ ತಾಲ್ಲೂಕು, ಬೆಂಗಳೂರು ನಗರಕ್ಕೆ ಹೊಂದಿಕೊಂಡಿದ್ದು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕೇವಲ 20 ಕಿಮೀ ಮಾತ್ರ ಇದೆ.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜವಳಿ ಪಾರ್ಕ್, ಹಲವು ಕೈಗಾರಿಕೆಗಳು ಇದ್ದು, ನೂತನವಾಗಿ ಫಾಕ್ಸ್‌ ಕಾನ್ ಕಂಪನಿ ಆರಂಭವಾಗಿ ನಗರವು ಅತಿವೇಗವಾಗಿ ಬೆಳೆಯುತ್ತಿದೆ.

ಉದ್ಯೋಗವನ್ನರಸಿ ಬೇರೆ ಬೇರೆ ರಾಜ್ಯಗಳಿಂದ ಲಕ್ಷಾಂತರ ಜನ ದೊಡ್ಡಬಳ್ಳಾಪುರ ವ್ಯಾಪ್ತಿಗೆ ಬರುತ್ತಿದ್ದು ಇವರು ಹೊರ ರಾಜ್ಯದವರೋ, ಇಲ್ಲ ಬಾಂಗ್ಲಾದೇಶದಿಂದ ಅಕ್ರಮವಾಗಿ ಬರುತ್ತಿರುವ ತಿಳಿಯುತ್ತಿಲ್ಲ.

ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಅಕ್ರಮ ಬಾಂಗ್ಲ ವಲಸಿಗರ ವದಂತಿ ಚರ್ಚೆ ನಡೆಯುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಉಂಟುಮಾಡುತ್ತಿದೆ. ಅಲ್ಲದೆ ಇತರೆ ರಾಜ್ಯದ ವಲಸಿಗರ ಸಂಖ್ಯೆ ಹೆಚ್ಚಾಗಿ ಕಳ್ಳತನ, ದರೋಡೆ, ಬೆದರಿಕೆ ಒಡ್ಡುವುದು ನಡೆಯುತ್ತಿದ್ದಾರೆ.

ಈ ಕುರಿತು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟ‌ರ್ ಅಮರೇಶ್‌ ಗೌಡ ಅವರು ನೇಕಾರ ಮುಖಂಡರ ತುರ್ತು ಸಭೆ ನಡೆಸಿರುತ್ತಾರೆ. ಆದರೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ, ರೈಲ್ವೆ ನಿಲ್ದಾಣ, ಕೊನಘಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತಾವು ಮತ್ತು ತಮ್ಮ ಮೇಲಿನ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಲಸಿಗರಿಗೆ ಎಚ್ಚರಿಕೆ ನೀಡಬೇಕಿದೆ.

ಅಲ್ಲದೆ ಇಂತವರಿಗೆ ಬಾಡಿಗೆ ನೀಡುವ ಮನೆಯ ಮಾಲೀಕರಿಗೆ, ಬಾಡಿಗೆ ನೀಡುವಾಗ ವಲಸಿಗರ ಪೂರ್ಣ ವಿಳಾಸವನ್ನು ಠಾಣೆಗೆ ಸಲ್ಲಿಸುವಂತೆ ಆದೇಶ ಮಾಡಬೇಕೆಂದು ಮನವಿ ಮಾಡಿದ್ದೇವೆ.

ಈ ಕುರಿತಂತೆ ಡಿವೈಎಸ್ಪಿ ರವಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಈ ವೇಳೆ ಕರವೇ (ಪ್ರವೀಣ್ ಕುಮಾರ್ ಶೆಟ್ಟಿ ಬಣದ) ಪ್ರಧಾನ ಕಾರ್ಯದರ್ಶಿ ಎಸ್ಎಲ್ಎನ್ ವೇಣು, ಉಪಾಧ್ಯಕ್ಷ ಜೋಗಳ್ಳಿ ಅಮ್ಮು, ಖಜಾಂಚಿ ಆನಂದ್, ನಗರ ಅಧ್ಯಕ್ಷರು ಶ್ರೀ ನಗರ ಬಶೀರ್, ಉಪಾಧ್ಯಕ್ಷರು ಮಂಜುನಾಥ್, ಶ್ರೀನಿವಾಸ್, ಹಮಾಮ್ ಮಂಜುನಾಥ್, ರಮೇಶ್ ಮತ್ತಿತರರು.

ರಾಜಕೀಯ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ರಾಜ್ಯ ಬಿಜೆಪಿಯ ಹಿರಿಯ ಮುತ್ಸದ್ದಿ ಬಿ.ಎಸ್. ಯಡಿಯೂರಪ್ಪ (B.S. Yediyurappa) ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ. ಕಾರ್ಯಕ್ರಮದ ಸ್ಥಳಗಳಲ್ಲಿ ಪೆಂಡಾಲ್, ಸ್ಟೇಜ್ ಮುಂತಾದ

[ccc_my_favorite_select_button post_id="121304"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!