Maddur riot case: B.Y. Vijayendra says the police department has completely failed

ಅತಿವೃಷ್ಟಿ, ರೈತರ ಸಂಕಷ್ಟಕ್ಕೆ ಸ್ಪಂದಿಸದ ಸಚಿವರು, ಅಧಿಕಾರಿಗಳು: ಬಿ.ವೈ.ವಿಜಯೇಂದ್ರ ಆಕ್ಷೇಪ

ಬೆಳಗಾವಿ: ಭೀಕರ ಮಳೆಯಿಂದ ತೊಂದರೆಗೆ ಸಿಲುಕಿದ ರೈತರು ರಾಜ್ಯ ಸರಕಾರ ಪರಿಹಾರ ಕೊಡಬೇಕೆಂದು ಒತ್ತಾಯಿಸಿದ್ದಾರೆ. ಆದರೆ, ಜಿಲ್ಲಾ ಉಸ್ತುವಾರಿ ಸಚಿವರು ತಲೆ ಕೆಡಿಸಿಕೊಂಡಿಲ್ಲ; ಇಲಾಖೆಯ ಅಧಿಕಾರಿಗಳೂ ತಲೆ ಕೆಡಿಸಿಕೊಂಡಿಲ್ಲ; ಕಂದಾಯ, ಕೃಷಿ ಸಚಿವರು ಉತ್ತರ ಕರ್ನಾಟಕದ ಪ್ರವಾಸ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಆಕ್ಷೇಪಿಸಿದ್ದಾರೆ.

ಇಂದು ಇಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಳಗಾವಿ, ಬಾಗಲಕೋಟೆ, ಬಿಜಾಪುರ ಜಿಲ್ಲೆ ಸೇರಿ ಈ ಭಾಗದ ಕಬ್ಬು ಬೆಳೆಗಾರರು ಹೋರಾಟ, ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ನ್ಯಾಯಯುತ ಬೇಡಿಕೆಗಳನ್ನು ರಾಜ್ಯ ಸರಕಾರವು ತನ್ನ ಮುಂದಾಳತ್ವದಲ್ಲಿ ಈಡೇರಿಸಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ಗಮನ ಸೆಳೆದರು. ರಾಜ್ಯ ಸರಕಾರವು ರೈತರ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದು, ನಾವು ರೈತರ ಪರವಾಗಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

6 ಮಿಲಿಯ ಟನ್ ಕಬ್ಬು ಅರೆಯುತ್ತಿದ್ದು, ಮೊಲಾಸೆಸ್, ಎಥೆನಾಲ್ ಮೊದಲಾದವುಗಳಿಂದ ರಾಜ್ಯ ಸರಕಾರಕ್ಕೆ ತೆರಿಗೆ ಮೂಲಕ ಸುಮಾರು 50- 55 ಸಾವಿರ ಕೋಟಿ ಆದಾಯ ಬರುತ್ತದೆ. ರಾಜ್ಯ ಸರಕಾರದ ಕರ್ತವ್ಯವೂ ಇರುತ್ತದೆಯಲ್ಲವೇ? ಸರಕಾರವು ಸಂಕಷ್ಟದಲ್ಲಿರುವ ರೈತರ ಸಮಸ್ಯೆ ಆಲಿಸುತ್ತಿಲ್ಲ.

ಈ ಕಾಂಗ್ರೆಸ್ ರೈತರು, ಕಬ್ಬು ಬೆಳೆಗಾರರ ಬಗ್ಗೆ ಎಷ್ಟು ಕಾಳಜಿ ಇದೆ ಎಂದು ರೈತರು ಪ್ರಶ್ನಿಸುತ್ತಿದ್ದಾರೆ ಎಂದರು.
ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರಕಾರವು ತನ್ನ ಜವಾಬ್ದಾರಿ ಅರಿತು ನಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರಕಾರವು ತನ್ನ ಜವಾಬ್ದಾರಿಯನ್ನು ಅರಿತು ಸ್ಪಂದಿಸಿಲ್ಲ

ವಿಪಕ್ಷವಾಗಿ ನಾವು ಹೊಣೆಯರಿತು ಕೆಲಸ ಮಾಡುತ್ತಿದ್ದೇವೆ. ನಾಡಿಗೆ ಅನ್ನ ನೀಡುವ ರೈತರ ವಿಚಾರ ಬಂದಾಗ ಪಕ್ಷಾತೀತವಾಗಿ ನಾವು ರೈತರ ಪರವಾಗಿ ನಿಲ್ಲಬೇಕಾಗುತ್ತದೆ. ಹಾಗಾಗಿ ನಾನು, ನಮ್ಮ ಪಕ್ಷದ ಮುಖಂಡರ ಜೊತೆ ಚರ್ಚೆ ಮಾಡಿ ರೈತರ ಪ್ರತಿಭಟನೆಗೆ ಬೆಂಬಲ ನೀಡಲು ಇಲ್ಲಿ ಬಂದಿದ್ದೇನೆ ಎಂದು ತಿಳಿಸಿದರು.

