Modi government that doesn't provide jobs... is telling youth to do reels: Rahul Gandhi

ಉದ್ಯೋಗ ನೀಡದ ಮೋದಿ ಸರ್ಕಾರ.. ಯುವಕರನ್ನು ರೀಲ್ಸ್ ಮಾಡಿ ಎನ್ನುತ್ತಿದೆ: ರಾಹುಲ್ ಗಾಂಧಿ ವಾಗ್ದಾಳಿ

ಪಾಟ್ನಾ: ಪಕೋಡಾ ಮಾರುವುದು ಎಂದು ಉದ್ಯೋಗವೇ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ಈಗ ನಮ್ಮ ಸರ್ಕಾರದ ಕಡಿಮೆ ದರದಲ್ಲಿ ಸಿಗುವ ಇಂಟರ್ನೆಟ್ ಬಳಸಿ ಇನ್ಸ್ಟಾಗ್ರಾಮ್ (Instagram) ಮೂಲಕ ರೀಲ್ಸ್ (Reels) ಮಾಡಿ ಯುವ ಸಮುದಾಯ ಹಣಗಳಿಸುತ್ತಿದ್ದಾರೆ ಎಂದಿರುವುದು ಪರ-ವಿರೋಧದ ಚರ್ಚೆಗೆ ಕಾರಣವಾಗಿದೆ.

ಹೌದು ಬಿಹಾರ ಚುನಾವಣೆಗೆ (Bihar election) ದಿನಗಣನೆ ಆರಂಭವಾದಂತೆ ಎನ್‌ಡಿಎ ಹಾಗೂ ಇಂಡಿಯಾ ಬಣದ ನಡುವಿನ ವಾಕ್ಸಮರ ಜೋರಾಗಿಯೇ ನಡೆಯುತ್ತಿದೆ.

ಕುಟುಂಬ ರಾಜಕಾರಣದ ಕುರಿತು ಅಮಿತ್ ಶಾ ವಾಗ್ದಾಳಿ ನಡೆಸಿದ್ದರೆ, ಕೇಂದ್ರ ಸರ್ಕಾರ ಉದ್ಯೋಗ ನೀಡದೆ ಇನ್ಸ್ಟಾಗ್ರಾಮ್ ಮೂಲಕ ರೀಲ್ಸ್ ಮಾಡಿ ಹಣ ಸಂಪಾದನೆ ಮಾಡಬಹುದು ಎನ್ನುವ ಪ್ರಧಾನಿ ಮೋದಿ ಅವರು ಮೂಲಕ ಯುವಕರನ್ನು ದಾರಿ ತಪ್ಪಿಸುತ್ತಿದ್ದಾರೆಂದು ವಿರೋಧ ಪಕ್ಷದ ನಾಯಕರ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ.

ಬಿಹಾರದ ಮತದಾರರು ನರೇಂದ್ರ ಮೋದಿ ಅವರ ನಾಟಕಕ್ಕೆ ಮರುಳಾಗಬಾರದು. ನಿಮ್ಮ ಓಟಿಗಾಗಿ ಅವರು ವೇದಿಕೆ ಮೇಲೆ ನೃತ್ಯ ಮಾಡಲೂ ಸಹ ಸಿದ್ದರಾಗಿರುತ್ತಾರೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅಣಕವಾಡಿದ್ದಾರೆ.

ಬಿಹಾರ ಚುನಾವಣಾ ಕಣದಲ್ಲಿನ ತಮ್ಮ ಮೊದಲ ಪ್ರಚಾರವನ್ನು ಮುಜಾಫರ್‌ಪುರ ಜಿಲ್ಲೆಯಲ್ಲಿ ಬುಧವಾರ ಆರಂಭಿಸಿದ ರಾಹುಲ್ ಗಾಂಧಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಮುಖವನ್ನು ಬಳಸಿಕೊಳ್ಳುವ ಮೂಲಕ ಬಿಜೆಪಿ ಬಿಹಾರದಲ್ಲಿನ ಎನ್‌ಡಿಎ ಮೈತ್ರಿಕೂಟ ಸರಕಾರವನ್ನು ‘ರಿಮೋಟ್ ಕಂಟ್ರೋಲ್ ಮೂಲಕ’ ನಡೆಸುತ್ತಿದೆ ಎಂದು ಆರೋಪಿಸಿದರು.

ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿ ಸರಕಾರ ‘ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ’. ಆದರೆ, ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಒತ್ತಾಯಕ್ಕೆ ಮಣಿದು ನರೇಂದ್ರ ಮೋದಿ ಸರಕಾರ ಜಾತಿ ಗಣತಿಗೆ ಒಪ್ಪಿಕೊಂಡಿದೆ ಎಂದರು.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ವೈರಲ್ ಆಗಿದೆ‌10 ವರ್ಷದಿಂದ ಯಮುನಾ ನದಿ ಸ್ವಚ್ಚಗೊಳಿಸದ ಸರ್ಕಾರ, ಪೈಪ್ ಮೂಲಕ ಗಂಗಾ ನದಿಯನ್ನು ತಂದು, ಜನರನ್ನು ದಾರಿತಪ್ಪಿಸಲು ಮುಂದಾಗಿದೆ.

ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಮೋದಿ ಕಾರ್ಯಕ್ರಮ ರದ್ದಾಗಿದೆ. ದೇಶದಲ್ಲಿ ಎರಡು ಬಗೆಯ ಭಾರತ ಉದಯಿಸಿವೆ. ಒಂದು ಸಾಮಾನ್ಯ ಜನರಿಗೆ ಸೇರಿದ್ದಾಗಿದ್ದರೆ, ಇನ್ನೊಂದು 5-10 ಶತಕೋಟ್ಯಾಧಿಪತಿಗಳಿಗೆ ಸೇರಿದ ಭಾರತವಾಗಿದೆ.

ಬಿಹಾರದಂತಹ ರಾಜ್ಯ ಬಡತನದಲ್ಲಿ ಬಳಲುತ್ತಿರುವುದಕ್ಕೆ ಇದೇ ಕಾರಣವಾಗಿದೆ. ನಿಜವಾಗಿ ಬಿಹಾರದಲ್ಲಿ ಅಗಾಧ ಸಾಮರ್ಥ್ಯವಿದೆ. ಆದರೆ, ಅದನ್ನು ಇನ್ನೂ ಬಳಸಿಕೊಳ್ಳಲಾಗಿಲ್ಲ ಎಂದು ರಾಹುಲ್ ವಿಷಾದಿಸಿದರು.

ಬಿಹಾರದ ಜನರು ದುಬೈ, ಮಾರಿಷಸ್, ಸೀಶೆಲ್ಸ್ ಮತ್ತು ಅಮೆರಿಕ ಮೊದಲಾದೆಡೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಹಾರದ ಜನತೆ ಅವರ ಸಂಪೂರ್ಣ ಸಾಮರ್ಥ್ಯ ವನ್ನು ಬಳಸಿಕೊಳ್ಳಬೇಕು ಎಂದು ಹುರಿದುಂಬಿಸಿದರು.

‘ಜನರಿಗೆ ಅಗ್ಗವಾಗಿ ಡೇಟಾ ಲಭ್ಯವಾಗುವಂತೆ ಮಾಡಿರುವುದಾಗಿ ಮೋದಿ ಹೆಮ್ಮೆಪಡುತ್ತಾರೆ. ಆದರೆ, ದೂರಸಂಪರ್ಕ ವಲಯದಲ್ಲಿ ಒಂದು ವ್ಯವಹಾರ ಸಂಸ್ಥೆಯ ಏಕಸ್ವಾಮ್ಯಕ್ಕೆ ಅವಕಾಶ ನೀಡಲಾಗಿದೆ ಎಂಬ ಅಂಶವನ್ನು ಅವರು ಮರೆಮಾಡುತ್ತಾರೆ ಎಂದು ಟೀಕಿಸಿದರು.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!