The tunnel project is driving the economy to the brink: R. Ashoka outraged

ಸುರಂಗ ರಸ್ತೆ ಯೋಜನೆಯಿಂದ ಆರ್ಥಿಕ ಸ್ಥಿತಿ ಪಾತಾಳಕ್ಕೆ: ಆರ್‌.ಅಶೋಕ ಆಕ್ರೋಶ

ಬೆಂಗಳೂರು: ಸುರಂಗ ರಸ್ತೆ ಯೋಜನೆಯ ಮೂಲಕ ಸಸ್ಯಕಾಶಿ ಲಾಲ್‌ಬಾಗ್‌ಗೆ ಕಾಂಗ್ರೆಸ್‌ ಸರ್ಕಾರ ಗುಂಡಿ ತೋಡುತ್ತಿದೆ. ಈ ಯೋಜನೆಯಿಂದ ನಗರದ ಆರ್ಥಿಕ ಸ್ಥಿತಿ ಪಾತಾಳಕ್ಕೆ ಹೋಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಆಕ್ರೋಶ ವ್ಯಕ್ತಪಡಿಸಿದರು.

ಲಾಲ್‌ಬಾಗ್‌ನಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಬೆಂಗಳೂರಿನ ಸಸ್ಯಕಾಶಿಗೆ ಕಾಂಗ್ರೆಸ್‌ ಸರ್ಕಾರ ಗುಂಡಿ ತೋಡುತ್ತಿದೆ. ಈ ಅನ್ಯಾಯದ ವಿರುದ್ಧ ಬಿಜೆಪಿ ಶಾಸಕರ ವತಿಯಿಂದ ಪ್ರತಿಭಟಿಸುತ್ತಿದ್ದೇವೆ. ಪರಿಸರವಾದಿಗಳು, ಲಾಲ್‌ಬಾಗ್‌ ವಿಹಾರಿಗಳು ಇದಕ್ಕೆ ಕೈ ಜೋಡಿಸಿದ್ದಾರೆ.

ನಗರದಲ್ಲಿ ಶೇ.90 ರಷ್ಟು ಜನರು ಮಧ್ಯಮ ವರ್ಗ ಹಾಗೂ ಬಡವರಾಗಿದ್ದಾರೆ. ಈ ವರ್ಗವನ್ನು ಕಡೆಗಣಿಸಿ ಶೇ.10 ರಷ್ಟು ವಿಐಪಿಗಳಿಗಾಗಿ ಸುರಂಗ ರಸ್ತೆ ಯೋಜನೆ ರೂಪಿಸಿ 8,000 ಕೋಟಿ ರೂ. ಸಾಲ ಪಡೆಯಲಾಗಿದೆ. ಗುತ್ತಿಗೆದಾರರಿಗೆ ಜಿಬಿಎ 4,000 ಕೋಟಿ ರೂ. ಪಾವತಿಸಬೇಕಿದೆ. ಪಾಲಿಕೆಯ ಆದಾಯವೇ 3,000 ಕೋಟಿ ಇರುವಾಗ, ಸಾಲ ಮಾಡಿ ಯೋಜನೆ ರೂಪಿಸಿದರೆ, ಬೆಂಗಳೂರಿನ ಆರ್ಥಿಕ ಸ್ಥಿತಿ ಪಾತಾಳಕ್ಕೆ ಹೋಗಲಿದೆ ಎಂದರು.

ಅತಿ ಹಳೆಯ ಶಿಲೆಗಳು ಬೆಂಗಳೂರಿನ ನೆಲದಾಳದಲ್ಲಿದೆ. ಇದರ ಮೇಲೆ ನಾಡಪ್ರಭು ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದ್ದಾರೆ. ಈ ಶಿಲೆಗಳು ಇರುವುದರಿಂದಲೇ ಭೂಕಂಪವಾಗಲ್ಲ. ಇದಕ್ಕೆ ಜಿಯೋಲಾಜಿಕಲ್‌ ಸರ್ವೆ ಆಫ್‌ ಇಂಡಿಯಾದಿಂದ ಅನುಮತಿ ಸಿಕ್ಕಿಲ್ಲ. ಲಾಲ್‌ಬಾಗ್‌ ಸಂರಕ್ಷಿತ ಪ್ರದೇಶ ಎಂದು ಫಲಕ ಇಟ್ಟು, ಸರ್ಕಾರವೇ ಅದನ್ನು ಉಲ್ಲಂಘಿಸುತ್ತಿದೆ. 18 ಕಿ.ಮೀ. ಸುರಂಗ ಕೊರೆದರೆ ಟ್ರಾಫಿಕ್‌ ಕಡಿಮೆಯಾಗುವುದಾದರೆ ನಾವೇ ಅದಕ್ಕೆ ಬೆಂಬಲ ನೀಡುತ್ತೇವೆ. ಶೇ.70 ರಷ್ಟು ದ್ವಿಚಕ್ರ ವಾಹನ ಚಾಲಕರಿರುವಾಗ, ಕಾರಿನ ಚಾಲಕರಿಗಾಗಿ ಸುರಂಗ ರಸ್ತೆ ನಿರ್ಮಿಸಲಾಗುತ್ತಿದೆ. ಈಗಿನ ರಸ್ತೆಗಳ ಮೇಲಿರುವ ಗುಂಡಿಗಳನ್ನು ಮೊದಲು ಸರಿಪಡಿಸಲಿ ಎಂದು ಆಗ್ರಹಿಸಿದರು.

