Tejasvi Surya is a great leader; he was brought up in America: DCM D.K. Shivakumar

ತೇಜಸ್ವಿ ಸೂರ್ಯ ದೊಡ್ಡ ನಾಯಕ; ಅಮೆರಿಕಾದಲ್ಲಿ ಉಗಿಸಿಕೊಂಡು ಬಂದಿದ್ದ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿ ನಾಯಕರು ಟೀಕೆ ಬಿಟ್ಟು ಸಲಹೆಗಳನ್ನು ನೀಡಲಿ. ಈ ಯೋಜನೆ ನನ್ನ ಆಸ್ತಿಯಲ್ಲ. ಸಾರ್ವಜನಿಕರಿಗಾಗಿ ಮಾಡುತ್ತಿರುವ ಯೋಜನೆ. ನನಗೆ ಬಿಜೆಪಿಯವರು (BJP) ಪರಿಹಾರ ಮಾತ್ರ ತಿಳಿಸಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ಅವರು ಹೇಳಿದ್ದಾರೆ.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ‌ಭಾನುವಾರ ಪ್ರತಿಕ್ರಿಯೆ ನೀಡಿದರು.

ಟನಲ್ ರಸ್ತೆ ವಿರೋಧಿಸಿ ಬಿಜೆಪಿಯವರು ಸಹಿ ಸಂಗ್ರಹ ಅಭಿಯಾನ ನಡೆಸುತ್ತಿರುವ ಬಗ್ಗೆ ಕೇಳಿದಾಗ, “ನನಗೂ ಸಹಿ ಸಂಗ್ರಹ ಅಭಿಯಾನಕ್ಕೆ ಕರೆ ನೀಡಲು ಗೊತ್ತಿದೆ. ಅವರಿಗಿಂತ ಹೆಚ್ಚು ಸಂಘಟನೆ ಮಾಡುವವನು ನಾನು. ಅವರು ಒಂದು ಸಂಸ್ಥೆ ಇಟ್ಟುಕೊಂಡು ಸಂಘಟನೆ ಮಾಡುತ್ತಿದ್ದಾರೆ. ನಾವು ಪಕ್ಷದ ಮೂಲಕವೇ ಸಂಘಟನೆ ಮಾಡುತ್ತಿದ್ದೇವೆ. ಯಾವುದೇ ಪರಿಹಾರ ಹೇಳದೆ ಟೀಕೆ ಮಾಡಿದರೆ ಏನು ಪ್ರಯೋಜನ? ಒಳ್ಳೆಯ ಸಲಹೆಗಳನ್ನು ನೀಡಿದರೆ ಒಪ್ಪಿಕೊಳ್ಳೋಣ” ಎಂದರು.

ಆರ್ ಎಸ್ ಎಸ್ ಇಲ್ಲದೇ ಹೋದರೆ ಬಿಜೆಪಿ ಶೂನ್ಯ

“ಆರ್ ಎಸ್ ಎಸ್ ಇಲ್ಲದೇ ಹೋದರೆ ಬಿಜೆಪಿಯು ಶೂನ್ಯ. ಬಿಜೆಪಿ ಬದುಕಿರುವುದೇ ಆರ್ ಎಸ್ ಎಸ್ ನಿಂದ. ಇದು ಬಿಟ್ಟರೆ ಬೇರೆ ಯಾವುದೇ ಅಸ್ತ್ರ ಅವರುಗಳ ಬಳಿ ಇಲ್ಲ. ಅವರಲ್ಲಿ ಶೇ. 20 ರಷ್ಟು ಜನ ಬಿಟ್ಟರೆ ಮಿಕ್ಕ ಎಲ್ಲರೂ ಕಲುಷಿತಗೊಂಡವರೇ. ದಳ, ಕಾಂಗ್ರೆಸ್ ಹಾಗೂ ಬೇರೆ,‌ ಬೇರೆ ಪಕ್ಷಗಳಿಂದ ಹೋಗಿರುವವರೇ ಅಲ್ಲಿರುವುದು” ಎಂದು ತಿವಿದರು.

ಮೆಟ್ರೋ ಸಂಚಾರ ಟನಲ್ ಮೂಲಕವೇ ಅಲ್ಲವೇ?

