ಗುಡ್ಮಾರ್ನಿಂಗ್ ನ್ಯೂಸ್: ಹೊಸ ಕ್ಯಾಪ್‌‌ ಬಣ್ಣಕ್ಕೆ ಪೊಲೀಸರ ಕ್ಯಾತೆ..!

Police Dissonance against new

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ (Police Department) ಮಹತ್ವದ ಬದಲಾವಣೆಯಾಗಿದೆ. 1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳಲಾಗಿದೆ.

ಹೌದು.. ಕರ್ನಾಟಕ ಪೊಲೀಸರಿಗೆ ಇನ್ನು ಮುಂದೆ ಹೊಸ ರೂಪ ಕೊಡಲಾಗಿದ್ದು, ನಿನ್ನೆಯಿಂದ ರಾಜ್ಯ ಪೊಲೀಸ್ ಸಿಬ್ಬಂದಿಗಳು ನೀಲಿ ಬಣ್ಣದ ಪೀಕ್ ಕ್ಯಾಪ್ಧರಿಸಲಿದ್ದಾರೆ. ಈ ಮೂಲಕ ಪೊಲೀಸರ ಸ್ಲೋಚ್ ಕ್ಯಾಪ್ ಇತಿಹಾಸದ ಪುಟ ಸೇರಿದೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ಖುದ್ದು ಹಾಜರಾಗಿ ಪೊಲೀಸ್ ಸಿಬ್ಬಂದಿಗಳಿಗೆ ಹೊಸ ಕ್ಯಾಪ್ ವಿತರಣೆ ಮಾಡಿದರು.

ಬಳಿಕ ಪೊಲೀಸರು ಹೊಸ ಟೋಪಿ ಧರಿಸಿ ಮಿಂಚಿದರು.

1956ರಿಂದ ಟರ್ಬನ್ ಕ್ಯಾಪ್, ಸ್ಲೋಚ್ ಕ್ಯಾಪ್ ಚಾಲ್ತಿಯಲ್ಲಿತ್ತು. ಆದ್ರೆ, 2018ರಲ್ಲೇ ಕ್ಯಾಪ್ ಬದಲಾವಣೆಗೆ ಪ್ರಕ್ರಿಯೆ ಶುರುವಾದರೂ ಅದು ನನೆಗುದಿಗೆ ಬಿದ್ದಿತ್ತು.

ಇದೀಗ ಸಿಎಂ ಸಿದ್ದರಾಮಯ್ಯ ಅವರೇ ವೈಯಕ್ತಿಕ ಆಸಕ್ತಿ ವಹಿಸಿ, ಇಲಾಖೆಯ ಪ್ರಸ್ತಾವನೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ನೀಲಿ ಬಣ್ಣದ ಹೊಸ ಪೀಕ್ ಕ್ಯಾಪ್ ಅನ್ನು ಸಿಎಂ ಸಿದ್ದರಾಮಯ್ಯ ಅವರೇ ಸೆಲೆಕ್ಟ್ ಮಾಡಿದ್ದು ವಿಶೇಷ. ಈ ಮೂಲಕ ಪೊಲೀಸರ ಬಹುದಿನಗಳ ಬೇಡಿಕೆ ಈಡೇರಿದೆ.

ಬಣ್ಣಕ್ಕೆ ಅಪಸ್ವರ

ಇನ್ನೂ ರಾಜ್ಯ ಪೊಲೀಸ್ ಸಿಬ್ಬಂದಿಗಳು ನೀಲಿ ಬಣ್ಣದ ಪೀಕ್ ಕ್ಯಾಪ್‌ಗೆ ಅಪಸ್ವರ ತೆಗೆದಿದ್ದು, ನೀಲಿ ಬಣ್ಣದ ಬದಲಿಗೆ ಖಾಕಿ ಬಣ್ಣದ ಟೋಪಿ ನೀಡಬೇಕೆಂದು ಒತ್ತಾಯದ ಮಾತು ಕೇಳಿ ಬರುತ್ತಿದೆ.

ಅನೇಕ ಹೆಸರೇಳಲು ಇಚ್ಚಿಸದ ಪೊಲೀಸರು, ನಮಗೂ ಸೆಕ್ಯೂರಿಟಿ ಗಾರ್ಡ್ಗಳಿಗೂ ವೆತ್ಯಾಸ ಇಲ್ಲವೇ..? ಅವರದ್ದು ನೀಲಿ ಟೂಪಿ, ನಮ್ಮದೂ ನೀಲಿ ಆಗಿರಲಿದೆ. ಇದರಿಂದ ಜನರಿಗೆ ಗೊಂದಲವಾಗಲಿದೆ.

ಇಲಾಖೆ ಹಾಗೂ ಸರ್ಕಾರ ತ್ವರಿತವಾಗಿ ಬಣ್ಣ ಬದಿಸುವಂತೆ ಒತ್ತಾಯ ಹೆಚ್ಚಾಗಿದೆ.

ರಾಜಕೀಯ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ರಾಜ್ಯ ಬಿಜೆಪಿಯ ಹಿರಿಯ ಮುತ್ಸದ್ದಿ ಬಿ.ಎಸ್. ಯಡಿಯೂರಪ್ಪ (B.S. Yediyurappa) ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ. ಕಾರ್ಯಕ್ರಮದ ಸ್ಥಳಗಳಲ್ಲಿ ಪೆಂಡಾಲ್, ಸ್ಟೇಜ್ ಮುಂತಾದ

[ccc_my_favorite_select_button post_id="121304"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!