
ಬೆಂ.ಗ್ರಾ.ಜಿಲ್ಲೆ: “70ನೇ ಕನ್ನಡ ರಾಜ್ಯೋತ್ಸವ”ದ (Kannada Rajyotsava Celebration) ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು (A.B.Basavaraju) ಅವರು ರಾಷ್ಟ್ರ ಧ್ವಜಾರೋಹಣ” ನೆರವೇರಿಸಿದರು.
ಬಳಿಕ ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿ, ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡುವ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್, ಯೋಜನಾ ಅಧಿಕಾರಿ ರಾಮಕೃಷ್ಣಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.