
ದೊಡ್ಡಬಳ್ಳಾಪುರ: ತಾಲೂಕಿನ ಆರೂಢಿ ಗ್ರಾಮದಲ್ಲಿ 11ನೇ ವರ್ಷದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು (Maharishi Valmiki Jayanti) ಸಂಭ್ರಮದಿಂದ ಆಚರಿಸಲಾಯಿತು.
ಶ್ರೀ ವಾಲ್ಮೀಕಿ ನಾಯಕ ಯುವಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದ ಅಂಗವಾಗಿ ಮಹರ್ಷಿ ವಾಲ್ಮೀಕಿ ಭಾವಚಿತ್ರವನ್ನು ಬೆಳ್ಳಿ ಪಲ್ಲಕ್ಕಿಯ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ಮಹಿಳೆಯರು ಕಳಶ ಹೊತ್ತು ಬೆಳ್ಳಿ ಪಲ್ಲಕ್ಕಿಯ ಮುಂದೆ ಹೆಜ್ಜೆ ಹಾಕಿದರೆ, ಯುವಕರು, ಮಕ್ಕಳು, ಯುವತಿಯರು, ಮಹಿಳೆಯರು ಬ್ಯಾಂಡ್ ಸೆಟ್ ಸದ್ದಿಗೆ ಭರ್ಜರಿ ಸ್ಟೆಪ್ ಹಾಕಿ ಗಮನ ಸೆಳೆದರು.
ಮೆರವಣಿಗೆ ಬಳಿಕ ಸಂಗೀತ ಸಂಜೆ (orchestra) ಆಯೋಜಿಸಲಾಗಿತ್ತು.