ದೊಡ್ಡಬಳ್ಳಾಪುರದಲ್ಲಿ ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ ಯಶಸ್ವಿ

Chemical spill mock-up demonstration successful in Doddaballapur

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಂತರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಎನ್.ಡಿ.ಆರ್.ಎಫ್ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಓಬದೇವನಹಳ್ಳಿ 3ನೇ ಹಂತದ ಕೈಗಾರಿಕಾ ಪ್ರದೇಶದಲ್ಲಿರುವ ಮುಸಾಶಿ ಆಟೋ ಪಾರ್ಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇಲ್ಲಿ ಅಫ್ ಸೈಟ್ ತುರ್ತು ರಾಸಾಯಿನಿಕ ಸೋರಿಕೆ ಅಣುಕು ಪ್ರದರ್ಶನವನ್ನು (Chemical spill mock-up demonstration) ಯಶಸ್ವಿಯಾಗಿ ನಡೆಸಲಾಯಿತು.

ಆಫ್-ಸೈಟ್ ತುರ್ತು ಅಣಕು ಪ್ರದರ್ಶನದಲ್ಲಿ ಸುಮಾರು 20 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳು, ಎನ್.ಡಿ.ಆರ್.ಎಫ್ ಸಿಬ್ಬಂದಿ, ಅಗ್ನಿಶಾಮಕ ದಳ, 02 ಆಂಬ್ಯುಲೆನ್ಸ್, 07 ಬಸ್ ಗಳು, ವೈದ್ಯರು, ದಾದಿಯರು, ವೀಕ್ಷಕರು ಮತ್ತು ವಿವಿಧ ಕಾರ್ಖಾನೆಗಳಿಂದ ಸುಮಾರು 100 ಪ್ರತಿನಿಧಿಗಳು ಭಾಗವಹಿಸಿದ್ದರು.

ಈ ಅಣುಕು ಪ್ರದರ್ಶನವನ್ನು ನೈಜ ಘಟನೆಯಂತೆ ಬಿಂಬಿಸಲಾಗಿತ್ತು.

DDMA ಯ ಸಹಾಯದಿಂದ ಪುನರ್ವಸತಿ ಕೇಂದ್ರಗಳಿಗೆ ಮುಸಾಶಿ ಆಟೋ ಪಾರ್ಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಕೈಗಾರಿಕಾ ಪ್ರದೇಶಕ್ಕೆ ಕಾರ್ಮಿಕರನ್ನು ಸ್ಥಳಾಂತರಿಸಲಾಯಿತು ಮತ್ತು ಪಕ್ಕದ ಕಾರ್ಖಾನೆಯಾದ Grover Jumpper Vineryard ಯಲ್ಲಿನ ನಿಯಂತ್ರಣ ಕೊಠಡಿಯಲ್ಲಿ ಡಿ-ಬೀಫಿಂಗ್ ನಡೆಸಲಾಯಿತು.

ಕಾರ್ಖಾನೆಯ 20 ಕಾರ್ಮಿಕರು ರಾಸಾಯನಿಕ ಸೋರಿಕೆಯಿಂದ ಗಾಯಗೊಂಡರು, ಎನ್.ಡಿ.ಆರ್.ಎಫ್ ತಂಡ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸಲಾಯಿತು.

ಈ ರಾಸಾಯನಿಕ ದುರಂತ ಅಣುಕು ಪ್ರದರ್ಶನದಿಂದ ಕಾರ್ಖಾನೆಯಲ್ಲಿ ಸುಮಾರು 265 ಕ್ಕೂ ಹೆಚ್ಚು ಕಾರ್ಮಿಕರನ್ನು ರಕ್ಷಿಸಿ ದೊಡ್ಡಬಳ್ಳಾಪುರದ ಡಿ ಕ್ರಾಸ್ ಬಳಿಯಿರುವ ಪುನರ್ವಸತಿ ಕೇಂದ್ರಗಳಾದ ಅಂಬೇಡ್ಕರ್ ಭವನ ಮತ್ತು ಸರ್ಕಾರಿ ಬಾಲಕಿಯರ ವಸತಿ ನಿಲಯಕ್ಕೆ ಸ್ಥಳಾಂತರಿಸಲಾಯಿತು.

ಕಾರ್ಖಾನೆಯ ಸುತ್ತಮುತ್ತಲಿನ ಗ್ರಾಮಗಳು ಮತ್ತು ಪ್ರದೇಶದ ಮಾರ್ಗಗಳನ್ನು DDMA ಯ ಸಹಯೋಗದೊಂದಿಗೆ ಸುತ್ತುವರಿದು ಟ್ರಾಫಿಕ್ ನಿಯಂತ್ರಿಸಲಾಯಿತು.

ಈ ಸಮಯದಲ್ಲಿ 02 ಕಾರ್ಮಿಕರು ಮೃತಪಟ್ಟಿದ್ದು, ಸಣ್ಣ-ಪುಟ್ಟ ಗಾಯಗಳಾಗಿರುವ 08 ಕಾರ್ಮಿಕರನ್ನು, ದೊಡ್ಡಬಳ್ಳಾಪುರ ತಾಲೂಕಿನ ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಯಿತು.

