ದೊಡ್ಡಬಳ್ಳಾಪುರ: ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎನ್‌ಡಿಎ (NDA) ಬೆಂಬಲಿತ ಅಭ್ಯರ್ಥಿಗಳ ಪರ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ (B. Mune Gowda) ಅವರು ಬಿರುಸಿನ ಪ್ರಚಾರ ನಡೆಸಿದರು.
ಇಂದು ಉರಿ ಬಿಸಿಲಿನ ನಡುವೆಯೂ ತಾಲೂಕಿನ ಅಣಗಲಪುರ ಗ್ರಾಮದಲ್ಲಿ ಮತದಾರರ ಮನೆ ಮನೆಗೆ ಭೇಟಿ ಮತಯಾಚನೆ ಮಾಡಿದರು.
ಈ ವೇಳೆ ಮಾತನಾಡಿದ ಅವರು, ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎನ್‌ಡಿಎ (NDA) ಬೆಂಬಲಿತ ಅಭ್ಯರ್ಥಿಗಳಾಗಿ 8 ಮಂದಿ ಸ್ಪರ್ಧಿಸಿದ್ದು, ಅವರನ್ನು ಜಯಶೀಲರನ್ನಾಗಿಸಿ ರೈತಪರ ಕಾರ್ಯಗಳಿಗೆ ಬಂಬಲಿಸುವಂತೆ ಕೋರಿದರು.
ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಹೋಬಳಿ ಜೆಡಿಎಸ್ ಅಧ್ಯಕ್ಷರು, ಪದಾಧಿಕಾರಿಗಳು, ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು, ಮುಖಂಡರು ಹಾಜರಿದ್ದರು.
ದೊಡ್ಡಬಳ್ಳಾಪುರ TAPMCS ಚುನಾವಣೆ
ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎ’ ತರಗತಿಯಿಂದ 9, ‘ಬಿ’ ತರಗತಿಯಿಂದ 19 ಜನ ಸ್ಪರ್ಧಿಸಿದ್ದಾರೆ.
‘ಎ’ ತರಗತಿಗೆ 5 ಸ್ಥಾನ, ‘ಬಿ’ ತರಗತಿಗೆ 8 ಸ್ಥಾನಗಳಿವೆ. 8 ಜನ ನಿರ್ದೇಶಕ ಸ್ಥಾನಗಳ ಪೈಕಿ 2 ಸಾಮಾನ್ಯ ಅಭ್ಯರ್ಥಿಗಳಿಗೆ, 1 ಬಿಸಿಎಂ ‘ಬಿ’, 1 ಬಿಸಿಎಂ ‘ಎ’, 2 ಮಹಿಳಾ ಅಭ್ಯರ್ಥಿಗಳಿಗೆ, 1 ಪರಿಶಿಷ್ಟ ಜಾತಿ, 1 ಪರಿಶಿಷ್ಠ ಪಂಗಡಕ್ಕೆ ಮೀಸಲಾಗಿದೆ.