India enters final

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಮುಂಬೈ: ಜೆಮಿಮಾ ರೊಡ್ರಿಗಸ್ ಅವರ ಅಜೇಯ ಭರ್ಜರಿ ಶತಕ ಹಾಗೂ ಹರ್ಮನ್‌ಪ್ರೀತ್ ಕೌ‌ರ್ ಅವರ ಅರ್ಧಶತಕದ ಬಲದಿಂದ ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women’s ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

ಈ ಮೂಲಕ ಲೀಗ್ ಹಂತದಲ್ಲಿನ ಆಸೀಸ್ ವಿರುದ್ದದ ಸೋಲಿನ ಸೇಡನ್ನು ಭಾರತೀಯ ವನಿತೆಯರು ಗುರುವಾರ ತೀರಿಸಿಕೊಂಡರು. ಫೋಬೆ ಲಿಚ್‌ ಫೀಲ್ಸ್ ಶತಕದ ಹೊರತಾಗಿಯೂ ಸೋತು ಆಸೀಸ್‌ನ ಎಂಟನೇ ವಿಶ್ವಕಪ್ ಗೆಲ್ಲುವ ಕನಸು ಭಗ್ನವಾಯಿತು.

ಇಲ್ಲಿನ ಡಿ.ವೈ ಪಾಟೀಲ್ ಕ್ರಿಕೆಟ್ ಅಕಾಡೆಮಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ನೀಡಿದ್ದ 339 ರನ್‌ಗಳ ಕಠಿಣ ಗುರಿಯನ್ನು ಬೆಂಬತ್ತಿದ ಭಾರತ ತಂಡ ಎರಡು ವಿಕೆಟ್‌ಗಳನ್ನು ಕಳೆದುಕೊಂಡು ಆರಂಭಿಕ ಆಘಾತಕ್ಕೆ ಸಿಲುಕಿತ್ತು. ಆದರೆ ಜೆಮಿಮಾ ರೊಡ್ರಿಗಸ್ ಹಾಗೂ ಹರ್ಮನ್‌ ಪ್ರೀತ್ ಕೌರ್ ಅವರ 167 ರನ್‌ಗಳ ಜತೆಯಾಟದ ಬಲದಿಂದ 48.3 ಓವರ್ ಗಳಿಗೆ 4 ವಿಕೆಟ್ ನಷ್ಟಕ್ಕೆ 341 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಈ ಗೆಲುವಿನ ಮೂಲಕ ಭಾರತ ಮಹಿಳಾ ತಂಡದ ಚೊಚ್ಚಲ ಮಹಿಳಾ ಏಕದಿನ ವಿಶ್ವಕಪ್ ಗೆಲ್ಲುವ ಕನಸು ಜೀವಂತವಾಗಿ ಉಳಿದುಕೊಂಡಿದೆ. ನವೆಂಬರ್ 2ರಂದು ದಕ್ಷಿಣ ಆಫ್ರಿಕಾ ವಿರುದ್ದ ಭಾರತ ಮಹಿಳಾ ತಂಡವು ಫೈನಲ್ ನಲ್ಲಿ ಕಾದಾಟ ನಡೆಸಲಿದೆ.

ಜೆಮಿಮಾ ಭರ್ಜರಿ ಶತಕ

ಆಸೀಸ್ ನೀಡಿದ ಗುರಿ ಹಿಂಬಾಲಿಸಿದ ಭಾರತ ತಂಡ, 13 ರನ್ ಇದ್ದಾಗ ಶಫಾಲಿ ವರ್ಮಾ ಹಾಗೂ 59 ರನ್‌ಗೆ ಸ್ಮೃತಿ ಮಂಧಾನಾ ಅವರ ವಿಕೆಟ್‌ಗಳನ್ನು ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತ್ತು. ಆದರೆ ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದು ಕೊನೆಯವರೆಗೂ ಅಜೇಯರಾಗಿ ಬ್ಯಾಟ್ ಮಾಡಿದ ಜೆಮಿಮಾ ರೊಡ್ರಿಗಸ್ 134 ಎಸೆತಗಳಲ್ಲಿ 14 ಬೌಂಡರಿಗಳೊಂದಿಗೆ 127 ರನ್ (ಅಜೇಯ) ಗಳಿಸಿ ಭಾರತ ತಂಡವನ್ನು ಗೆಲ್ಲಿಸಿದರು.

