ಕಿರ್ಲೋಸ್ಕರ್ ನಿಂದ ರಾಜ್ಯದಲ್ಲಿ 3,000 ಕೋಟಿ ರೂ. ಹೂಡಿಕೆ: ಎಂ ಬಿ ಪಾಟೀಲ

Kirloskar to invest Rs 3,000 crore in the state: M.B. Patila

ಪುಣೆ: ಕಿರ್ಲೋಸ್ಕರ್ ಫೆರೋಸ್ ಇಂಡಸ್ಟ್ರೀಸ್ ಕರ್ನಾಟಕದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 3,000 ಕೋಟಿ ರೂ. ಬಂಡವಾಳ ಹೂಡಲಿದೆ. ಇದರ ಜೊತೆಗೆ ವಿಪ್ರೋ ಪ್ಯಾರಿ, ಅಟ್ಲಾಸ್ ಕಾಪ್ಕೋ, ಬೆಲ್-ರೈಸ್ ಇಂಡಸ್ಟ್ರೀಸ್, ಫಿನೋಲೆಕ್ಸ್ ಮತ್ತು ಫ್ಲೂಯಿಡ್ ಕಂಟ್ರೋಲ್ಸ್ ಲಿಮಿಟೆಡ್ ಉದ್ಯಮಗಳು ರಾಜ್ಯದಲ್ಲಿ ಹೂಡಿಕೆಗೆ ಆಸಕ್ತಿ ತೋರಿಸಿವೆ. ಬಂಡವಾಳ ತೊಡಗಿಸಲು ಮುಂದಾಗಿರುವ ಈ ಕಂಪನಿಗಳಿಗೆ ಭೂಮಿ, ಮೂಲಸೌಕರ್ಯ ಮುಂತಾದ ಅನುಕೂಲಗಳ ಜೊತೆಗೆ ಹೆಚ್ಚಿನ ಸಹಕಾರ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ (M.B. Patila) ಮಂಗಳವಾರ ಹೇಳಿದ್ದಾರೆ.

ರಾಜ್ಯದ ಕೈಗಾರಿಕೆ ಮತ್ತು ವಾಣಿಜ್ಯ ಉನ್ನತ ಮಟ್ಟದ ನಿಯೋಗದೊಂದಿಗೆ ಇಲ್ಲಿ ರೋಡ್ ಶೋ ನಡೆಸಿದ ಅವರು, ಹೂಡಿಕೆ ಕುರಿತು ಹತ್ತಕ್ಕೂ ಹೆಚ್ಚು ಗಣ್ಯ ಉದ್ಯಮಿಗಳನ್ನು ಭೇಟಿಯಾಗಿ, ಮಾತುಕತೆ ನಡೆಸಿದರು.

ಬಳಿಕ ಮಾತನಾಡಿದ ಸಚಿವರು, `ಕಿರ್ಲೋಸ್ಕರ್ ಫೆರೋಸ್ ಈಗಾಗಲೇ ಹಿರಿಯೂರಿನಲ್ಲಿ ತನ್ನ ಘಟಕ ಹೊಂದಿದ್ದು, ಅದನ್ನು ಮೇಲ್ದರ್ಜೆಗೇರಿಸಲು ಮುಂದಾಗಿದ್ದು, ಇಲ್ಲಿ ಸ್ಪಾಂಜ್ ಪೈಪ್ ಉತ್ಪಾದನೆ ಆರಂಭಿಸಲಿದೆ. ಜೊತೆಗೆ ತನ್ನ ಉಕ್ಕು ಉತ್ಪಾದನೆ ಘಟಕದ ಸಾಮರ್ಥ್ಯ ಹೆಚ್ಚಳ, ಕಬ್ಬಿಣದ ಅದಿರು ಸಂಸ್ಕರಣೆ ಹೆಚ್ಚಳ, ಫೌಂಡ್ರಿ ಘಟಕದ ಅಭಿವೃದ್ಧಿ ಮುಂತಾದ ಯೋಜನೆಗಳನ್ನು ಕೈಗೆತ್ತಿಕೊಳ್ಳಲಿದೆ’ ಎಂದಿದ್ದಾರೆ.

