ರೈತರ ಕಿಚ್ಚು: ಸರ್ಕಾರ, ನ್ಯೂಸ್ ಚಾನಲ್‌ಗಳ ವಿರುದ್ಧ ಆಕ್ರೋಶ.. Video ನೋಡಿ

Farmers' protest: Outrage against government, news channels

ವಿಜಯಪುರ: ಕಬ್ಬು ಕಾರ್ಖಾನೆಗಳು ಹಾಗೂ ರಾಜ್ಯ ಸರಕಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ (Farmers’ protest) ಬುಧವಾರ 7ನೇ ದಿನಕ್ಕೆ ಕಾಲಿಟ್ಟಿದೆ.

ತೀವ್ರ ಸ್ವರೂಪ ಪಡೆದ ಪ್ರತಿಭಟನೆಗೆ ಸಾಕ್ಷಿಯಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಮೇಲೆ ರೈತರು ಕಲ್ಲು ತೂರಾಟ ನಡೆಸಿದ್ದಾರೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ರೈತರೊಬ್ಬರು ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದರು. ಇದರ ನಂತರ ಪ್ರತಿಭಟನೆ ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿದೆ. ಗುರ್ಲಾಪುರದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜೇಯಂದ್ರ ಭಾಗವಹಿಸಿ, ರೈತರಿಗೆ ಬೆಂಬಲ ನೀಡಿದ್ದಾರೆ.

ಬೆಳಗಾವಿಯ ಜಿಲ್ಲೆಯ ಬಹುತೇಕ ತಾಲೂಕುಗಳಿಗೆ ಪ್ರತಿಭಟನೆ ವ್ಯಾಪಿಸಿದೆ. ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ನ್ಯಾಯವಾದಿಗಳು ಮಾನವ ಸರಪಳಿ ನಿರ್ಮಿಸಿ ರೈತರಿಗೆ ಬೆಂಬಲ ಘೋಷಿಸಿದ್ದಾರೆ. ಅಥಣಿ ತಾಲೂಕಿನಲ್ಲಿ ಕನ್ನಡಪರ ಸಂಘಟನೆಗಳು ರೈತರನ್ನು ಬೆಂಬಲಿಸಿ ಪಟ್ಟಣ ಬಂದ್ ಮಾಡಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ.

ಗೋಕಾಕ್ ಅಥಣಿ ರಸ್ತೆ ವಿವಿಧ ಸ್ಥಳಗಳಲ್ಲಿ ಬಂದ್ ಮಾಡಲಾಗಿದೆ. ದರೂರ ಸೇತುವೆ ಮೇಲಿನ ಸಂಚಾರ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸುತ್ತಿದ್ದು ವಾಹನ ಸವಾರರು ಕಂಗಾಲಾಗಿದ್ದಾರೆ. ಅಷ್ಟೇ ಅಲ್ಲದೆ ಬೈಲಹೊಂಗಲ, ಸವದತ್ತಿ, ಯರಗಟ್ಟಿ, ಹುಕ್ಕೇರಿ, ಗೋಕಾ ಕ್, ರಾಮದುರ್ಗ ಸೇರಿದಂತೆ ಬೆಳಗಾವಿಗೆ ಹೊಂದಿಕೊಂಡ ಉತ್ತರ ಕನ್ನಡ, ವಿಜಯಪುರ, ಬಾಗಲ ಕೋಟೆ ಗಡಿ ಭಾಗದಲ್ಲಿ ರೈತರ ಪ್ರತಿಭಟನೆ ಕಿಚ್ಚು ವ್ಯಾಪಿಸಿದೆ.

ಇನ್ನು ಅಥಣಿಯಲ್ಲಿ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಮಹಾದೇವ ಮಡಿವಾಳ, ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ರೈತರ ಪ್ರತಿಭಟನೆ ಹಿನ್ನಲೆಯಲ್ಲಿ ಕೆಲವು ಕಡೆ ಹೆದ್ದಾರಿ ಬಂದ್ ಆಗಿರುವ ಕಾರಣ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬೇಡಿಕೆಗಳೇನು?

  1. ಮಹಾರಾಷ್ಟ್ರದಲ್ಲಿ ಟನ್ ಕಬ್ಬಿಗೆ 3600 ರು. ಬೆಲೆಯಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಬೆಲೆ ಹೆಚ್ಚಳವಾಗಬೇಕು.
  2. ಕಬ್ಬಿನ ಕಾರ್ಖಾನೆಗಳೇ ಸ್ವತಃ ಕಬ್ಬನ್ನು ಕಟಾವು ಮಾಡಿಕೊಳ್ಳಬೇಕು.
  3. ಕಾರ್ಖಾನೆಯಲ್ಲಿನ ಡಿಜಿಟಲ್ ತೂಕ ಯಂತ್ರದಲ್ಲಾಗುತ್ತಿರುವ ಮೋಸ ನಿಲ್ಲಬೇಕು.
  4. ಕಬ್ಬನ್ನು ನುರಿದಾಗ ಸಿಗುವ ಉಪ ಉತ್ಪನ್ನ ಗಳಲ್ಲೂ ರೈತರಿಗೆ ಸೂಕ್ತ ಹಣ ಸಿಗಬೇಕು.
  5. ಕಬ್ಬು ಹಂಗಾಮು ಆರಂಭಕ್ಕೆ ಮುನ್ನವೇ ಸೂಕ್ತ ದರ ನಿಗದಿಯಾಗಬೇಕು.
  6. ರೈತರಿಗೆ ಸರಕಾರದಿಂದ ಅಗತ್ಯ ನೆರವು ಸಿಗಬೇಕು, ವೈಜ್ಞಾನಿಕ ವ್ಯವಸ್ಥೆ ಬೇಕು ಎಂಬುದಾಗಿದೆ.