ನಾಯಕಿ ಹರ್ಮನ್‌ ಪ್ರೀತ್ ಕೌರ್ (89) ಜತೆ 167 ರನ್‌ಗಳ ನಿರ್ಣಾಯಕ ಜತೆಯಾಟವನ್ನು ಆಡಿದರು.

ಅಮೋಘ ಪ್ರದರ್ಶನ ನೀಡಿದ ಜೆಮಿಮಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ದೀಪ್ತಿ ಶರ್ಮಾ 24 ಹಾಗೂ ರಿಚಾ ಘೋಷ್ 26 ಅವರು ಭಾರತಕ್ಕೆ ಉಪಯುಕ್ತ ಕಾಣಿಕೆ ನೀಡಿದರು.

338 ರನ್ ಕಲೆ ಹಾಕಿದ್ದ ಆಸ್ಟ್ರೇಲಿಯಾ: ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ ಆಸೀಸ್‌ ತಂಡದ ನಾಯಕಿ ಅಲಿಸಾ ಹೀಲಿ (5) ಬಹುಬೇಗ ವಿಕೆಟ್ ಒಪ್ಪಿಸಿದರು. ಫೋಬೆ ಲಿಚ್ ಫೀಲ್ಸ್ ಶತಕ (119 ರನ್) ಮತ್ತು ಎಲಿಸ್ ಪೆರಿ (77) ಹಾಗೂ ಆಲ್ಲೆ ಗಾರ್ಡ್ನರ್ (63) ಅವರ ಅರ್ಧಶತಕಗಳ ಬಲದಿಂದ 49.5 ಓವರ್‌ಗಳಿಗೆ 338 ರನ್‌ ಕಲೆ ಹಾಕಿತು.

ಫೋಬೆ ಲಿಚ್‌ ಫೀಲ್ಡ್‌ ಶತಕ

ಒಂದು ತುದಿಯಲ್ಲಿ ಕ್ರೀಸ್‌ನಲ್ಲಿ ತಳವೂರಿ ಬ್ಯಾಟ್ ಮಾಡಿದ ಲಿಚ್ ಫೀಲ್ಡ್, ಭಾರತೀಯ ಬೌಲರ್‌ಗಳನ್ನು ಮನಬಂದಂತೆ ಕಾಡಿದರು.

ಎರಡನೇ ವಿಕೆಟ್‌ಗೆ ಎಲಿಸ್ ಪೆರ್ರಿ ಮತ್ತು ಫೋಬೆ ಲಿಚ್ ಫೀಲ್ಡ್ ಅವರು 155 ರನ್‌ಗಳ ಜತೆಯಾಟವನ್ನು ಆಡಿದರು. ಆ ಮೂಲಕ ತಂಡದ ಮೊತ್ತವನ್ನು 200ರ ಗಡಿ ದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

ಒಂದು ತುದಿಯಲ್ಲಿ ಅದ್ಭುತವಾಗಿ ಬ್ಯಾಟ್ ಮಾಡಿದ ಎಲಿಸ್ ಪೆರಿ 88 ಎಸೆತಗಳಲ್ಲಿ ಎರಡು ಸಿಕ್ಸರ್ ಹಾಗೂ 6 ಬೌಂಡರಿಗಳೊಂದಿಗೆ 77 ರನ್ ಗಳಿಸಿ. ರಾಧಾ ಯಾದವ್‌ಗೆ ಕ್ಲೀನ್ ಬೌಲ್ಡ್ ಆದರು. ಆಲ್ಲೆ ಗಾರ್ಡ್ನರ್ ಕೂಡ ಅದ್ಭುತ ಇನ್ನಿಂಗ್ಸ್ ಆಡಿದರು.

45 ಎಸೆತಗಳಲ್ಲಿ 4 ಸಿಕರ್ ಹಾಗೂ 4 ಬೌಂಡರಿಗಳೊಂದಿಗೆ 63 ರನ್ ಕಲೆ ಹಾಕಿದರು. ಆ ಮೂಲಕ ತಂಡದ ಮೊತ್ತ 330ರ ಗಡಿ ದಾಟಲು ಪ್ರಮುಖ ಪಾತ್ರವನ್ನು ವಹಿಸಿದರು.

ಶ್ರೀಚರಣ ಅದ್ಭುತವಾಗಿ ಬೌಲ್ ಮಾಡಿ ಎರಡು ವಿಕೆಟ್ ಪಡೆದರೆ, ದೀಪ್ತಿ ಶರ್ಮಾ ಸ್ವಲ್ಪ ದುಬಾರಿಯಾದರೂ ಎರಡು ವಿಕೆಟ್ ಪಡೆದರು.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!