ನಗರದ ರಸ್ತೆ ಗುಂಡಿ ಮುಚ್ಚಲು ಸಿಎಂ ಸಿದ್ದರಾಮಯ್ಯ ಒಂದು ವಾರ ಗಡುವು ನೀಡಿದ್ದರೂ ಅದಕ್ಕೆ ಅಧಿಕಾರಿಗಳು ಸ್ವಲ್ಪವೂ ಬೆಲೆ ನೀಡಿಲ್ಲ. ಈ ಬಗ್ಗೆ ಗಮನ ಕೊಡದೆ ಸುರಂಗ ಯೋಜನೆ ರೂಪಿಸಲಾಗುತ್ತಿದೆ. ಯಾವುದೇ ಯೋಜನೆಗೆ ವರ್ಷಗಟ್ಟಲೆ ಅವಧಿ ಬೇಕಾಗುತ್ತದೆ. ಇನ್ನು ಸುರಂಗ ಮಾಡಲು ಹೊರಟರೆ ಮುಂದಿನ ಪೀಳಿಗೆಗೆ ಆ ಯೋಜನೆ ಸಿಗಬಹುದು. ಒಬ್ಬ ಚಾಲಕ ಒಂದು ವಾರ ಸುರಂಗ ರಸ್ತೆಯಲ್ಲಿ ಹೋದರೆ, 20 ಸಾವಿರ ರೂ. ಶುಲ್ಕ ಪಾವತಿಸಬೇಕಾಗುತ್ತದೆ ಎಂದರು.

ದುಬಾರಿ ಯೋಜನೆ

ಸುರಂಗ ಕೊರೆಯಲು ಯಂತ್ರವನ್ನು ಜರ್ಮನಿ, ಜಪಾನ್‌ನಿಂದ ತರುವ ವೇಳೆಗೆ ಈ ಸರ್ಕಾರ ಇರುವುದಿಲ್ಲ. ಒಂದು ಕಿ.ಮೀ. ಸುರಂಗ ಕೊರೆದು ರಸ್ತೆ ಮಾಡಲು 1,285 ಕೋಟಿ ರೂ. ಬೇಕು. ಇದು ಕೃತಕ ಉಪಗ್ರಹ ಉಡಾವಣೆ ಮಾಡುವುದಕ್ಕಿಂತಲೂ ದುಬಾರಿಯಾಗಿದೆ. ಇದೇ ಹಣದಲ್ಲಿ 5 ಕಿ.ಮೀ. ಮೆಟ್ರೋ ಮಾರ್ಗ ನಿರ್ಮಿಸಬಹುದು. ಮೆಟ್ರೊದಲ್ಲಿ ಪ್ರತಿ ದಿನ 60,000 ಜನರು ಪ್ರಯಾಣಿಸಬಹುದು. ಮೆಟ್ರೊ ಯೋಜನೆ ವಿಸ್ತರಣೆ ಮಾಡಿದರೆ ನಗರದ ಟ್ರಾಫಿಕ್‌ ಕಡಿಮೆಯಾಗಲಿದೆ ಎಂದರು.

ಖಾಸಗಿ ಜಾಗದಲ್ಲಿ ಮಾಡಿದರೆ ಭೂ ಸ್ವಾಧೀನಕ್ಕೆ ಹೆಚ್ಚು ಪರಿಹಾರ ಕೊಡಬೇಕಾಗುತ್ತದೆ. ಸರ್ಕಾರ ಪಾಪರ್‌ ಆಗಿರುವುದರಿಂದ ಉದ್ಯಾನ ಹಾಗೂ ಕೆರೆಗಳನ್ನು ಹುಡುಕಿ ಅಲ್ಲಿ ಸುರಂಗ ಕೊರೆಯಲು ಗುರುತಿಸಲಾಗಿದೆ. ಈ ಯೋಜನೆ ಜಾರಿಯಾದರೆ ಉದ್ಯಾನ ಹಾಗೂ ಕೆರೆಗಳು ನಾಶವಾಗಲಿದೆ. ಇದು ಅವಾಸ್ತವವಾದ ಯೋಜನೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ್‌ ಉದ್ಯಮಿಗಳಿಗೆ ಹಾಗೂ ಚಿತ್ರ ನಟರಿಗೆ ಧಮಕಿ ಹಾಕಿದ್ದಾರೆ. ಈಗ ಸಂಸದ ತೇಜಸ್ವಿ ಸೂರ್ಯ ಅವರಿಗೂ ಧಮಕಿ ಹಾಕುತ್ತಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್‌ನ ಧಮಕಿ ನಡೆಯಲ್ಲ ಎಂದರು.

ರಾಜಕೀಯ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

ಆರನೇ ಗ್ಯಾರಂಟಿಯಾಗಿ ಭೂಮಿ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

“ತುಂಗಭದ್ರಾ ಅಣೆಕಟ್ಟಿನ 30 ಟಿಎಂಸಿ ನೀರು ಸಮುದ್ರಕ್ಕೆ ಸೇರುತ್ತಿರುವುದನ್ನು ತಪ್ಪಿಸಲು ಈ ಭಾಗದ ನಾಯಕರು ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ನಾನು ಇದಕ್ಕೆ ಬದ್ಧನಾಗಿದ್ದೇನೆ. ಆದರೆ ಆಂಧ್ರ ಸಿಎಂ ಈ ವಿಚಾರವಾಗಿ ಚರ್ಚೆ ಮಾಡಲು

[ccc_my_favorite_select_button post_id="119228"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!