Awards for deserving ones: Cmsiddaramaiah praises

ಅರ್ಹರಿಗೆ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ಪ್ರಶಂಸೆ

ಬೆಂಗಳೂರು; ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿ ಆಯ್ಕೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ನುಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ “70ನೇ ಕರ್ನಾಟಕ ರಾಜ್ಯೋತ್ಸವವನ್ನು ಉದ್ಘಾಟಿಸಿ 70 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿ ಮಾತನಾಡಿದರು.

ಕರ್ನಾಟಕ ಉದಯವಾಗಿ 70 ವರ್ಷಗಳಾಗಿರುವುದನ್ನು ಪರಿಗಣಿಸಿ 70 ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದರು.

ಅರ್ಜಿ ಹಾಕಿದವರನ್ನು ಪರಿಗಣಿಸದೇ ಆಯಾ ಕ್ಷೇತ್ರದ ಪರಿಣಿತರನ್ನೇ ಗುರುತಿಸಿ ಆಯ್ಕೆ ಮಾಡಬೇಕು ಎನ್ನುವುದು ನಮ್ಮ ತೀರ್ಮಾನವಾಗಿತ್ತು. ಪುರಸ್ಕೃತರೆಲ್ಲರೂ ಶತಾಯುಶಿಗಳಾಗಿ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಇನ್ನಷ್ಟು ಸಾಧನೆ ಮಾಡಿ ನಿಮ್ಮದೆಲ್ಲಾ ಸಾರ್ಥಕ ಬದುಕು ಆಗಲಿ ಎಂದು ಹಾರೈಸಿದರು.

ಒಂದೇ ವಿಭಾಗದಲ್ಲಿ ಒಬ್ಬರಿಗಿಂತ ಹೆಚ್ಚು ಸಾಧಕರ ಹೆಸರು ಇದ್ದ ಸಂದರ್ಭದಲ್ಲಿ ಮಾತ್ರ ಪ್ರಾದೇಶಿಕ ನ್ಯಾಯ, ಸಾಮಾಜಿಕ ನ್ಯಾಯದ ಕಾರಣಕ್ಕಾಗಿ ಆ ಅರ್ಹರಲ್ಲೇ ಒಬ್ಬರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದರು.

ಮಾಧ್ಯಮಗಳು ಯಾರ ಆಯ್ಕೆ ಬಗ್ಗೆಯೂ ತಕರಾರು ಮಾಡಿಲ್ಲ. ಆದ್ದರಿಂದ ಅರ್ಹರಿಗೇ ಪ್ರಶಸ್ತಿ ಸಿಕ್ಕಿದೆ ಎಂದು ಭಾವಿಸುತ್ತೇನೆ ಎಂದು ಮೆಚ್ಚುಗೆ ಸೂಚಿಸಿದರು.

ಪ್ರಶಸ್ತಿ ಪುರಸ್ಕೃತರಾದ ಕೋಣಂದೂರು ಲಿಂಗಪ್ಪ ಅವರನ್ನು ಉಲ್ಲೇಖಿಸಿ ಸಮಾಜವಾದಿ ಹೋರಾಟದ ದಿನಗಳನ್ನು ಸ್ಮರಿಸಿದರು.