“ಮೆಟ್ರೋ ಮಾರ್ಗ ಹೋಗುವುದು ಟನಲ್ ಮೂಲಕವೇ ಅಲ್ಲವೇ? ಈ ಯೋಜನೆ ತಂದವರು ಯಾರು? ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ಹತ್ತು ದೇಶಗಳನ್ನು ತಿರುಗಿ ಅಧ್ಯಯನ ನಡೆಸಿ ವರದಿ ಮಾಡಿದ್ದೆ. ಎಸ್.ಎಂ. ಕೃಷ್ಣ ಅವರು, ಅನಂತಕುಮಾರ್ ಅವರು ಹಾಗೂ ನಾನು ದೆಹಲಿಗೆ ತೆರಳಿ ಅಂದಿನ ಪ್ರಧಾನಿಗಳಾದ ವಾಜಪೇಯಿ ಅವರಿಗೆ ವರದಿ ನೀಡಿದ್ದೆವು. ಹೀಗೆ ಯೋಜನೆ ಪ್ರಾರಂಭವಾಯಿತು” ಎಂದು ಹೇಳಿದರು.

ತೇಜಸ್ವಿ ಸೂರ್ಯ ದೊಡ್ಡ ನಾಯಕ; ಅಮೆರಿಕಾದಲ್ಲಿ ಉಗಿಸಿಕೊಂಡು ಬಂದಿದ್ದ

ಸಂಸದ ತೇಜಸ್ವಿ ಸೂರ್ಯ, ಶಾಸಕ ರಾಮಮೂರ್ತಿಗೆ ಶಿವಕುಮಾರ್ ಧಮ್ಕಿ ಹಾಕುತ್ತಿದ್ದಾರೆ ಎನ್ನುವ ಅಶೋಕ್ ಅವರ ಆರೋಪದ ಬಗ್ಗೆ ಕೇಳಿದಾಗ, “ನಾನೇಕೆ ಧಮ್ಕಿ ಹಾಕಲಿ? ರಾಮಮೂರ್ತಿ ನಮ್ಮ ಹುಡುಗ. ತೇಜಸ್ವಿ ಸೂರ್ಯ ದೊಡ್ಡ ನಾಯಕ, ಅತೀ ಬುದ್ದಿವಂತ. ಅದಕ್ಕೆ ವಿಮಾನದ ತುರ್ತು ನಿರ್ಗಮನ ದ್ವಾರವನ್ನೇ ತೆರೆಯಲು ಹೋಗಿದ್ದ. ಯಾವುದೇ ಅನುಮತಿ ಇಲ್ಲದೇ ಅಮೆರಿಕ ಅಧ್ಯಕ್ಷ ಟ್ರಂಪ್ ಭೇಟಿ ಮಾಡಲು ಹೋಗಿ ಉಗಿಸಿಕೊಂಡು ಬಂದವನು. ಈಗ ಕಾರಲ್ಲಿ ಓಡಾಡಬೇಡಿ ಎನ್ನುತ್ತಾನೆ. ಮದುವೆಯಾಗುವ ವೇಳೆಯಲ್ಲಿ ಹೊಸ ಕಾರು ಬೇಕು ಎಂದು ಅರ್ಜಿ ನೀಡಿದ್ದ. ದಾಖಲೆ ಬಿಡುಗಡೆ ಮಾಡಿ ಎಂದರೆ ಬಿಡುಗಡೆ ಮಾಡುತ್ತೇವೆ” ಎಂದು ವ್ಯಂಗ್ಯವಾಡಿದರು.

“ಈಗ ಆತ ಹಾಗೂ ಬಿಜೆಪಿ ನಾಯಕರು ಕಾರಲ್ಲಿ ಓಡಾಡುವುದು ಬಿಟ್ಟು ಮೆಟ್ರೋ, ಸಾರ್ವಜನಿಕ ಸಾರಿಗೆ ಬಳಸಲಿ. ಇವರ ನಾಟಕಗಳನ್ನು ಕೇಳುವವರು ಯಾರು? ಆತನಿಗೆ ಮದುವೆಗೆ ಮುಂಚಿತವಾಗಿ ಹೊಸ ಕಾರು ಏಕೆ ಬೇಕಿತ್ತು? ಕಾರಲ್ಲಿ ಓಡಾಡುವುದು ಪ್ರತಿಷ್ಠೆಯೇ? ಸಾಮಾಜಿಕ ಅನಿವಾರ್ಯತೆ ಅವನಿಗೆ ಎದುರಾಯಿತೇ? ರೈಲು, ಮೆಟ್ರೋದಲ್ಲಿ ಓಡಾಡಲು ಬೇಡ ಎಂದವರಾರು?” ಎಂದು ಕಿಡಿ ಕಾರಿದರು.

