Astrology: There is a possibility of making profits in business

ದಿನ ಭವಿಷ್ಯ: ಈ ರಾಶಿಯವರು ತಪ್ಪು ಆಗದಂತೆ ಎಚ್ಚರಿಕೆ ವಹಿಸಬೇಕು

Astrology: ಸೋಮವಾರ, ನವೆಂಬರ್ 03, 2025, ದೈನಂದಿನ ರಾಶಿ ಭವಿಷ್ಯ l

ಮೇಷ ರಾಶಿ

ಈ ರಾಶಿಯವರ ಎಲ್ಲಾ ಕೆಲಸಗಳು ಯಶಸ್ವಿಯಾಗಿ ಪೂರ್ಣ ಗೊಳ್ಳುವ ಸಾಧ್ಯತೆ ಇದೆ. ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಿ. ಉದ್ಯೋಗದ ಸಂದರ್ಭದಲ್ಲಿ ಕೆಲಸಗಳ ಮೇಲೆ ಗಮನ ಹೆಚ್ಚಿಸಬೇಕು. ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. (ಭಕ್ತಿಯಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ

ಕಚೇರಿ ಕೆಲಸವನ್ನು ಸಾಮರಸ್ಯದಿಂದ ಇತ್ಯರ್ಥಪಡಿಸಲು ಪ್ರಯತ್ನಿಸಿ. ಚಿನ್ನ,ಬೆಳ್ಳಿ ಕೆಲಸ ಮಾಡುವ ವ್ಯಾಪಾರಸ್ಥರಿಗೆ ಕೆಲಸ ಸಿಗಬಹುದು ಇಲ್ಲವೇ ಬೆಲೆ ಹೆಚ್ಚಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ವಾಹನ ಚಾಲನೆ ಮಾಡುವಾಗ ಅಥವಾ ನಡೆಯುವಾಗ ನೀವು ಜಾಗರೂಕರಾಗಿರಬೇಕು. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ

ಈ ರಾಶಿಯ ಜನರು ಸದಾ ಸೇವಾ ಮನೋಭಾವನೆಯನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳಬೇಕು. ಇತರರ ಸೇವೆಯಿಂದ ಆಧ್ಯಾತ್ಮಿಕ ಸಂತೋಷವನ್ನು ಪಡೆಯ ಲಾಗುತ್ತದೆ. ವ್ಯಾಪಾರ ಕ್ಷೇತ್ರದಲ್ಲಿ ನೀವು ದೊಡ್ಡ ಯಶಸ್ಸುಗಳಿಸುವಿರಿ. (ಭಕ್ತಿಯಿಂದ ಶ್ರೀ ಶಕ್ತಿಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ

ಈ ರಾಶಿಯ ಜನರು ಅನಗತ್ಯ ಕೋಪವನ್ನು ತಪ್ಪಿಸಬೇಕು. ಅನಗತ್ಯ ಕೋಪದಿಂದ ನಿಮ್ಮ ಆರೋಗ್ಯವು ಹದಗೆಡುತ್ತದೆ. ವ್ಯಾಪಾರಿಗಳಿಗೆ ಲಾಭದ ಪರಿಸ್ಥಿತಿ ಇರುತ್ತದೆ. ವಿದ್ಯಾರ್ಥಿಗಳು ಕಷ್ಟಕರವಾದ ವಿಷಯಗಳ ಮೇಲೆ ಹೆಚ್ಚು ಗಮನಹರಿಸಬೇಕು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ

ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಜನರಿಗೆ ಒಳ್ಳೆಯ ಸುದ್ದಿ ಸಿಗಲಿದೆ. ಬಟ್ಟೆ ವ್ಯಾಪಾರಿಗಳು ಉತ್ತಮ ಲಾಭಗಳಿಸಬಹುದು. ಸಾಮಾಜಿಕ ವಲಯದಲ್ಲಿ ಗುರು ಅಥವಾ ಶಿಕ್ಷಕರ ಮಾರ್ಗದರ್ಶನ ಸಿಗಲಿದೆ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು)

ಕನ್ಯಾ ರಾಶಿ

ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವವರು ತಪ್ಪು ಆಗದಂತೆ ಎಚ್ಚರಿಕೆ ವಹಿಸಬೇಕು. ಬದಲಾಗುತ್ತಿರುವ ಕಾಲಕ್ಕೆ ತಕ್ಕಂತೆ ಮುಂದುವರಿಯಿರಿ. ಜಾಗತಿಕ ಸಾಂಕ್ರಾಮಿಕ ರೋಗವು ಮತ್ತೆ ಹೆಚ್ಚಾಗಲಾರಂಭಿಸಿದೆ, ಅದರ ಬಗ್ಗೆ ಎಚ್ಚರದಿಂದಿರಿ ಮತ್ತು ಸಂಪೂರ್ಣ ರಕ್ಷಣೆ ತೆಗೆದುಕೊಳ್ಳಿ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ

ಈ ರಾಶಿಯ ಜನರ ಕೆಲಸದ ಸ್ಥಳಾಂತರ ಸಾಧ್ಯತೆಗಳಿವೆ. ವ್ಯಾಪಾರ ಮತ್ತು ಹಣದ ವ್ಯವಹಾರವನ್ನು ಬಹಳ ಎಚ್ಚರಿಕೆಯಿಂದ ಮಾಡಿ. ನಿಮ್ಮ ಕುಟುಂಬದಲ್ಲಿ ಕೆಲವು ದುಃಖದ ಸುದ್ದಿಗಳನ್ನು ಸಹ ಕಾಣಬಹುದು.(ಭಕ್ತಿಯಿಂದ ಶ್ರೀ ಗಾಯತ್ರಿ ದೇವಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ

ಕೆಲಸ ಕಾರ್ಯ ಗಳಲ್ಲಿ ತಲ್ಲೀನತೆ. ಸರಕಾರಿ ಉದ್ಯೋಗಗಳಲ್ಲಿ ಸಫ‌ಲತೆ.ಗುರು ಹಿರಿಯರಿಂದ ಪ್ರೋತ್ಸಾಹ ಆಶೀರ್ವಾದ. ಉನ್ನತ ಅಧಿಕಾರಿಯೊಂದಿಗೆ ಒಳ್ಳೆಯ ವಿಚಾರದ ಬಗ್ಗೆ ಚರ್ಚೆ ಮಾಡಲಿದ್ದೀರಿ. ನಿಮ್ಮ ಸಲಹೆಯನ್ನು ಅಧಿಕಾರಿಗಳು ಅಳವಡಿಸಿಕೊಳ್ಳುತ್ತಾರೆ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಶುಭ ವಾಗುವುದು.)

ಧನಸ್ಸು ರಾಶಿ

ಸೌಮ್ಯತೆಯನ್ನು ತರಲು ಪ್ರಯತ್ನಿಸಿ. ಈ ದಿನ ನಿಮ್ಮ ಅಧಿಕೃತ ಕೆಲಸವನ್ನು ಸಮಯಕ್ಕೆ ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಕುಟುಂಬ ವಿಷಯಗಳಲ್ಲಿ ಪ್ರೀತಿಪಾತ್ರರ ಸಲಹೆಯ ಅಗತ್ಯ ವಿರುತ್ತದೆ. (ಭಕ್ತಿಯಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ

ನೀವು ನಿಮ್ಮ ಗುರಿಯತ್ತ ಗಮನ ಹರಿಸಬೇಕು. ಮನೆಯ ದೊಡ್ಡ ಜವಾಬ್ದಾರಿಗಳು ನಿಮ್ಮ ಹೆಗಲ ಮೇಲೆ ಬೀಳಬಹುದು. ಇದಕ್ಕಾಗಿ ನೀವು ಸಿದ್ಧರಾಗಿರಬೇಕು. (ಭಕ್ತಿಯಿಂದ ಶ್ರೀ ಸವಿತೃ ಸೂರ್ಯ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ

ಈ ರಾಶಿಯ ಜನರು ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ ಕೆಲಸವನ್ನು ಪೂರ್ಣಗೊಳಿಸಲು ಪ್ರಯತ್ನಿಸುತ್ತಾರೆ. ರಾಜಕೀಯದಲ್ಲಿ ಆಸಕ್ತಿ ಹೊಂದಿರುವವರಿಗೆ ಈಗ ಅವಕಾಶಗಳು ಸಿಗುವ ಸಾಧ್ಯತೆ ಇದೆ, ಅವರು ಪ್ರಯತ್ನಿಸಬೇಕು. ನೀವು ಅಧೀನ ಅಧಿಕಾರಿಗಳ ಬಗ್ಗೆ ಉತ್ತಮ ನಡವಳಿಕೆ ಯನ್ನು ಹೊಂದಿರಬೇಕು. ನೀವು ಆರೋಗ್ಯದ ಬಗ್ಗೆ ಜಾಗೃತರಾಗಿರ ಬೇಕು.(ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಶುಭವಾಗುವುದು.)

ಮೀನ ರಾಶಿ.

ಇತರರಿಗೆ ಸಲಹೆ ನೀಡ ಬೇಕಾದರೆ ಬುದ್ಧಿವಂತಿಕೆಯಿಂದ ಮಾಡಬೇಕು. ಹೋಟೆಲ್ – ರೆಸ್ಟೋರೆಂಟ್ ವ್ಯಾಪಾರಿಗಳು ಉತ್ತಮ ಲಾಭ ಗಳಿಸಬಹುದು. ಯಾವುದಕ್ಕೂ ಹೆಚ್ಚು ಚಿಂತಿಸುವ ಅಗತ್ಯವಿಲ್ಲ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ತಿಥಿ: ತ್ರಯೋದಶಿ
ನಕ್ಷತ್ರ: ಉತ್ತರಾಭಾದ್ರ ನಕ್ಷತ್ರ

ರಾಹುಕಾಲ: 07:30AM ರಿಂದ 09:00AM
ಗುಳಿಕಕಾಲ: 01:30PM ರಿಂದ 03:00PM
ಯಮಗಂಡಕಾಲ: 10:30AM ರಿಂದ 12:00PM

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: ವಿದ್ವಾನ್ ಎಸ್.ನವೀನ್ M.A., ರಾಜ್ಯ ಜಂಟಿ ಕಾರ್ಯದರ್ಶಿ: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ(ರಿ.) ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ದೊಡ್ಡಬಳ್ಳಾಪುರ. ಮೊ:9620445122

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!