ಬೆಂಗಳೂರು: ನವೆಂಬರ್ 19 ರಂದು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವದ ಅಂಗವಾಗಿ ಅಕ್ಕಾಪಡೆಗೆ (AkkaPade) ಚಾಲನೆ ನೀಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಈ ಕುರಿತಂತೆ ಅವರು ಗೃಹ ಸಚಿವರಾದ (ಡಾ. ಜಿ.ಪರಮೇಶ್ವರ) DR. G Parameshwara ಅವರ ಬೆಂಗಳೂರಿನ ನಿವಾಸಕ್ಕೆ ಭೇಟಿ ನೀಡಿ, ಮಾಹಿತಿ ನೀಡಿದ್ದಾರೆ.
ಇದೇ ವೇಳೆ ಪರಮೇಶ್ವರ್ ಅವರು ಹಲವು ಸಲಹೆ, ಸೂಚನೆಗಳನ್ನು ನೀಡಿದ್ದು, ಅವುಗಳನ್ನು ಯೋಜನೆಯಲ್ಲಿ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎನ್ನಲಾಗಿದೆ.
ಬಾಲ್ಯವಿವಾಹ ನಿಯಂತ್ರಣಕ್ಕೆ ಹತ್ತು ಹಲವು ಕ್ರಮವಹಿಸಿದರೂ, ಹಲವು ಜಿಲ್ಲೆಗಳಲ್ಲಿ ಬಾಲ್ಯ ವಿವಾಹ ಪ್ರಕರಣ ಬೆಳಕಿಗೆ ಬರುತ್ತಿವೆ. ಇದಕ್ಕೆ ಶಾಶ್ವತವಾಗಿ ತಡೆಯಲು ಪ್ರತ್ಯೇಕ ಕಾರ್ಯ ಪಡೆಯನ್ನು ರಚಿಸಲು ರಾಜ್ಯ ಸರಕಾರ ಮುಂದಾ ಗಿದೆ. ಈ ಹಿಂದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ಅವರು ‘ಅಕ್ಕ’ ಪಡೆಯ ಮೂಲಕ ಬಾಲ್ಯ ವಿವಾಹ ತಡೆಯಲು ಕ್ರಮವಹಿಸುವುದಾಗಿ ಘೋಷಿಸಿದ್ದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಈ ಪಡೆಯ ನಿರ್ವಹಣೆ ಮಾಡಿದರೂ, ಸ್ಥಳೀಯ ಪೊಲೀಸ್ ಠಾಣೆಯ ಮಹಿಳಾ ಪೊಲೀಸರ ನೇತೃತ್ವದಲ್ಲಿ ಕಾರ್ಯನಿರ್ವಹಿಸಲಿದೆ. ಮಹಿಳಾ ಪೊಲೀಸರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಎನ್‌ಸಿಸಿ ಕೆಡೆಟ್‌ಗಳು ಸಹಕಾರ ನೀಡಲಿದ್ದಾರೆ.
ಮುಂದಿನ ದಿನದಲ್ಲಿ ಪೊಲೀಸ್ ಇಲಾಖೆಯ ಮಾದರಿಯಲ್ಲಿಯೇ ‘ಅಕ್ಕ’ ಪಡೆಯಿಂದ ಪ್ರತ್ಯೇಕ ಗಸ್ತು ವಾಹನಗಳನ್ನು ನಿಯೋಜಿಸಲಾಗುವುದು. ಬಸ್ ನಿಲ್ದಾಣ, ಶಾಲಾ ” ಕಾಲೇಜು, ಮಾರುಕಟ್ಟೆ ಹಾಗೂ ಇತರ ಜನ ಸಂದಣಿ ಪ್ರದೇಶಗಳಲ್ಲಿ ಗಸ್ತು ವಾಹನಗಳನ್ನು ನಿಯೋಜಿಸಲಾಗುತ್ತದೆ ಎಂದು ವಿವರಿಸಿದರು.”
ಅಕ್ಕ ಪಡೆ 2023ರಲ್ಲಿ ಬೀದರ್‌ನಲಿ ಪ್ರಾಯೋಗಿಕವಾಗಿ ಜಾರಿಗೊಳಿಸಿ ಯಶಸ್ವಿಯಾಗಿದೆ. ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮೈಸೂರು, ಬೆಳಗಾವಿ, ಮಂಗಳೂರು ಜಿಲ್ಲೆಗಳಲ್ಲಿ 2ನೇ ಹಂತದ ಪ್ರಾಯೋಗಿಕ ಪಡೆಗ ಳನ್ನು ಆರಂಭಿಸಲಾಗಿತ್ತು. ಇದೀಗ ರಾಜ್ಯಾದ್ಯಂತ ವಿಸ್ತರಿಸಲು ಇಲಾಖೆ ಮುಂದಾಗಿದೆ.