Don't spread misinformation about the Manjunatha Swamy temple in Dharmasthala: R. Ashoka

BJP ಸುರಂಗ ರಸ್ತೆ ಬೇಡವೆಂದು ಹೇಳುತ್ತಿಲ್ಲ: ಆರ್‌.ಅಶೋಕ

ಬೆಂಗಳೂರು: ಬೆಂಗಳೂರಿನ ಕಸ ವಿಲೇವಾರಿ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆ ವಿರುದ್ಧ ಒಂದು ವಾರ ಬಿಜೆಪಿ ಜನಪ್ರತಿನಿಧಿಗಳ ವತಿಯಿಂದ ಸರ್ಕಾರದ ವಿರುದ್ಧ ಅಭಿಯಾನ ನಡೆಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

ಶಾಸಕರು, ಸಂಸದರೊಂದಿಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಸಮಸ್ಯೆಗಳ ಕುರಿತು ಚರ್ಚಿಸಲು ಎಲ್ಲ ಜನಪ್ರತಿನಿಧಿಗಳ ಸಭೆ ಮಾಡಿದ್ದೇವೆ. ಕಾಂಗ್ರೆಸ್‌ ಸರ್ಕಾರದ ದುರಾಡಳಿತದಿಂದಾಗಿ ಬೆಂಗಳೂರು ಗಾರ್ಬೇಜ್‌ ಸಿಟಿಯಾಗಿ ಬದಲಾಗಿದೆ.

ಎಲ್ಲ ರಸ್ತೆಗಳಲ್ಲಿ ಗುಂಡಿಗಳು ಹಾಗೂ ಕಸದ ರಾಶಿ ಕಂಡುಬರುತ್ತಿದೆ. ನಗರಕ್ಕೆ ದ್ರೋಹ ಬಗೆದ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು ಹಾಗೂ ಒಂದು ವಾರ ಕಾಲ ಪರಿಶೀಲನೆ ನಡೆಸಲು ನಿರ್ಧರಿಸಲಾಗಿದೆ. ಇದರ ಜೊತೆಗೆ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ನವೆಂಬರ್‌ 6 ರಿಂದ 15 ರವರೆಗೆ ಸಹಿ ಸಂಗ್ರಹ ಅಭಿಯಾನ ಮಾಡಲಾಗುವುದು ಎಂದು ತಿಳಿಸಿದರು.

ಎ ಖಾತಾ, ಬಿ ಖಾತಾ ವಿಚಾರವಾಗಿ ಜನರ ಅಭಿಪ್ರಾಯ ಸಂಗ್ರಹಿಸಲಾಗುವುದು. ಇದರಲ್ಲಿ ಸರ್ಕಾರ ದುಡ್ಡು ಹೊಡೆಯುವ ಸ್ಕೀಮು ಮಾಡಿದೆ. ಬೆಂಗಳೂರಿನ ಅಭಿವೃದ್ಧಿಗೆ ಸರ್ಕಾರದ ಬಳಿ ಹಣವಿಲ್ಲ. ಆ ಹಣವನ್ನು ಹೊಂದಿಸಲು ಈ ಕ್ರಮ ತರಬೇಕಿಲ್ಲ. ಇಷ್ಟೊಂದು ಹಣವನ್ನು ಜನರು ಪಾವತಿಸಲು ಸಾಧ್ಯವಿಲ್ಲ.

ನೋಂದಣಿ ಮೇಲೆ 5% ಹೆಚ್ಚಿಸಿ ಕಮಿಶನ್‌ ಹೊಡೆಯಲು ಪ್ರಯತ್ನ ಮಾಡಲಾಗಿದೆ. ಕಸದ ಸೆಸ್‌ ತಂದು ಜನರ ಮೇಲೆ ಹೊರೆ ಹಾಕಲಾಗಿದೆ. ಬೆಸ್ಕಾಂನಲ್ಲಿ ಒಸಿ, ಸಿಸಿ ಮೂಲಕ ಹಣ ಸಂಗ್ರಹಿಸಲಾಗುತ್ತಿದೆ. ತಾತ್ಕಾಲಿಕವಾಗಿ ವಿದ್ಯುತ್‌ ಪಡೆದರೆ ಮೂರು ಪಟ್ಟು ಶುಲ್ಕ ನೀಡಬೇಕಿದ್ದು, ಇದನ್ನೇ ಬೆಸ್ಕಾಂನಿಂದ ಪ್ರೋತ್ಸಾಹಿಸಲಾಗುತ್ತಿದೆ. ಜನರಿಗೆ ಇಂತಹ ದುಬಾರಿ ಬ್ರ್ಯಾಂಡ್‌ ಬೆಂಗಳೂರು ಬೇಕಿಲ್ಲ. ಸಾಮಾನ್ಯ ಜನರ ಬಗ್ಗೆ ಚಿಂತಿಸುವ ಬೆಂಗಳೂರು ಬೇಕಿದೆ ಎಂದರು.