ಈ ಕಂಪನಿಯ ಉದ್ಯೋಗಿಗಳಲ್ಲಿ ಶೇಕಡ 99ರಷ್ಟು ಕನ್ನಡಿಗರೇ ಇದ್ದಾರೆ. ಇದರಿಂದ ಪ್ರಾದೇಶಿಕ ಆರ್ಥಿಕ ಅಭಿವೃದ್ಧಿ ಮತ್ತು ಎಲ್ಲರನ್ನೂ ಒಳಗೊಂಡ ಪ್ರಗತಿ ಸಾಧ್ಯವಾಗಲಿದೆ. ಕಿರ್ಲೋಸ್ಕರ್ ಕಂಪನಿಯು 20 ವರ್ಷಗಳಿಂದಲೂ ತನ್ನ ಆದಾಯದಲ್ಲಿ ಶೇಕಡ 2ರಷ್ಟು ಲಾಭಾಂಶವನ್ನು ಸಿಎಸ್ಆರ್ ನಿಧಿಗೆ ಕೊಡುತ್ತಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸುವ ಗುರಿ ಇದೆ ಎಂದು ಅವರು ತಿಳಿಸಿದ್ದಾರೆ.

ವಿಪ್ರೋ ಪ್ಯಾರಿ ಕಂಪನಿಯು ರಾಜ್ಯದಲ್ಲಿ ಎಲೆಕ್ಟ್ರಾನಿಕ್ಸ್ ಕಾಪರ್ ಲ್ಯಾಮಿನೇಟ್ ಉತ್ಪಾದನಾ ಘಟಕವನ್ನು ಆರಂಭಿಸಿದೆ. ದೊಡ್ಡಬಳ್ಳಾಪುರದ ಸಮೀಪ ಇರುವ ಆದಿನಾರಾಯಣ ಹೊಸಹಳ್ಳಿಯಲ್ಲಿರುವ ಕೆಐಎಡಿಬಿ ನಿವೇಶನದಲ್ಲಿ ಎರಡು ದಿನಗಳ ಹಿಂದೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಇಲ್ಲಿ ಕಂಪನಿಯು ಸ್ಮಾರ್ಟ್ ರೋಬೋಟಿಕ್ಸ್ ಪ್ರಯೋಗಾಲಯ ಸ್ಥಾಪಿಸಲಿದೆ ಎಂದು ಅವರು ವಿವರಿಸಿದ್ದಾರೆ.

ಸುಸ್ಥಿರ ಮಾದರಿಯ ಕೈಗಾರಿಕಾ ಉತ್ಪಾದನೆಗೆ ಹೆಸರಾಗಿರುವ, ಸ್ವೀಡನ್ ಮೂಲದ ಅಟ್ಲಾಸ್ ಕಾಪ್ಕೋ, ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಎಚ್.ಎಚ್.ವಿ. ಪಂಪ್ಸ್ ಕಂಪನಿಯನ್ನು 2021ರಲ್ಲೇ ಸ್ವಾಧೀನ ಪಡಿಸಿಕೊಂಡಿದೆ. ಈಗ ಕಂಪನಿಯು ರಾಜ್ಯದಲ್ಲಿ ತನ್ನ ಉತ್ಪಾದನಾ ಚಟುವಟಿಕೆಯನ್ನು ವಿಸ್ತರಿಸಿಕೊಳ್ಳಲು ಬಯಸಿದೆ. ಹೀಗಾಗಿ ಕಂಪನಿಯ ಉನ್ನತಾಧಿಕಾರಿಗಳಿಗೆ ರಾಜ್ಯದ ಕೈಗಾರಿಕಾ ಕಾರ್ಯಪರಿಸರ, ನೀತಿ ನಿಯಮಗಳನ್ನು ಮನದಟ್ಟು ಮಾಡಿಕೊಡಲಾಗಿದೆ ಎಂದು ಅವರು ನುಡಿದಿದ್ದಾರೆ.

ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಸರು ಮಾಡಿರುವ ಬೆಲ್-ರೈಸ್ ಇಂಡಸ್ಟ್ರೀಸ್, ಈಗಾಗಲೇ ಕೋಲಾರದ ನರಸಾಪುರ ಮತ್ತು ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶಗಳಲ್ಲಿ ಘಟಕಗಳನ್ನು ಹೊಂದಿದೆ. ಇತ್ತೀಚೆಗೆ ಇದು ಎಚ್-ಒನ್ ಪ್ರೈವೇಟ್ ಲಿಮಿಟೆಡ್ ಕಂಪನಿಯನ್ನು ಸ್ವಾಧೀನಕ್ಕೆ ತೆಗೆದುಕೊಂಡಿದ್ದು, ರಾಜ್ಯದಲ್ಲಿ ತನ್ನ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸಿಕೊಳ್ಳಲು ತೀರ್ಮಾನಿಸಿದ್ದು ಮೈಸೂರಿನಲ್ಲಿ 25 ಎಕರೆ ಭೂಮಿ ಕೇಳಿದೆ. ಇದನ್ನು ಪರಿಶೀಲಿಸಲಾಗುವುದು ಎಂದು ಪಾಟೀಲ ಹೇಳಿದ್ದಾರೆ.

