Former Prime Minister H.D. Deve Gowda wishes the people of the country on the occasion of Gauri Ganesh festival.

ಮಾವು ಬೆಳೆಗಾರರಿಗೆ ಸಿಹಿ ಸುದ್ದಿ: ದೇವೇಗೌಡರ ಮನವಿಗೆ ಕೇಂದ್ರದ ಸ್ಪಂದನೆ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ (H.D. Deve Gowda) ಅವರ ಮನವಿಯ ಮೇರೆಗೆ ಕೇಂದ್ರ ಸರಕಾರ ಮಾವು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ್ದು, ರಾಜ್ಯದ ಮಾವಿನ ಬೆಳೆಗಾರರಿಗೆ ಕೊರತೆ ಬೆಲೆ ಪಾವತಿ ಮಾಡುವುದು ಹಾಗೂ ಮಾರುಕಟ್ಟೆ ಮಧ್ಯಸ್ಥಿಕೆಗೆ ಕೇಂದ್ರದ ಅನುಮೋದನೆ ನೀಡಿದೆ. ಇದರಿಂದ ಬೆಲೆ ಕುಸಿತದಿಂದ ಕಂಗಾಲಾಗಿದ್ದ ಮಾವು ಬೆಳೆಗಾರರಿಗೆ ಅನುಕೂಲ ಆಗಲಿದೆ.

ಈ ಬಗ್ಗೆ ಮಾಜಿ ಪ್ರಧಾನಿ ಜೂನ್ 22 ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್‌ರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಮಾಜಿ ಪ್ರಧಾನಿಗಳ ಮನವಿಗೆ ಸ್ಪಂದಿಸಿರುವ ಕೇಂದ್ರ ಸಚಿವರು ಮಾವು ಬೆಳೆಗಾರರಿಗೆ ನೆರವಿನ ಹಸ್ತ. ಚಾಚಿದ್ದಾರೆ.

ಕರ್ನಾಟಕದ ಮಾವು ಬೆಳೆಗಾರರನ್ನು ಬೆಂಬಲಿಸಲು ಕೇಂದ್ರ ಸರಕಾರ ತಕ್ಷಣ ಮಧ್ಯಪ್ರವೇಶಿಸಬೇಕು. ಕಡಿಮೆ ಇಳುವರಿ, ಹವಾಮಾನ ವೈಪರಿತ್ಯ ಮತ್ತು ಮಾವಿನಹಣ್ಣಿನ ಅಂತರಾಜ್ಯ ಸಾಗಣೆಯ ಮೇಲಿನ ನಿರ್ಬಂಧಗಳಿಂದ ಉಂಟಾದ ತೀವ್ರ ಬೆಲೆ ಕುಸಿತದ ಬಗ್ಗೆ ಮಾಜಿ ಪ್ರಧಾನಿಗಳು ಪತ್ರದಲ್ಲಿ ಉಲ್ಲೇಖಿಸಿದ್ದರು.

ಈ ಸಮಸ್ಯೆಗಳಿಂದ ವಿಶೇಷವಾಗಿ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಮಾವು ಬೆಳೆಗಾರರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿತ್ತು. ಮುಂದಿನ ದಿನಗಳಲ್ಲಿಯೂ ಇಂತಹುದೇ ಸಮಸ್ಯೆ ಬರುವ ಸಾಧ್ಯತೆ ಇರುವುದರಿಂದ ತಾವು ಬೆಳೆಗಾರರ ನೆರವಿಗೆ ಬರಬೇಕು ಎಂದು ಮಾಜಿ ಪ್ರಧಾನಿಗಳು ಸಚಿವರನ್ನು ಕೋರಿದ್ದರು.

ಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಮಾಜಿ ಪ್ರಧಾನಿ ದೇವೇಗೌಡರಿಗೆ ಪತ್ರ ಬರೆದು, ಕೇಂದ್ರ ಸರಕಾರ ಕರ್ನಾಟಕದಲ್ಲಿ 2025-26ನೆ ಮಾರುಕಟ್ಟೆ ಋತುವಿನಲ್ಲಿ ಬೆಲೆ ಕೊರತೆ ಪಾವತಿ ಯೋಜನೆಯಡಿ ಕ್ವಿಂಟೀ 1,616 ರು.ಮಾರುಕಟ್ಟೆ ಹಸ್ತಕ್ಷೇಪ ಬೆಲೆಯಲ್ಲಿ 2.5 ಮೆಟ್ರಿಕ್ ಟನ್ ಮಾವಿನಹಣ್ಣಿನ ಖರೀದಿಗೆ ಅನುಮೋದಿಸಿದೆ ಎಂದು ತಿಳಿಸಿದ್ದಾರೆ.

ರಾಜಕೀಯ

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲ: ಸಚಿವ ಕೆ.ಹೆಚ್. ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ (LPG cylinders) ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ

[ccc_my_favorite_select_button post_id="120254"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!