ಎಲ್ಲಾ ಸಮುದಾಯ, ಕ್ಷೇತ್ರ, ಜಿಲ್ಲೆಗಳ ಸಾಧಕರ ಪರಿಗಣನೆ: ಡಿಸಿಎಂ ಡಿ.ಕೆ. ಶಿವಕುಮಾರ್

“ನಾವು ಗಳಿಸಿದ ಸಂಪತ್ತು ಕ್ಷಣಿಕ. ಆದರೆ ನಾವು ಪಡೆದ ಜ್ಞಾನ, ಮಾಡಿದ ಸಾಧನೆ ಶಾಶ್ವತ. ಸಾಧನೆ ಇಲ್ಲದೇ ಸತ್ತರೆ ಸಾವಿಗೆ ಅವಮಾನ. ಆದರ್ಶ ಇಲ್ಲದೇ ಬದುಕಿದರೆ ಬದುಕಿಗೆ ಅವಮಾನ. ಅವಕಾಶ ಪಡೆದವನು ಅದೃಷ್ಟವಂತ, ಅವಕಾಶ ಸೃಷ್ಟಿಸಿಕೊಳ್ಳುವವನು ಬುದ್ದಿವಂತ” ಹೀಗೆ ಹಲವಾರು ನುಡಿಗಟ್ಟುಗಳನ್ನು ಹೇಳುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಸಾಧನೆಯನ್ನು ಬಣ್ಣಿಸಿದರು.

ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಅವರು ಮಾತನಾಡಿದರು.

“ಅನೇಕ ಸಾಧಕರ ಜ್ಞಾನದ ಬಲದಿಂದ ಕರ್ನಾಟಕಕ್ಕೆ ಹೆಸರು ಬಂದಿದೆ. ದೇವರು ವರವನ್ನೂ ನೀಡುವುದಿಲ್ಲ, ಶಾಪವನ್ನೂ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾ‌ನೆ.‌ ಸಿಕ್ಕಂತಹ ಅವಕಾಶ ಬಳಸಿಕೊಂಡು ಸಾಧನೆ ಮಾಡಿದವರು ಇಂದು ನಮ್ಮ ಮುಂದಿದ್ದಾರೆ. ಕನ್ನಡವನ್ನು ಉಸಿರಾಡಿದ, ಬೆಳಗಿದ, ಕನ್ನಡದಲ್ಲಿ ಬದುಕಿದ ಸಾಧಕರಿವರು” ಎಂದರು.

“ಕಣ್ಣಲ್ಲಿ ಕೇಳಿದ್ದು ಸತ್ಯ ಆದರೆ ಕಿವಿಯಲ್ಲಿ ಕೇಳಿದ್ದು ಸುಳ್ಳು ಎನ್ನುವ ಮಾತನ್ನು ನಾವೆಲ್ಲರೂ ಕೇಳಿರುತ್ತೇವೆ. ಪ್ರಶಸ್ತಿ ಪುರಸ್ಕೃತರಲ್ಲಿನ 13 ಜನ ಸಾಧಕರು ರಾಜ್ಯ ರಾಜಧಾನಿ ಬೆಂಗಳೂರನ್ನೇ ನೋಡಿಲ್ಲ. ಕಡು ಬಡತನದಲ್ಲಿ ಬೆಳೆದಿದ್ದರು ಸಹ ಕಲೆ ಹಾಗೂ ಜನರಿಗಾಗಿ ಬದುಕನ್ನೇ ತ್ಯಾಗ ಮಾಡಿದ್ದಾರೆ. ಪ್ರಶಸ್ತಿ ಪುರಸ್ಕೃತರಲ್ಲಿ ಎಲ್ಲಾ ಸ್ತರದವರೂ ಇದ್ದಾರೆ. ಹಿರಿಯರಿದ್ದಾರೆ. ಇಂತಹ ಚೇತನಗಳಿಗೆ ಸನ್ಮಾನ ಮಾಡುವ ಭಾಗ್ಯ ದೊರೆತಿದ್ದು ನನ್ನ ಭಾಗ್ಯ” ಎಂದರು.