ಸುರಂಗ ರಸ್ತೆ ಬೇಡವೆಂದು ಹೇಳುತ್ತಿಲ್ಲ

ಸುರಂಗ ರಸ್ತೆ ನಿರ್ಮಿಸಲು ಸಾವಿರಾರು ಕೋಟಿ ರೂ. ಖರ್ಚು ಮಾಡುವುದು ಬೇಡ. ಲಾಲ್‌ಬಾಗ್‌ನಂತಹ ಉದ್ಯಾನಗಳನ್ನು ನಾಶ ಮಾಡಿ ರಸ್ತೆ ಮಾಡುವುದು ಬೇಕಿಲ್ಲ. ಈ ಹಿಂದೆ ಉಕ್ಕಿನ ಸೇತುವೆ ನಿರ್ಮಿಸಲು ಮುಂದಾದಾಗ ಕಾಂಕ್ರೀಟ್‌ ರಸ್ತೆ ಮಾಡಿ ಎಂದು ಆಗ್ರಹಿಸಿದ್ದೆವು.

ಈಗಲೂ ಸುರಂಗ ರಸ್ತೆ ಬೇಡವೆಂದು ಹೇಳುತ್ತಿಲ್ಲ. ಆದರೆ ದೆಹಲಿ ನಾಯಕರಿಗೆ ಅನುಕೂಲ ಮಾಡಿಕೊಡಲು ಸುರಂಗ ಕೊರೆಯುವುದು ಬೇಕಿಲ್ಲ. ಈಗಾಗಲೇ 150 ಬಗೆಯ ದರ ಏರಿಕೆಗಳನ್ನು ಮಾಡಲಾಗಿದೆ. ಇದನ್ನು ನಾವು ವಿರೋಧಿಸುತ್ತೇವೆ ಎಂದರು.

ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಬೆಳಗಾವಿ ಹಾಗೂ ಚಾಮರಾಜನಗರದಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ನಾಳೆ ನಾನು ಚಾಮರಾಜನಗರಕ್ಕೆ ಹೋಗಿ ರೈತರ ಅಹವಾಲು ಆಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸುತ್ತೇನೆ ಹಾಗೂ ಪಾದಯಾತ್ರೆ ಮಾಡುತ್ತೇನೆ ಎಂದು ಹೇಳಿದರು.

ಚರ್ಚೆಗೆ ಬನ್ನಿ

ಕೇಂದ್ರ ಸರ್ಕಾರ ಮತ್ತು ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ಬೆಂಗಳೂರಿಗೆ ಎಷ್ಟು ಅನುದಾನ ನೀಡಿದೆ, ಎಷ್ಟು ಅಭಿವೃದ್ಧಿ ಕಾರ್ಯಗಳಾಗಿದೆ ಎಂದು ತಿಳಿಸುತ್ತೇವೆ. ಕಾಂಗ್ರೆಸ್‌ ಎಷ್ಟು ಅಭಿವೃದ್ಧಿ ಮಾಡಿದೆ ಎಂದು ತಿಳಿಸಲಿ. ಸಿಎಂ ಬದಲಾವಣೆ ಆಗಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹಾಗೂ ಡಿ.ಕೆ.ಶಿವಕುಮಾರ್‌ ಸ್ಪಷ್ಟವಾಗಿ ತಿಳಿಸಲಿ.

ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದು ಸ್ಪಷ್ಟೀಕರಣ ತಿಳಿಸಲಿ. ಹೀಗೆ ಹೇಳಿದರೆ ನಾವೇ ಸುಮ್ಮನಾಗುತ್ತೇವೆ. ಇವರಿಬ್ಬರಲ್ಲಿ ಯಾರೇ ಸಿಎಂ ಆದರೂ ಅಭಿವೃದ್ಧಿ ಮಾಡಲ್ಲ ಎಂದರು.

ಮಾಜಿ ಸಚಿವ, ಶಾಸಕರಾಗಿದ್ದ ಎಚ್‌.ವೈ.ಮೇಟಿ ಅವರ ನಿಧನ ಬಹಳ ದುಃಖ ತಂದಿದೆ. ರಾಜಕೀಯ ರಂಗದಲ್ಲಿ ಅವರು ತಮ್ಮದೇ ಛಾಪು ಮೂಡಿಸಿದ್ದರು. ಅವರ ಸೇವೆಯನ್ನು ಜನರು ಯಾವಾಗಲೂ ಸ್ಮರಿಸುತ್ತಾರೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಕೋರುತ್ತೇನೆ ಎಂದರು.

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್ ಕುಮಾರಸ್ವಾಮಿ

ಅಸೆಂಬ್ಲಿ ಚುನಾವಣೆ 2028; 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ NDA ಗೆಲ್ಲುತ್ತೆ ಎಂದ ನಿಖಿಲ್

ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ (NDA) ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="118301"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಗೆ ಗಂಭೀರ ಗಾಯ

ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ (Accident) ಸಂಭವಿಸಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ **** ಹಾಗೂ *** ನಡುವೆ ಸಂಭವಿಸಿದೆ.

[ccc_my_favorite_select_button post_id="118304"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!