ಅತೀ ಹೆಚ್ಚು ಗಾಯಗಳಾದ 02 ಕಾರ್ಮಿಕರನ್ನು ವಿಕ್ಟೋರಿಯಾ ಮತ್ತು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಯಿತು.

ಇದಲ್ಲದೆ, ಡ್ರಿಲ್ ಮಾಡುವಾಗ ತೆಗೆದುಕೊಳ್ಳಬೇಕಾದ ಜವಾಬ್ದಾರಿಗಳು, ಸಂಪನ್ಮೂಲಗಳ ಅವಶ್ಯಕತೆ, ಕಾರ್ಮಿಕರ ಮತ್ತು ಕಾರ್ಖಾನೆಗಳ ಸುರಕ್ಷತೆ, ಕಾರ್ಖಾನೆ ಸುತ್ತಮುತ್ತಲಿನ ಕಾರ್ಮಿಕರ ಮತ್ತು ಜನಗಳ ಜಾಗರೂಕತೆ ಇತ್ಯಾದಿಗಳ ವಿಷಯಗಳ ಕುರಿತಂತೆ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಭಾಗಿದಾರರಿಂದ ಪಡೆಯಲಾಯಿತು.

ಇದು ಕೇವಲ ಅಣುಕು ಪ್ರದರ್ಶನವಾಗಿದ್ದು ಎಲ್ಲಾ ಇಲಾಖೆಗಳು ವಿಪತ್ತುಗಳು ಸಂಭವಿಸಿದಾಗ ಸರ್ವಸನ್ನದ್ಧರಾಗಿರಲು ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ಈ ಅಣುಕು ಪ್ರದರ್ಶನ ನೈಜ ಘಟನೆಯಂತೆ ನಡೆಸಲಾಗಿದ್ದು ವಿಪತ್ತು ಸಂಭವಿಸಿದಾಗ ಇಲಾಖೆಗಳ ಜವಾಬ್ದಾರಿ ಯನ್ನು ಪ್ರತ್ಯಕ್ಷವಾಗಿ ತಿಳಿಸಲು ಈ ಕಾರ್ಯಾಚರಣೆ ನಡೆಸಲಾಗಿದೆ. ಈ ಅಣುಕು ಪ್ರದರ್ಶನದಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿರುವುದಿಲ್ಲ.

ಅಣುಕು ಪ್ರದರ್ಶನದಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಕಾರ್ಖಾನೆಗಳ ಜಂಟಿ ನಿರ್ದೇಶಕರಾದ ನವನೀತ ಮೋಹನ್ ಎನ್, ಕಾರ್ಖಾನೆಗಳ ಉಪನಿರ್ದೇಶಕರಾದ ಎಂ ಎ ಸೋಮಶೇಖರ್, ನರಸಿಂಹಮೂರ್ತಿ ಎಸ್ಎ, , ವಿ ತಿಮ್ಮರಾಜು, ಮುಸಾಶಿ ಆಟೋ ಪಾರ್ಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕರಾದ ಸುಧಾಕರ್ ಚೌಹಾಣ್, ಉಪ ಪ್ರಧಾನ ವ್ಯವಸ್ಥಾಪಕರಾದ ಬಿ ಚಂದ್ರಶೇಖರ್ ಮತ್ತು ಭಾಗೀದಾರ ಇಲಾಖೆಗಳ ಪ್ರತಿನಿಧಿಗಳು, ವೀಕ್ಷಕರು ಮತ್ತು ವಿಪತ್ತು ನಿರ್ವಹಣಾ ತಜ್ಞೆ ಸ್ಮಿತಾ ಟಿ.ಎಲ್ ಭಾಗವಹಿಸಿದ್ದರು.

ರಾಜಕೀಯ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ಯಡಿಯೂರಪ್ಪರ 5 ದಶಕಗಳ ರಾಜಕೀಯ ಪಯಣ: 26ಕ್ಕೆ ಅಭಿಮಾನೋತ್ಸವದ ಭೂಮಿಪೂಜೆ

ರಾಜ್ಯ ಬಿಜೆಪಿಯ ಹಿರಿಯ ಮುತ್ಸದ್ದಿ ಬಿ.ಎಸ್. ಯಡಿಯೂರಪ್ಪ (B.S. Yediyurappa) ಅವರ ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಏಪ್ರಿಲ್ 26ರಂದು ಬೆಳಿಗ್ಗೆ 10 ಗಂಟೆಗೆ ಭೂಮಿಪೂಜೆ ನೆರವೇರಿಸಲಾಗುತ್ತಿದೆ. ಕಾರ್ಯಕ್ರಮದ ಸ್ಥಳಗಳಲ್ಲಿ ಪೆಂಡಾಲ್, ಸ್ಟೇಜ್ ಮುಂತಾದ

[ccc_my_favorite_select_button post_id="121304"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!