“ಪ್ರಶಸ್ತಿಗೆ ಭಾಜನರಾಗಿರುವ ಕೋಣಂದೂರು ಲಿಂಗಪ್ಪನವರು. ನಮ್ಮ ನಡುವಿನ ಹಿರಿಯ ಮುತ್ಸದ್ದಿ. ಇವರು, ಬಂಗಾರಪ್ಪನವರು ಹಾಗೂ ಕಾಗೋಡು ತಿಮ್ಮಪ್ಪನವರು ಮಾತಿಗೆ ನಿಂತರೆ ಇಡೀ ವಿಧಾನಸಭೆಯೇ ನಡುಗುತ್ತಿತ್ತು ಎಂದು ಆಗ ಹೇಳುತ್ತಿದ್ದರು. ಲಿಂಗಪ್ಪ ಅವರು ಶಾಂತವೇರಿ ಗೋಪಾಲಗೌಡರ ಶಿಷ್ಯರು. ಇವರು ಸದನದಲ್ಲಿ ಮಾತನಾಡಿದ್ದು, ಜನರ ಪರವಾಗಿ ಕೆಲಸ ಮಾಡಿದ್ದು ಇಂದಿಗೂ ದಾಖಲೆಗಳಾಗಿ ನಮ್ಮ ನಡುವೆ ಇದ್ದಾವೆ” ಎಂದರು.

“ಎಂ.ಎಸ್.‌ರಾಮಯ್ಯ ಅವರ ಮಗನಾದ ಎಂ.ಆರ್. ಜಯರಾಮ್ ಅವರು ಅತ್ಯಂತ ಶ್ರೀಮಂತ ವ್ಯಕ್ತಿ. ಅವರ ಶ್ರೀಮಂತಿಕೆ ನೋಡಿ ನಾವು ಈ ಪ್ರಶಸ್ತಿ ನೀಡಿಲ್ಲ. 1978 ರಲ್ಲಿಯೇ ಶಾಸಕರಾಗಿ ಕೆಲಸ ಮಾಡಿದವರು. ವೈದ್ಯಕೀಯ ಕಾಲೇಜಿನ ಅಧ್ಯಕ್ಷರಾಗಿದ್ದರು. ಆದರೂ ಹಳ್ಳಿ, ಹಳ್ಳಿಗೆ ತೆರಳಿ ಭಜನೆ ಮಾಡಿಕೊಂಡು ತಾವು ನಂಬಿದ ಆಚರಣೆಯನ್ನು ತಿಳಿಸುತ್ತಿದ್ದಾರೆ. ಸಾವಿರಾರು ವಿದ್ಯಾರ್ಥಿಗಳನ್ನು ಸಮಾಜಕ್ಕೆ ಕೊಡುಗೆ ನೀಡಿದವರಿವರು” ಎಂದು ಬಣ್ಣಿಸಿದರು.

“ಇನ್ನೊಬ್ಬ ಸಾಧಕರಾದ ಸೀತಾರಾಮ್ ಶೆಟ್ಟಿ ಅವರು ಎಂಜಿನಿಯರಿಂಗ್ ಪರಿಣಿತರು. ಕೋಲಾರ ಹಾಗೂ ಚಿಕ್ಕಬಳ್ಳಾಪುರ ಭಾಗಕ್ಕೆ ನೀರು ತರಲು ಕಾಲುವೆ ನಿರ್ಮಾಣ‌ ಮಾಡಲಾಗುತ್ತಿದೆ. ಒಂದು ಕಡೆ ಸುಮಾರು 43 ಮೀ.‌ ಎತ್ತರದ, 10.5 ಕಿ.ಮೀ ಉದ್ದದ ಅಕ್ವಾಡೆಕ್ ವಿನ್ಯಾಸ ಮಾಡಿದ್ದಾರೆ. ಅದರ ಮೇಲೆ ಎರಡು ಲಾರಿಗಳು ಓಡಾಡಬಹುದು. ಅಷ್ಟು ಸುಂದರವಾದ ಹಾಗೂ ಭಾರತದಲ್ಲಿಯೇ ಮಾದರಿ ನಿರ್ಮಾಣ ಇದಾಗಿದೆ” ಎಂದು ಹೇಳಿದರು.

