I would not have lost if Aadhaar card was linked to voter ID; Nikhil Kumaraswamy

ಜೆಡಿಎಸ್ – ಬಿಜೆಪಿ ಮೈತ್ರಿ ನೋಡಿ ಕಾಂಗ್ರೆಸ್ ನವರು ಬೆಚ್ಚಿ ಬಿದ್ದಿದ್ದಾರೆ; ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಅನ್ನ ನೀಡುವ ರೈತನನ್ನೇ ಕಾಪಾಡದ ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರ ಇದ್ದು ಏನು ಪ್ರಯೋಜನ ?ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ತೀವ್ರ ವಾಗ್ದಾಳಿ ನಡೆಸಿದರು.

ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಉಸ್ತುವಾರಿ ಸಮಿತಿ ಸಭೆಯ ನಂತರ ಮಾಧ್ಯಮಗಳ ಜತೆ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿದರು.

ರೈತ ವಿರೋಧಿ ಕಾಂಗ್ರೆಸ್ ಸರ್ಕಾರ

ಬೆಳಗಾವಿಯಲ್ಲಿ ರೈತರು ಏಳು ದಿನದಿಂದ ಹೋರಾಟ ಮಾಡ್ತಿದ್ದಾರೆ, ಸಿಎಂ, ಉಸ್ತುವಾರಿ ಸಚಿವರು ಇದರ ಬಗ್ಗೆ ಚಕಾರ ಎತ್ತಿಲ್ಲಾ. ಅನ್ನ ಕೊಡುವ ರೈತನನ್ನೇ ಕಾಪಾಡದ ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರ ಇದ್ದು ಪ್ರಯೋಜನ ಏನು.? ಆಕ್ರೋಶ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳೇ ಸಕ್ಕರೆ ಕಾರ್ಖಾನೆ ಮಾಲೀಕರ ಲಾಬಿಗೆ ಮಣಿದು ಕಬ್ಬು ಬೆಳೆಯುವ ರೈತರನ್ನು ಬಲಿಪಶು ಮಾಡಬೇಡಿ. ಕಬ್ಬು ಬೆಳೆಗಾರರು ವಿಚಾರದಲ್ಲಿ ರಾಜಕಾರಣ ಮಾಡದೇ, ರೈತರ ಬೆನ್ನೆಲುಬಾಗಿ ನಿಲ್ಲುವ ಕೆಲಸ ಮಾಡಬೇಕು.ನಾವು ಕೂಡ ಶೀಘ್ರವಾಗಿ ಕಬ್ಬು ಬೆಳೆಗಾರನ್ನು ಭೇಟಿಯಾಗಿ, ಅವರ ಹೋರಾಟಕ್ಕೆ ಬೆಂಬಲ ನೀಡುತ್ತೇವೆ ಎಂದು ನಿಖಿಲ್ ಅವರು ಭರವಸೆ ನೀಡಿದರು.

ಜೆಡಿಎಸ್-ಬಿಜೆಪಿ ಮೈತ್ರಿ ನೋಡಿ ಕಾಂಗ್ರೆಸ್ ಬೆಚ್ಚಿ ಬಿದ್ದಿದದೆ

ಬಿಜೆಪಿ ಜೊತೆ ಜೆಡಿಎಸ್ ವೀಲಿನ ಆಗಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ನಮಗೆ ಸಿಕ್ಕಿದ ಬೆಂಬಲ ನೋಡಿ ಕಾಂಗ್ರೆಸ್ ನವರು ಬೆಚ್ಚಿಬಿದ್ದಿದ್ದಾರೆ. ಆಗಾಗಿ ಈ ರೀತಿ ಮಾತಾಡ್ತಾರೆ ಎಂದು ಕಿಡಿ ಕಾರಿದರು.

ಯಾವ ಪುರುಷಾರ್ಥಕ್ಕೆ ಟನಲ್ ರೋಡ್

GBA ಚುನಾವಣೆಯಿಂದ ಬೆಂಗಳೂರು ನಗರದಲ್ಲಿ ಇಲ್ಲಿವರೆಗೆ 70% ಆದಾಯ ರೆವಿನ್ಯೂ ಕಲೆಕ್ಟ್ ಆಗ್ತಿದೆ. ಅದ್ರೆ ಬೆಂಗಳೂರು ನಗರಕ್ಕೆ ವಾಪಸ್ ಏನ್ ಕೊಟ್ಟಿದ್ದೀರಾ.? ರಸ್ತೆ ಗುಂಡಿಗಳಿಂದ ಹಲವಾರು ಸಾವು ನೋವಾಗಿದೆ. ಅದ್ರೆ ಎಷ್ಟು ಗುಂಡಿಗಳನ್ನ ಮುಚ್ಚಿದ್ದಿರಾ.? ಎಂದು ಆಕ್ರೋಶ ವ್ಯಕ್ತ ಪಡಿಸಿದರು.

ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿ ಮುಚ್ಚಲು ಕೊಟ್ಟಿದ್ದ ಗಡುವು ಮುಗಿದಿದೆ. ಬಿಬಿಎಂಪಿನೇ ಬೆಂಗಳೂರಿನಲ್ಲಿ ಹದಿನೈದು ಸಾವಿರ ರಸ್ತೆ ಗುಂಡಿ ಇದೆ ಅಂತ. ಈಗ ಟನಲ್ ಅಂತ ಕುತ್ತಿದ್ದೀರಾ? ಟನಲ್ ರೋಡ್ ಗೆ ಎಷ್ಟು ಬಜೆಟ್ ಬೇಕು, ಅಲ್ಲಿ ಓಡಾಡೋರು ಯಾರು.? ಬರೀ ಕಾರಿನಲ್ಲಿ ಹೋಗೊಕೆ ಬರೋಕೆ 300 ಕೊಡಬೇಕು. ಸಾರ್ವಜನಿಕ ಸಾರಿಗೆಗೆ ಮನ್ನಣೆ ಕೊಡಿ ಎಂದು ವಾಗ್ದಾಳಿ ನಡೆಸಿದರು.

ಮೊದಲು ಫ್ಲೈಓವರ್ ಮುಗಿಸಿ, ಆಮೇಲೆ ಟನಲ್ ರೋಡ್ ಗೆ ಬನ್ನಿ

ಮೆಟ್ರೊದ ದರವನ್ನ ಹೆಚ್ಚಿಗೆ ಮಾಡಿದ್ದಿರಾ.? ಪ್ರತಿದಿನ ವಿದ್ಯಾರ್ಥಿಗಳು, ದಿನಗೂಲಿ ಕೆಲಸ ಮಾಡುವವರು ಸಂಚಾರ ಮಾಡ್ತಾರೆ. ಎಲ್ಲಾತರದ ವರ್ಗದ ಜನರು ಸಂಚಾರ ಮಾಡ್ತಾರೆ.ಮೊದಲು ಆದ್ರ ದರ ಕಡಿಮೆ ಮಾಡಿ. ಸಾರ್ವಜನಿಕರಿಗೆ ಅನುಕೂಲ ಮಾಡಿ. ಯಾವ ಪುರುಷಾರ್ಥಕ್ಕೆ ಟನಲ್ ರೋಡ್ ಮಾಡ್ತಿದ್ದೀರಿ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಈ ಟನಲ್ ರಸ್ತೆ ಯಾರಿಗಾಗಿ ಮಾಡಲಾಗುತ್ತಿದೆ, ಟನಲ್ ನಿರ್ಮಾಣ ಅವೈಜ್ಞಾನಿಕ ಯೋಜನೆ, ಮೊದಲು ಸಾರ್ವಜನಿಕರಿಗೆ ಉತ್ತಮ ರಸ್ತೆಗಳನ್ನು ಕಲ್ಪಿಸಿ. ಈ ಟನಲ್ ರೋಡ್ ನನ್ನು ನಮ್ಮ ಪಕ್ಷ ಸಂಪೂರ್ಣವಾಗಿ ವಿರೋಧಿಸುತ್ತೇನೆ. ಮೊದಲು ರಸ್ತೆ ಗುಂಡಿ ಮುಚ್ಚಿ ಎಂದು ಸರ್ಕಾರ ವಿರುದ್ಧ ನಿಖಿಲ್ ಅವರು ತೀವ್ರ ವಾಗ್ದಾಳಿ ನಡೆಸಿದರು.

ನಂತರ ಮಂಡ್ಯ ಜಿಲ್ಲೆಯ ಕೆ.ಆ‌ರ್. ಪೇಟೆ ತಾಲ್ಲೂಕು ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ ಅವರು ಭೂ ಸ್ವಾಧೀನವಾಗಿದ್ದ ಜಮೀನಿಗೆ ಸೂಕ್ತ ಪರಿಹಾರ ಸಿಗದಕ್ಕೆ ಮನನೊಂದು ಮಂಡ್ಯ ಜಿಲ್ಲಾಧಿಕಾರಿ ಕಛೇರಿ ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು, ಕೊನೆಯುಸಿರೆಳೆದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಮತ್ತು ಕೆ.ಆರ್.‌ ಪೇಟೆ ಶಾಸಕರಾದ ಹೆಚ್‌.ಟಿ. ಮಂಜು ಅವರು ಆಸ್ಪತ್ರೆಗೆ ಭೇಟಿ ನೀಡಿ, ಮೃತ ರೈತನ ಅಂತಿಮ ದರ್ಶನ ಪಡೆದು, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ರಾಜಕೀಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಸವಾಲು

“ಮನರೇಗಾ ಯೋಜನೆ ಹಾಗೂ ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ (Prahlad Joshi) ಅವರು ಬಹಿರಂಗ ಚರ್ಚೆಗೆ ಬರಲಿ. ಆ ಮೂಲಕ ಜನರಿಗೆ ಈ ವಿಚಾರವಾಗಿ ಜಾಗೃತಿ

[ccc_my_favorite_select_button post_id="118281"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!