ದೊಡ್ಡಬಳ್ಳಾಪುರ: 2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (Rajyotsava Award) ಪುರಸ್ಕೃತ ಸಿಂಪಾಡಿಪುರ ಗ್ರಾಮದ ವೀಣೆತಯಾರಕ ಪೆನ್ನ ಓಬಳಯ್ಯ ನಿಧನವಾರ್ತೆ ನೋವುಂಟುಮಾಡಿದೆ ಎಂದು ಬೆಂಗಳೂರು ಗ್ರಾಮಾಂತರ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ (B. Mune Gowda) ಹೇಳಿದ್ದಾರೆ.
ಪೆನ್ಮ ಓಬಳಯ್ಯ ಅಗಲಿಕೆಗೆ ಸಂತಾಪ ಸಂದೇಶ ನೀಡಿರುವ ಅವರು, ಸಿಂಪಾಡಿಪುರ ಗ್ರಾಮದಲ್ಲಿ ವೀಣೆ ತಯಾರಿಕೆಯ ಪರಂಪರೆಯನ್ನು ಪ್ರಾರಂಭಿಸಿದ ಪೆನ್ನ ಒಬಳಯ್ಯ ಅವರು ವೀಣೆ ತಯಾರಕರಲ್ಲಿ ಕೆಲಸ ಮಾಡುತ್ತಾ ಕಲೆಯನ್ನು ಕಲಿತರು ಮತ್ತು ನಂತರ ತಮ್ಮ ಗ್ರಾಮ ಸಿಂಪಾಡಿಪುರ ಬಂದು ಈ ಕರಕುಶಲತೆಯನ್ನು ಗ್ರಾಮಸ್ಥರಿಗೆ ಕಲಿಸಿದರು.
ಇಂತಹ ಕಲಾವಿದನಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿದ್ದು ಪ್ರಶಂಸನೀಯವಾದರೂ, ಸರ್ಕಾರಗಳು ತ್ವರಿತವಾಗಿ ಗುರುತಿಸಿ ಪ್ರಶಸ್ತಿ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಅಲ್ಲದೆ ಮೃತರ ಆತ್ಮಕೆ ಶಾಂತಿಯನ್ನು ಕರುಣಿಸಲಿ ಮತ್ತು ದುಃಖತಪ್ತ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.