“ನಾನು ಈ ಹಿಂದೆ ಬಂದೀಖಾನೆ ಸಚಿವನಾಗಿದ್ದ ವೇಳೆ ಆಗ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಎನ್.ಎಸ್.ರಾಮೇಗೌಡರು ಕಾರ್ಯನಿರ್ವಹಿಸುತ್ತಿದ್ದರು. ಆ ವೇಳೆಯಲ್ಲಿ ಅವರು ಜೈಲಿನಲ್ಲಿ ಮುಕ್ತ ವಿಶ್ವವಿದ್ಯಾಲಯದ ಅಧ್ಯಯನ ಕೇಂದ್ರ ತೆರೆದು ಕೈದಿಗಳೂ ಸಹ ಪದವಿ ಪಡೆಯುವ ವ್ಯವಸ್ಥೆ ಮಾಡಿದವರು. ಆಶಿಶ್ ಬಲ್ಲಾಳ್ ಅವರು ಕ್ರೀಡಾ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ ಮಾಡಿದವರು” ಎಂದು ಹೇಳಿದರು.

ವರ್ಷಕ್ಕೆ ಒಂದರಂತೆ ಪ್ರಶಸ್ತಿ ಹೆಚ್ಚಳ

“ನಮ್ಮ‌ ನಡುವೆ ಇನ್ನೂ ಅನೇಕ ಸಾಧಕರಿದ್ದಾರೆ. ಆದರೆ ಆಯಾ ಆಚರಣೆ ವರ್ಷಕ್ಕೆ ತಕ್ಕಂತೆ ಪ್ರಶಸ್ತಿ ನೀಡಬೇಕು ಎನ್ನುವ ನಿಯಮವನ್ನು ಮಾಡಿಕೊಂಡಿರುವ ಕಾರಣಕ್ಕೆ ಈ ಬಾರಿ 70 ಸಾಧಕರನ್ನು ಗುರುತಿಸಲಾಗಿದೆ.‌ ಮುಂದಿನ ವರ್ಷ 71 ಜನ ಸಾಧಕರನ್ನು ಪರಿಗಣಿಸಲಾಗುವುದು. ಎಲ್ಲಾ ಸಮುದಾಯ, ಕ್ಷೇತ್ರ, ಜಿಲ್ಲೆಗಳ ಸಾಧಕರನ್ನು ಪರಿಗಣಿಸಲಾಗಿದೆ. ಯಾವುದೇ ಅರ್ಜಿ ಆಹ್ವಾನ ಮಾಡದೆ ನಿಜವಾದ ಸಾಧಕರನ್ನು ಗುರುತಿಸಲಾಗಿದೆ” ಎಂದರು.

“ನನಗೆ ಪ್ರಶಸ್ತಿ ದೊರಕಿಲಿಲ್ಲ ಎನ್ನುವ ಕೊರಗು ಬೇಡ. ಅದಕ್ಕೆ ಡಿವಿಜಿ ಅವರ ಕಗ್ಗ ನಮಗೆ ಉತ್ತಮ ಉದಾಹರಣೆ. ಏನಾನುಮಂ ಮಾಡು ಕೈಗೆ ದೊರೆತುಜ್ಜುಗವ/ ನಾನೇನು ಹುಲುಕಡ್ಡಿಯೆಂಬ ನುಡಿ ಬೇಡ/ ಹೀನಮಾವುದುಮಿಲ್ಲ ಜಗದ ಗುಡಿಯೂಳಿಗದಿ/ ತಾಣ ನಿನಗಿಹುದಿಲ್ಲಿ ಮಂಕುತಿಮ್ಮ. ಹೀಗೆ ಒಂದಲ್ಲ ಒಂದು ದಿನ ಎಲ್ಲರಿಗೂ ಅವಕಾಶ ಬರಲಿದೆ. ನಾವೆಲ್ಲರೂ ಕಾಯಬೇಕು” ಎಂಬರ್ಥದ ಕಗ್ಗವನ್ನು ಡಿಸಿಎಂ ಅವರು ವಾಚಿಸಿದರು.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!