
ಶ್ರೀಕಾಕುಳಂ: ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗ ವೆಂಕಟೇಶ್ವರ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ (Stampede) 9 ಮಂದಿ ಭಕ್ತರು ಸಾವನಪ್ಪಿದ್ದಾರೆಂದು ವರದಿಯಾಗಿದೆ.
ಕಾಲ್ತುಳಿತಕ್ಕೆ ಪ್ರಮುಖ ಕಾರಣ ಹೆಚ್ಚಿನ ಸಂಖ್ಯೆಯ ಭಕ್ತರ ಲಗ್ಗೆ ಇಟ್ಟಿದ್ದು ಎನ್ನಲಾಗಿದೆ.
Andhra Pradesh: Stampede at Venkateswara Temple in Kashibugga, Srikakulam district; several devotees dead, injuries reported. pic.twitter.com/owMt8cEI6j
— The Siasat Daily (@TheSiasatDaily) November 1, 2025
ದೇವಾಲಯವು 2-3 ಸಾವಿರ ಸಾಮರ್ಥ್ಯ ಹೊಂದಿದೆ, ಆದರೆ ಇಂದು 25 ಸಾವಿರಕ್ಕೂ ಹೆಚ್ಚು ಜನರು ಸೇರಿದ್ದರು. ಕಾರ್ತಿಕ ಏಕಾದಶಿ ಮತ್ತು ಶನಿವಾರವಾದ್ದರಿಂದ, ಹೆಚ್ಚಿನ ಸಂಖ್ಯೆಯ ಭಕ್ತರು ವೆಂಕಣ್ಣನ ದರ್ಶನಕ್ಕೆ ಬಂದಿದ್ದರು.
ಇದರಿಂದಾಗಿ, ಸಾಮಾನ್ಯ ಮಟ್ಟದಲ್ಲಿದ್ದ ಕಂಬಿಬೇಲಿ ಮುರಿದು ಭಕ್ತರು ಬಿದ್ದರು. ಇದ್ದಕ್ಕಿದ್ದಂತೆ, ಅಸ್ತವ್ಯಸ್ತ ಪರಿಸ್ಥಿತಿ ಕಾಲ್ತುಳಿತಕ್ಕೆ ಕಾರಣವಾಯಿತು ಎನ್ನಲಾಗಿದೆ.
ಈ ಕುರಿತಂತೆ ಎಕ್ಸ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಚಂದ್ರಬಾಬು ನಾಯ್ಡು, ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ನಡೆದ ಕಾಲ್ತುಳಿತ ಘಟನೆ ಆಘಾತವನ್ನುಂಟು ಮಾಡಿದೆ. ಈ ದುರಂತ ಘಟನೆಯಲ್ಲಿ ಭಕ್ತರ ಸಾವು ಅತ್ಯಂತ ಹೃದಯವಿದ್ರಾವಕವಾಗಿದೆ.
ಮೃತರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ.
ಗಾಯಗೊಂಡವರಿಗೆ ತ್ವರಿತ ಮತ್ತು ಸರಿಯಾದ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಘಟನೆಯ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮಗಳನ್ನು ಮೇಲ್ವಿಚಾರಣೆ ಮಾಡುವಂತೆ ಸ್ಥಳೀಯ ಅಧಿಕಾರಿಗಳು ಮತ್ತು ಸಾರ್ವಜನಿಕ ಪ್ರತಿನಿಧಿಗಳನ್ನು ನಾನು ವಿನಂತಿಸಿದ್ದೇನೆ ಎಂದಿದ್ದಾರೆ.