ಬೆಂ.ಗ್ರಾ.ಜಿಲ್ಲೆ: ಜಿಲ್ಲಾ ಕೈಗಾರಿಕಾ ಕೇಂದ್ರ ವತಿಯಿಂದ ವಿದ್ಯಾರ್ಥಿಗಳಿಗೆ ಉದ್ಯಮಶೀಲತಾ ಕೌಶಲ್ಯ ಕುರಿತು ಜಾಗೃತಿ ಶಿಬಿರ ಕಾರ್ಯಕ್ರಮವನ್ನು (Students on Entrepreneurship) ನವೆಂಬರ್ 04 ದೇವನಹಳ್ಳಿಯ ಚಾಣುಕ್ಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಉದ್ಯಮಗಳನ್ನು ಪ್ರಾರಂಭಿಸಲು, ಹೊಸ ಉತ್ಪನ್ನಗಳನ್ನು ಅಭಿವೃದ್ಧಿಪಡಿಸಲು ಹಾಗೂ ತಮ್ಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಲು ಅಗತ್ಯವಿರುವ ಬೆಂಬಲ, ಸಂಪನ್ಮೂಲಗಳು ಮತ್ತು ಮಾರ್ಗದರ್ಶನಗಳನ್ನು ಒದಗಿಸುವ ಒಂದು ಪ್ರಕ್ರಿಯೆಯಾಗಿದೆ.
ಇದರಲ್ಲಿ ಉದ್ಯಮಶೀಲತಾ ಕೌಶಲ್ಯಗಳು, ಹೊಸ ಆಲೋಚನೆಗಳು ಮತ್ತು ಮಾರುಕಟ್ಟೆಗಳಲ್ಲಿ ಬೆಳೆಯಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಕಾರ್ಯಕ್ರಮಗಳ ವೇದಿಕೆಯಾಗಲಿದೆ.
ಕೈಗಾರಿಕೆಗಳು, ತಜ್ಞರು ಮತ್ತು ಸರ್ಕಾರಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಉಪನ್ಯಾಸಗಳು, ಮತ್ತು ಪರಾಮರ್ಶಿಸುವ ಅಧಿವೇಶನಗಳು ನಡೆಯಲಿವೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೂರವಾಣಿ ಸಂಖ್ಯೆ 080-29787458 ಗೆ ಸಂಪರ್ಕಿಸಬಹುದು ಎಂದು ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.