ದೊಡ್ಡಬಳ್ಳಾಪುರ: ಕೆಎಸ್‌ಆರ್‌ಟಿಸಿ (KSRTC) ಬಸ್ ಮತ್ತು ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ (Accident) ಅಕ್ಕ ಮತ್ತು ತಮ್ಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಎಪಿಎಂಸಿ ಸಮೀಪದ ಬಮೂಲ್ ಹಾಲು ಶಿಥಲೀಕರಣ ಘಟಕದ ಬಳಿ ಸಂಭವಿಸಿದೆ.
ದೊಡ್ಡಬಳ್ಳಾಪುರ ಬಸ್ ನಿಲ್ದಾಣದಿಂದ ಡಿಪೋಗೆ ತೆರಳುತ್ತಿದ್ದ KSRTC ಬಸ್ಸು ಸ್ಕೂಟರ್ಗೆ ಡಿಕ್ಕಿ ಹೊಡೆದು ಸುಮಾರು 10 ಮೀಟರ್ ಸವಾರರು ಎಳೆದೊಯ್ದಿದೆ ಎನ್ನಲಾಗಿದೆ.
ಘಟನೆಯಲ್ಲಿ ದೊಡ್ಡಬಳ್ಳಾಪುರ ನಗರದ ನಿವಾಸಿಗಳಾದ ಅಕ್ಕ ಮತ್ತು ತಮ್ಮ ಗಂಭೀರವಾಗಿ ಗಾಯಗೊಂಡಿದ್ದು, ನಗರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿತ್ತು.
ಇದೀಗ ಬಂದ ಮಾಹಿತಿ ಅನ್ವಯ ಗಾಯಾಳುಗಳನ್ನಿಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಆದರೆ ಇವರಲ್ಲಿ ಸುಮಾರು 11 ವರ್ಷದ ಬಾಲಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.