Doddaballapura TAPMCS election

ಗುಡ್ಮಾರ್ನಿಂಗ್ ನ್ಯೂಸ್: ಇಂದು ದೊಡ್ಡಬಳ್ಳಾಪುರ TAPMCS ಚುನಾವಣೆ

ದೊಡ್ಡಬಳ್ಳಾಪುರ: ಜಿದ್ದಾಜಿದ್ದಿಯಾಗಿ ಮಾರ್ಪಟ್ಟಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆ ಇಂದು (ನ.2) ಬೆಳಗ್ಗೆ 9 ಗಂಟೆಯಿಂದ ಸಂಜೆ 4ವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ)ದಲ್ಲಿ ನಡೆಯಲಿದೆ.

ಈ ಚುನಾವಣೆಯಲ್ಲಿ 5,571 ಮತದಾರರು ಮತದಾನ ಮಾಡಲಿದ್ದು, ಮತದಾನಕ್ಕೆ ಎಲ್ಲಾ ಸಿದ್ಧತೆ ಅಂತಿಮಗೊಂಡಿವೆ. ಮತದಾನ ಹಾಗೂ ಮತಗಳ ಎಣಿಕೆಗಾಗಿ 80 ಸಿಬ್ಬಂದಿ ನೇಮಿಸಲಾಗಿದೆ. ಮತದಾನ 12 ಕೊಠಡಿಗಳಲ್ಲಿ ನಡೆಯಲಿದೆ. ಪ್ರತಿಯೊಂದು ಕೊಠಡಿಯಲ್ಲೂ 8 ಮತಪೆಟ್ಟಿಗೆಗಳು ಇರಲಿವೆ.

ಟಿಎಪಿಎಂಸಿಎಸ್ ನೀಡಲಾಗಿರುವ ಭಾವಚಿತ್ರ ಇರುವ ಗುರುತಿನ ಚೀಟಿಯನ್ನು ತೋರಿಸುವ ಮೂಲಕ ಮತದಾನ ಮಾಡಬಹುದಾಗಿದೆ. ಸಂಜೆ 4 ಗಂಟೆಗೆ ಮತದಾನ ಮುಕ್ತಾಯವಾದ ನಂತರ ಮತಗಳ ಎಣಿಕೆ ನಡೆಯಲಿದೆ.

ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಸಹ ಏರ್ಪಡಿಸಲಾಗಿದೆ.

ಅಂತಿಮ ಚುನಾವಣಾ ಕಣದಲ್ಲಿ ‘ಎ’ ತರಗತಿಯ 5 ನಿರ್ದೇಶಕ ಸ್ಥಾನಗಳಿಂದ 9 ಜನ, ‘ಬಿ’ ತರಗತಿಯ 8 ನಿರ್ದೇಶಕ ಸ್ಥಾನಗಳಿಗೆ 19 ಜನ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ‘ಎ’ ತರಗತಿಯಲ್ಲಿ 20 ಜನ ಮತದಾರರು ಇದ್ದು ಒಬ್ಬರು 5 ಜನ ನಿರ್ದೆಶಕರನ್ನು ಆಯ್ಕೆಮಾಡಬೇಕು. ‘ಬಿ’ ತರಗತಿಯಲ್ಲಿ 5, 571 ಜನ ಮತದಾರರು ಇದ್ದು, ಒಬ್ಬರು 8 ನಿರ್ದೆಶಕರನ್ನು ಆಯ್ಕೆ ಮಾಡಬೇಕಿದೆ.

ಎ ಮತ್ತು ಬಿ ತರಗತಿಯ ಎಲ್ಲಾ 13 ಸ್ಥಾನಗಳಿಗೂ ಕಾಂಗ್ರೆಸ್ ತಮ್ಮ ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯೊಂದಿಗೆ ಎಲ್ಲಾ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!