2014ರಲ್ಲಿ ಬೆಳಗಾವಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದಾಗ ರೈತ ವಿಠಲ ಅರಬಾವಿ ಅವರು ಕಬ್ಬಿನ ದರದ ವಿಚಾರದಲ್ಲಿ ಪ್ರಾಣ ಕಳಕೊಂಡರು. ಯಡಿಯೂರಪ್ಪ ಅವರೂ ಬೀದಿಗಿಳಿದು ಹೋರಾಟ ಮಾಡಿ ಅಂದಿನ ಮುಖ್ಯಮಂತ್ರಿಗಳಿಗೆ 150 ರೂ. ಹೆಚ್ಚುವರಿ ದರಕ್ಕೆ ಒತ್ತಾಯ ಮಾಡಿದ್ದರು. ಅವರ ಹೋರಾಟ ಆಗ ಯಶಸ್ವಿ ಆಗಿತ್ತು ಎಂದು ನೆನಪಿಸಿದರು.

ಸಿಎಂ ಕುರ್ಚಿಗೆ ಯುದ್ಧ

ಮುಖ್ಯಮಂತ್ರಿ ಕುರ್ಚಿಗೆ ಕಳೆದ ಕೆಲವು ದಿನಗಳಿಂದ ಯುದ್ಧ ಪ್ರಾರಂಭವಾಗಿದೆ. ಅದು ಯಾವ ಮಟ್ಟಕ್ಕೆ ಹೋಗಲಿದೆ ಎಂಬುದು ಬಿಹಾರ ಚುನಾವಣೆ ಫಲಿತಾಂಶದ ಬಳಿಕ ಅದು ಗೊತ್ತಾಗಲಿದೆ ಎಂದು ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ನಾಡಿನ ರೈತರು ಇವತ್ತು ಸಂಕಷ್ಟದಲ್ಲಿದ್ದಾರೆ

ಅತಿವೃಷ್ಟಿ ಸಂದರ್ಭದಲ್ಲಿ ನಾನು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸ ಮಾಡಿದ್ದೇನೆ. ಗುಲ್ಬರ್ಗ, ಯಾದಗಿರಿ, ರಾಯಚೂರು- ಈ ಭಾಗದಲ್ಲಿ ನಮ್ಮ ವಿಪಕ್ಷ ನಾಯಕರೂ ಪ್ರವಾಸ ಮಾಡಿದ್ದಾರೆ ಎಂದು ಗಮನಕ್ಕೆ ತಂದರು. ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಸರಕಾರವು ಕೂಡಲೇ ರೈತರ ಸಮಸ್ಯೆಗೆ ಸ್ಪಂದಿಸಬೇಕಿದೆ ಎಂದು ಒತ್ತಾಯಿಸಿದರು.

ರಾಜಕೀಯ

ದೆಹಲಿ ಬಾಂಬ್ ಸ್ಪೋಟವನ್ನು ಬಿಹಾರ ಚುನಾವಣೆಯನ್ನು ಜೋಡಿಸುವ ಷಡ್ಯಂತ್ರ: ಬಿ.ವೈ. ವಿಜಯೇಂದ್ರ ಟೀಕೆ

ದೆಹಲಿ ಬಾಂಬ್ ಸ್ಪೋಟವನ್ನು ಬಿಹಾರ ಚುನಾವಣೆಯನ್ನು ಜೋಡಿಸುವ ಷಡ್ಯಂತ್ರ: ಬಿ.ವೈ. ವಿಜಯೇಂದ್ರ ಟೀಕೆ

ಬಾಂಬ್ ಸ್ಫೋಟದಂಥ ಸಂದಿಗ್ಧ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಟ್ಟಾಗಿ ಒಂದೇ ಧ್ವನಿಯಲ್ಲಿ ಮಾತನಾಡಬೇಕಾಗುತ್ತದೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ( B.Y. Vijayendra) ತಿಳಿಸಿದ್ದಾರೆ.

[ccc_my_favorite_select_button post_id="116125"]
ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾಗೆ ಸಿಎಂ ಸೂಚನೆ

ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸಲು ದ್ರೋಣ್ ಕ್ಯಾಮರಾಗಳ ನಿಗಾ ಹೆಚ್ಚಿಸಿ, ಕೃಪಾಕರ ಸೇನಾನಿ-ಸಂಜಯ್ ಗುಬ್ಬಿ ಸೇರಿದಂತೆ ತಜ್ಞರ ಜೊತೆ ಚರ್ಚಿಸಿ ವೈಜ್ಞಾನಿಕ ಮಾರ್ಗಗಳನ್ನು ರೂಪಿಸಿ ಎನ್ನುವ ಸೂಚನೆಗಳನ್ನು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು

[ccc_my_favorite_select_button post_id="116144"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!