ಫಿನೋಲೆಕ್ಸ್ ಕಂಪನಿಯು ಪಿವಿಸಿ ಪೈಪ್, ಬಿಡಿಭಾಗಗಳ ಉತ್ಪಾದನೆಗೆ ಹೆಸರಾಗಿದೆ. ಇದು ರಾಜ್ಯದಲ್ಲಿ ತನ್ನದೊಂದು ಘಟಕ ಸ್ಥಾಪಿಸಬೇಕು ಎನ್ನುವುದು ರಾಜ್ಯ ಸರಕಾರದ ನಿರೀಕ್ಷೆಯಾಗಿದೆ. ಹಾಗೆಯೇ, ಫ್ಲೂಯಿಡ್ ಕಂಟ್ರೋಲ್ಸ್ ಲಿಮಿಟೆಡ್ 90 ಕೋಟಿ ರೂ. ಹೂಡಿಕೆಗೆ ಮುಂದಾಗಿದ್ದು, 5 ಎಕರೆ ಭೂಮಿ ಬೇಕೆಂದು ಕೇಳಿದೆ. ಇದನ್ನು ಕ್ಷಿಪ್ರವಾಗಿ ಈಡೇರಿಸಲಾಗುವುದು ಎಂದು ಸಚಿವರು ವಿವರಿಸಿದ್ದಾರೆ.

ಸಚಿವರು ವಿಪ್ರೋ ಪ್ಯಾರಿ ಕಂಪನಿಯ ಸಿಇಒ ವಿಪುಲ್ ಟಂಡನ್, ಸಿಎಫ್ಒ ಶ್ರೀಪಾದ್ ರಾಮನಾಥನ್, ಬೆಲ್-ರೈಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀಕಾಂತ್ ಬಾಡ್ವೆ, ಫ್ಲೂಯಿಡ್ ಕಂಟ್ರೋಲ್ಸ್ ಲಿ.ನ ಸಿಇಒ ಡಾ.ತಾನಸೇನ್ ಚೌಧರಿ, ಫಿನೋಲೆಕ್ಸ್ ಇಂಡಸ್ಟ್ರೀಸ್ ವ್ಯವಸ್ಥಾಪಕ ನಿರ್ದೇಶಕ ಉದೀಪ್ತ್ ಅಗರವಾಲ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಸರಕಾರದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಮುಂತಾದವರಿದ್ದರು.

ರಾಜಕೀಯ

ಖರ್ಗೆ, ಕಾಂಗ್ರೆಸ್ಸಿಗೆ ಪ್ರಧಾನಿಯವರ ಜನಪ್ರಿಯತೆ ಸಹಿಸಿಕೊಳ್ಳಲು ಆಗುತ್ತಿಲ್ಲ: ಬಿ.ವೈ. ವಿಜಯೇಂದ್ರ

ಖರ್ಗೆ, ಕಾಂಗ್ರೆಸ್ಸಿಗೆ ಪ್ರಧಾನಿಯವರ ಜನಪ್ರಿಯತೆ ಸಹಿಸಿಕೊಳ್ಳಲು ಆಗುತ್ತಿಲ್ಲ: ಬಿ.ವೈ. ವಿಜಯೇಂದ್ರ

ಇಡೀ ವಿಶ್ವವೇ ನರೇಂದ್ರ ಮೋದಿಜೀ ಅವರ ನಾಯಕತ್ವವನ್ನು ಒಪ್ಪಿಕೊಳ್ಳುವ ಸಂದರ್ಭದಲ್ಲಿ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿಜೀ ಅವರನ್ನು ಭಯೋತ್ಪಾದಕರೆಂದು ಹೇಳಿದ್ದು ಬಿಜೆಪಿ ಮಾತ್ರವಲ್ಲದೇ ಇಡೀ ದೇಶ ಇದನ್ನು ಬಲವಾಗಿ ಖಂಡಿಸುತ್ತದೆ ಎಂದು

[ccc_my_favorite_select_button post_id="121263"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!