ಸರ್ಕಾರದ ನಿರ್ಲಕ್ಷ್ಯದ ಆರೋಪ

ರೈತರು ಬೀದಿಗಿಳಿದು ನಡೆಸುತ್ತಿರುವ ಈ ಹೋರಾಟ ಮೇಲೆ ವಿವರಿಸಿದಂತೆ ಉಗ್ರ ಸ್ವರೂಪ ಪಡೆಯುತ್ತಿದೆ. ಇದಕ್ಕೆ ರಾಜಕೀಯ ಬೆಂಬಲ ದೊರಕಿದ್ದು, ಜೆಡಿಎಸ್, ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದಿವೆ. ಆದರೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಿಲ್ಲಾಧಿಕಾರಿಗಳಿಗೆ ಹೊಣೆ ನೀಡಿದೆಯೇ ಹೊರತು, ಸೂಕ್ತ ಕ್ರಮ ಕೈಗೊಳ್ಳದೆ ಬಿಹಾರ ಚುನಾವಣೆಯತ್ತ ಗಮನ ನೆಟ್ಟಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

ಖಾಸಗಿ ಸುದ್ದಿವಾಹಿನಿಗಳ ವಿರುದ್ಧ ಆಕ್ರೋಶ

ಇನ್ನೂ ಅನ್ನದಾತ ರೈತರ ಬೀದಿಗಿಳಿದು 6 ಹೆದ್ದಾರಿಗಳು ಬಂದ್ ಆಗಿದ್ದರು, ನಾವೇ ಮೊದಲು, ನಮ್ಮಿಂದಲೇ ದೇಶದ ಉದ್ದಾರ ಎನ್ನುವ ಕೆಲ ಖಾಸಗಿ ಸುದ್ದಿವಾಹಿನಿಗಳ ಇತ್ತ ಗಮನಿಸುತ್ತಿಲ್ಲ ಎಂಬ ಆಕ್ರೋಶ ರೈತರದ್ದಾಗಿದೆ.

ಕಳೆದ ಎರಡೂ ವರೆ ವರ್ಷದಿಂದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ಕಿಚ್ಚು ಹಚ್ಚಿ ಸರ್ಕಾರವನ್ನು ಕೆಡವಲು ವರದಿ ಪ್ರಸಾರ ಮಾಡುತ್ತಿವೆ ಎಂಬ ಆಕ್ರೋಶ ಕಾಂಗ್ರೆಸ್ ಬೆಂಬಲಿಗರದ್ದು.

ಇದರ ನಡುವೆ ನಟ ದರ್ಶನ್ ಪ್ರಕರಣದ ಕುರಿತು ಗಂಟೆಗೆ ಒಮ್ಮೆ ವರದಿ ಮಾಡುತ್ತಾ, ಊಹಾಪೋಹ ಕಥೆ ಎಣೆಯುತ್ತಿರುವ ಖಾಸಗಿ ಸುದ್ದಿ ವಾಹಿನಿಗಳು ಮೂಲ ಆದ್ಯತೆ ಮರೆಯುತ್ತಿದ್ದು, ಅಗತ್ಯ ಸುದ್ದಿಗಳನ್ನು ಪ್ರಸಾರ ಮಾಡದೆ ನಿರ್ಲಕ್ಷ್ಯ ವಹಿಸುತ್ತಿವೆ ಎಂದು ಆಕ್ರೋಶ ವೀಕ್ಷಕರದ್ದಾಗಿದೆ.

ಈ ಕುರಿತಂತೆ ಖಾಸಗಿ ಚಾನಲ್‌ಗಳ ವಿರುದ್ಧ ಪ್ರತಿಭಟನೆಯಲ್ಲಿ ರೈತರು ಆಡಿರುವ ಆಕ್ರೋಶದ ನುಡಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜವಬ್ದಾರಿ ಮರೆತವರಿಗೆ ಚಾಟಿ ಏಟು ನೀಡಿದಂತಿದೆ.

ರಾಜಕೀಯ

ಖರ್ಗೆ, ಕಾಂಗ್ರೆಸ್ಸಿಗೆ ಪ್ರಧಾನಿಯವರ ಜನಪ್ರಿಯತೆ ಸಹಿಸಿಕೊಳ್ಳಲು ಆಗುತ್ತಿಲ್ಲ: ಬಿ.ವೈ. ವಿಜಯೇಂದ್ರ

ಖರ್ಗೆ, ಕಾಂಗ್ರೆಸ್ಸಿಗೆ ಪ್ರಧಾನಿಯವರ ಜನಪ್ರಿಯತೆ ಸಹಿಸಿಕೊಳ್ಳಲು ಆಗುತ್ತಿಲ್ಲ: ಬಿ.ವೈ. ವಿಜಯೇಂದ್ರ

ಇಡೀ ವಿಶ್ವವೇ ನರೇಂದ್ರ ಮೋದಿಜೀ ಅವರ ನಾಯಕತ್ವವನ್ನು ಒಪ್ಪಿಕೊಳ್ಳುವ ಸಂದರ್ಭದಲ್ಲಿ ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿಜೀ ಅವರನ್ನು ಭಯೋತ್ಪಾದಕರೆಂದು ಹೇಳಿದ್ದು ಬಿಜೆಪಿ ಮಾತ್ರವಲ್ಲದೇ ಇಡೀ ದೇಶ ಇದನ್ನು ಬಲವಾಗಿ ಖಂಡಿಸುತ್ತದೆ ಎಂದು

[ccc_my_favorite_select_button post_id="121263"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!