Doddaballapur Tehsildar Vibha Vidya Rathore transferred

ದೊಡ್ಡಬಳ್ಳಾಪುರ: ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನ.06 ಕೊನೆಯ ದಿನ

ದೊಡ್ಡಬಳ್ಳಾಪುರ: ಭಾರತ ಚುನಾವಣಾ ಆಯೋಗದ (Election Commission of India) ವೇಳಾಪಟ್ಟಿಯಂತೆ ಹಾಗೂ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಸಾರ್ವಜನಿಕ ಪ್ರಕಟಣೆಯಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ (Teachers’ Constituency) ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿಗಳ (Voter list) ಸಮಗ್ರ ಪರಿಷ್ಕರಣೆ ನಡೆಸಲಾಗುತ್ತಿದೆ.

ಅದರಂತೆ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಬಗ್ಗೆ ಸೆಪ್ಟೆಂಬರ್ 30 ರಂದು ಪ್ರಕಟಣೆ ಹೊರಡಿಸಲಾಗಿದೆ. ನಮೂನೆ 19 ರಲ್ಲಿ ಮತದಾರರ ಪಟ್ಟಿ ಸೇರ್ಪಡೆಗೆ ಅರ್ಜಿ ಸಲ್ಲಿಸಲು ನವೆಂಬರ್ 06 ಕೊನೆಯ ದಿನವಾಗಿದೆ.

ಕರಡು ಮತದಾರರ ಪಟ್ಟಿಯನ್ನು ಅಕ್ಟೋಬರ್ 25 ರಂದು ಪ್ರಕಟಿಸಲಾಗುತ್ತಿದೆ. ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣಾ ಅರ್ಜಿಗಳನ್ನು ಸಲ್ಲಿಸಲು ನವೆಂಬರ್ 25 ರಿಂದ ಡಿಸೆಂಬರ್ 10 ವರೆಗೆ ಕಾಲಾವಕಾಶವಿದೆ.

ಡಿಸೆಂಬರ್ 30 ರಂದು ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಹಶಿಲ್ದಾರ್ ವಿಭಾ ವಿಧ್ಯಾ ರಾಥೋಡ್ ಅವರು ತಿಳಿಸಿದ್ದಾರೆ.

ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಲು ಮಾನದಂಡಗಳು

ಬೆಂಗಳೂರು ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯ ಸಾಮಾನ್ಯ ನಿವಾಸಿ ಆಗಿರಬೇಕು (ಈ ಕ್ಷೇತ್ರದ ವ್ಯಾಪ್ತಿಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಹಾಗೂ ರಾಮನಗರ ಜಿಲ್ಲೆಗಳು ಒಳಗೊಂಡಿರುತ್ತದೆ)
ಅರ್ಹತಾ ದಿನಾಂಕ ಹಿಂದಿನ 6 ವರ್ಷಗಳ ಅವಧಿಯ ಪೈಕಿ ಕನಿಷ್ಟ 3 ವರ್ಷಗಳ ಅವಧಿಯಲ್ಲಿ ರಾಜ್ಯ ಸರ್ಕಾರದಿಂದ ಮಾನ್ಯತೆ ಹೊಂದಿರುವ/ಮಾನ್ಯತೆ ಹೊಂದಿರುವುದಾಗಿ ಘೋಷಿಸಲ್ಪಟ್ಟಿರುವ ಸೆಕೆಂಡರಿ ಶಾಲೆಗಿಂತ ಕಡಿಮೆ ಇಲ್ಲದ ಯಾವುದೇ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ವೃತ್ತಿಯಲ್ಲಿ ಕಾರ್ಯ ನಿರ್ವಹಿಸಿರಬೇಕು.

ಸೆಕೆಂಡರಿ ಶಾಲೆ ಅಂದರೆ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿನ ಪ್ರೌಢಶಾಲೆ ವಿಭಾಗದಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸಿರಬೇಕು.

ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಖಾಯಂ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರಬೇಕು ಹಾಗೂ ಪಾರ್ಟ್ ಟೈಂ’ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದಲ್ಲಿ ನೋಂದಣಿಗೆ ಅವಕಾಶವಿರುವುದಿಲ್ಲ.