“ತೇಜಸ್ವಿ ಸೂರ್ಯ ರೈಲು ಯೋಜನೆ ಮಾಡಿ ಎಂದು ಹೇಳುತ್ತಾನೆ. ಆ ಯೋಜನೆ ಮಾಡಲು ಬೆಂಗಳೂರಿನಲ್ಲಿ ಜಾಗ ಎಲ್ಲಿದೆ?‌ ಕೇಂದ್ರ ಸರ್ಕಾರವೇ ಈ ಯೋಜನೆ ಮಾಡಲಿ. ಬಿಆರ್ ಟಿಎಸ್ ಯೋಜನೆ ಮಾಡಲು ಬೆಂಗಳೂರಿನಲ್ಲಿ ಎಲ್ಲಾದರೂ ಜಾಗ ಇದೆಯೇ? ಅವರಿಗೆ ತಲೆ ಇದೆಯೇ? ಇದರಿಂದ ದಿನಕ್ಕೆ ನೂರಾರು ಜನ ಸಾಯಬೇಕಾಗುತ್ತದೆ. ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಅವರು ಬಿಆರ್ ಟಿಎಸ್ ಯೋಜನೆಯಲ್ಲಿ ವಿಫಲರಾದರು” ಎಂದರು.

ಲಾಲ್ ಬಾಗ್ ಹಾಳು ಮಾಡಲು ಮೂರ್ಖನಲ್ಲ

“ನಾನು ಎಲ್ಲಾ ರೀತಿಯ ಅಧ್ಯಯನ ನಡೆಸಿದ್ದೇನೆ. ಲಾಲ್ ಬಾಗ್ ಹಾಳು ಮಾಡಲು ನಾನೇನು ಮೂರ್ಖನಲ್ಲ. ಇದರ ಇತಿಹಾಸವೂ ನನಗೆ ಗೊತ್ತಿದೆ. ಉದ್ಯಾನದಲ್ಲಿ ಎಷ್ಟು ಭಾಗ ಉಪಯೋಗವಾಗುತ್ತಿದೆ, ಉಪಯೋಗವಾಗುತ್ತಿಲ್ಲ ಎಂಬುದು ನನಗೆ ಗೊತ್ತಿದೆ” ಎಂದರು.

“ಯಾವುದೇ ಅಭಿವೃದ್ಧಿ ಕೆಲಸ ಕೈಗೆತ್ತಿಕೊಂಡರೂ ಬಿಜೆಪಿಯವರು ವಿರೋಧ ವ್ಯಕ್ತಪಡಿಸುತ್ತಾರೆ. ಜಾರ್ಜ್ ಅವರ ಸಮಯದಲ್ಲಿ ಸ್ಟೀಲ್ ಬ್ರಿಡ್ಜ್ ‌ಗೆ ವಿರೋಧ ಮಾಡಿದರು. ಒಂದೂ ಪರಿಹಾರ ಹೇಳುವುದಿಲ್ಲ. ಸಹಿ ಸಂಗ್ರಹ ಅಭಿಯಾನ ನಡೆಸಿ ಜನರಲ್ಲಿ ಜಾಗೃತಿ ಮೂಡಿಸಲಿ. ಅಶೋಕ್ ಅವರಲ್ಲಿ ಮನವಿ ಮಾಡುತ್ತೇನೆ. ಅವರ ನೇತೃತ್ವದಲ್ಲಿಯೇ ಸಮಿತಿ ಮಾಡುತ್ತೇವೆ. ಯಾರನ್ನು ಬೇಕಾದರೂ ಅದಕ್ಕೆ ಸೇರಿಸಿಕೊಳ್ಳಲಿ. ಅವರು ಸೂಚಿಸಿದ ತಾಂತ್ರಿಕ ಪರಿಣಿತರನ್ನೇ ಸಮಿತಿಗೆ ಸೇರಿಸೋಣ” ಎಂದು ಹೇಳಿದರು.

ಶಾಸಕರು, ಸಚಿವರು ಅವರವರ ಕೆಲಸಕ್ಕೆ ದೆಹಲಿಗೆ ಹೋಗುತ್ತಾರೆ

ಕಾಂಗ್ರೆಸ್ ‌ನಾಯಕರು ದೆಹಲಿಗೆ ಹೋಗುತ್ತಿರುವುದರ ಬಗ್ಗೆ ಕೇಳಿದಾಗ, “ನಾಯಕರುಗಳು ಅವರವರ ಕೆಲಸಗಳಿಗೆ ಹೋಗುತ್ತಿರುತ್ತಾರೆ. ನಾನು ಬರುವ 5 ಅಥವಾ 6 ನೇ ತಾರೀಖಿನಂದು ಬಿಹಾರಕ್ಕೆ ತೆರಳುತ್ತಿದ್ದೇನೆ. ಕೇಂದ್ರ‌ ನಗರಾಭಿವೃದ್ಧಿ ಸಚಿವರು ಸಭೆ ಕರೆದಿದ್ದಾರೆ. ಇದರ‌ ನಡುವೆ ಕಾವೇರಿ ನದಿ ನೀರಿನ ತೀರ್ಪಿದೆ. ಈ ಬಗ್ಗೆ ವಕೀಲರಿಂದ ವರದಿಯನ್ನು ತರಿಸಿಕೊಂಡಿದ್ದೇನೆ. ಪರಿಸ್ಥಿತಿ ‌ಹೀಗಿರುವಾಗ ದೆಹಲಿಗೆ ಹೋಗಬೇಕಾಗುತ್ತದೆ. ಅದಕ್ಕೆ ರಾಜಕೀಯ ಬಣ್ಣ ಕಟ್ಟಿದರೆ ಹೇಗೆ? ರಾಜಕೀಯ ಕಾರಣಕ್ಕೆ ಹೋಗಲಾಗುತ್ತದೆ ಎಂದು ತಿಳಿದುಕೊಳ್ಳುವುದು ಏತಕ್ಕೆ? ಶಾಸಕರು, ಸಚಿವರು ಅವರರವರ ಕೆಲಸಗಳಿಗೆ ದೆಹಲಿಗೆ ಹೋಗಲಿ ಬಿಡಿ” ಎಂದರು.

“ಒಂದಷ್ಟು ಜನರಿಗೆ ಬಿಹಾರ, ರಿಜ್ವಾನ್, ಶ್ರೀನಿವಾಸ್ ಮಾನೆ ಸೇರಿದಂತೆ ಇತರಿಗೆ ಒರಿಸ್ಸಾ ರಾಜ್ಯಗಳ ಜವಾಬ್ದಾರಿ ನೀಡಿದ್ದಾರೆ. ಸಂಸದ ತುಕಾರಾಂ ಅವರಿಗೆ ಜಿಲ್ಲಾ ಕಾಂಗ್ರೆಸ್ ‌ಅಧ್ಯಕ್ಷರನ್ನು ನೇಮಕ‌ ಮಾಡಲು, ಸಂಘಟನೆ ವಿಚಾರವಾಗಿ ಕಳುಹಿಸಲಾಗಿದೆ. ಹಾಗೆಂದ ಮಾತ್ರಕ್ಕೆ ಎಲ್ಲದರಲ್ಲೂ ರಾಜಕೀಯ ಇರುತ್ತದೆಯೇ” ಎಂದರು.

ಭಾರತಕ್ಕೆ ಜಯವಾಗಲಿ

ಮಹಿಳಾ ಕ್ರಿಕೆಟ್ ವಿಶ್ವಕಪ್ ಪೈನಲ್ ಪಂದ್ಯಾವಳಿ ಬಗ್ಗೆ ಕೇಳಿದಾಗ, “ಜಯ ಎಂದಿಗೂ ಭಾರತದ ಪರವಾಗಿ ಇರುತ್ತದೆ. ನಮ್ಮವರಿಗೆ ಶುಭವಾಗಲಿ” ಎಂದು ಮಹಿಳಾ ಕ್ರಿಕೆಟ್ ವಿಶ್ವಕಪ್ ನಲ್ಲಿ ವನಿತೆಯರು ಗೆಲುವು ಸಾಧಿಸಲಿ ಎಂದು ಹಾರೈಸಿದರು.

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!