ಅರ್ಜಿದಾರರು ಮೇಲೆ ತಿಳಿಸಿರುವ ಅವಧಿಯಲ್ಲಿ ಶಿಕ್ಷಕ ವೃತ್ತಿಯಲ್ಲಿ ತೊಡಗಿರುವ ಬಗ್ಗೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳಿಂದ ದೃಢೀಕೃತ ದಾಖಲೆ/ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಮತದಾರರ ಪಟ್ಟಿ ನೊಂದಣಿಗೆ ಅರ್ಜಿದಾರರ ವಾಸಸ್ಥಳವು ಅರ್ಹತೆಯಾಗಿದ್ದು, ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಯ ಸ್ಥಳವು ಪರಿಗಣಿಸಲ್ಪಡುವುದಿಲ್ಲ.

ಮತದಾರರ ಪಟ್ಟಿ ಸೇರ್ಪಡೆಗೆ ಕನ್ನಡ ಅಥವಾ ಆಂಗ್ಲ ಭಾಷೆಯ ನಮೂನೆ – 19ರಲ್ಲಿ ಅರ್ಜಿ ಸಲ್ಲಿಸಬಹುದು.

ಭಾವಚಿತ್ರವಿರುವ ಮತದಾರರ ಪಟ್ಟಿಯನ್ನು ಸಿದ್ದಪಡಿಸಲಾಗುವುದರಿಂದ ಅರ್ಜಿದಾರರು ಇತ್ತೀಚಿಗಿನ ಭಾವಚಿತ್ರಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಭಾರತ ಚುನಾವಣಾ ಆಯೋಗವು ಸಿದ್ದಪಡಿಸಿರುವ ಹೆಚ್ಚುವರಿ ಮಾಹಿತಿ ಅಂದರೆ. ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೊಂದಾಯಿಸಿರುವ ಬಗ್ಗೆ ವಿಧಾನಸಭಾ ಕ್ಷೇತ್ರದ ಸಂಖ್ಯೆ ಮತ್ತು ಹೆಸರು, ಮತಗಟ್ಟೆ ಸಂಖ್ಯೆ, ಗುರುತಿನ ಚೀಟಿ (ಎಪಿಕ್) ಸಂ, ಹುಟ್ಟಿದ ದಿನಾಂಕ, ಸಂಪರ್ಕ (ದೂರವಾಣಿ/ಮೊಬೈಲ್ ನಂ) ವಿವರವನ್ನು ಸಹ ಅರ್ಜಿದಾರರು ನಮೂನೆ- 19 ರೊಂದಿಗೆ ತಪ್ಪದೇ ಕಡ್ಡಾಯವಾಗಿ ಸಲ್ಲಿಸಬೇಕು.

ಭರ್ತಿ ಮಾಡಿ ನಮೂನೆ-19ರ ಅರ್ಜಿಯನ್ನು ಪೂರಕ ಪ್ರಮಾಣಪತ್ರ/ದಾಖಲೆಗಳೊಂದಿಗೆ ತಾಲ್ಲೂಕು ಕಛೇರಿ, ಉಪವಿಭಾಗ ಕಛೇರಿ ಹಾಗೂ ಜಿಲ್ಲಾಧಿಕಾರಿ ಕಛೇರಿಗೂ ಸಲ್ಲಿಸಬಹುದಾಗಿದೆ. ಆದರೆ ಯಾವುದೇ ವ್ಯಕ್ತಿ ಬಲ್ಕ್ ಆಗಿ ಅರ್ಜಿಗಳನ್ನು ಸಲ್ಲಿಸುವಂತಿಲ್ಲ.

ಆಯಾ ಶಿಕ್ಷಣ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ ಅರ್ಜಿಗಳನ್ನು ಪಟ್ಟಿಯೊಂದಿಗೆ ಸಲ್ಲಿಸಬಹುದಾಗಿದೆ ಎಂದು ತಹಶಿಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ (Prahlad Joshi) ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ

[ccc_my_favorite_select_button post_id="118281"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!